ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜನರ ಅನುಕೂಲಕ್ಕೆ ಸ್ವಂತ ಖರ್ಚಿನಲ್ಲಿ ಆಸ್ಪತ್ರೆ ಕಟ್ಟಿಸಿರುವ ಲೀಲಾವತಿ ಅವರ ಮನಸ್ಸು ದೊಡ್ಡದು: ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
 ಜನರ ಅನುಕೂಲಕ್ಕೆ ಸ್ವಂತ ಖರ್ಚಿನಲ್ಲಿ ಆಸ್ಪತ್ರೆ ಕಟ್ಟಿಸಿರುವ ಲೀಲಾವತಿ ಅವರ ಮನಸ್ಸು ದೊಡ್ಡದು: ಸಿಎಂ ಬೊಮ್ಮಾಯಿ

ಬೆಂಗಳೂರು: ನಿಮ್ಮ ಮುಖದಲ್ಲಿನ ಕಳೆ ಅತ್ಯಂತ  ಸುಂದರ. ಇಷ್ಟೆಲ್ಲಾ ಅಂದ ಚಂದ ಇರುವ ನಿಮಗೆ ಅದಕ್ಕಿಂತಲೂ ಅಂದವಾಗಿರುವ ಮನಸ್ಸಿದೆ. ಇಲ್ಲಿ ಜನರಿಗೆ ಅನುಕೂಲವಾಗಲಿ ಎಂದು ಶಾಶ್ವತವಾಗಿ ಆಸ್ಪತ್ರೆ ಕಟ್ಟಿಸಿಕೊಟ್ಟಿರುವ ನಿಮ್ಮ ಮನಸ್ಸು ದೊಡ್ಡದು ಎಂದು ಕನ್ನಡ ಚಿತ್ರರಂಗದ ಹಿರಿಯ ನಟಿ  ಡಾ. ಎಂ. ಲೀಲಾವತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೊಗಳಿದ್ದಾರೆ.

ಅವರು ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿಯಲ್ಲಿ ಇಂದು  ಡಾ:ಎಂ. ಲೀಲಾವತಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಚಿತ್ರಜಗತ್ತಿನ ಚಿರಸ್ಥಾಯಿ ತಾರೆ. ಎವರ್ ಗ್ರೀನ್ ಸ್ಟಾರ್ ಲೀಲಾವತಿ ಅವರು ಎಲ್ಲರಿಗೂ ಅಕ್ಕ. ಲೀಲಾವತಿ ಅವರು ಅಭಿನಯಿಸಿರುವ  ಚಿತ್ರಗಳನ್ನೂ ನೋಡದೇ ಇರುವವರು ಕರ್ನಾಟಕದಲ್ಲಿ ಬಹಳ ಕಡಿಮೆ. ಅವರದ್ದು ಅದ್ಭುತವಾದ ಅಭಿನಯ. ಚಲನಚಿತ್ರದಲ್ಲಿ ಬಹಳ ದಿನ ತಾರೆಯಾಗಿ ಉಳಿಯುವುದು ಕಷ್ಟ. ಆದರೆ ನಿರಂತರವಾಗಿ ಹಲವಾರು ಸವಾಲುಗಳನ್ನು ಎದುರಿಸಿ, ಅಷ್ಟೇ ಸಮಾಧಾನದಿಂದ ಸಕಲರ ಲೇಸು ಬಯಸುವ ದೊಡ್ಡ ಗುಣ ಹೊಂದಿರುವ ಲೀಲಾವತಿಯವರು ಸೋಲದೇವನಹಳ್ಳಿಯಲ್ಲಿ ನೆಲೆಸಿರುವುದು ದೇವರೇ ಅವನ ಪರವಾಗಿ ಕಳುಹಿಸಿಕೊಟ್ಟಂತಿದೆ ಎಂದರು.

ದೂರದ ಶಾಂತ ಪ್ರದೇಶವಾದ, ನಿಸರ್ಗ ಸಂಪತ್ತಿರುವ  ಈ ಸ್ಥಳದಲ್ಲಿ ತಮ್ಮ ತೋಟವನ್ನು ಲೀಲಾವತಿಯವರು ಮಾಡಿಕೊಂಡಿದ್ದಾರೆ. ದೊಡ್ಡಆತ್ಮಶಕ್ತಿ ಅವರಲ್ಲಿದೆ. ಅಸಾಧ್ಯವಾದುದನ್ನು ಮಾಡಿ ಸಾಧಿಸಿದ್ದಾರೆ. ಅಸಾಧ್ಯವಾದುದನ್ನು ಮಾಡಿದರೆ ಸಾಧನೆ ಆಗುವುದು ಎಂದರು.

 
 ಜನರ ಅನುಕೂಲಕ್ಕೆ ಸ್ವಂತ ಖರ್ಚಿನಲ್ಲಿ ಆಸ್ಪತ್ರೆ ಕಟ್ಟಿಸಿರುವ ಲೀಲಾವತಿ ಅವರ ಮನಸ್ಸು ದೊಡ್ಡದು: ಸಿಎಂ ಬೊಮ್ಮಾಯಿ

ಮೇರು ಕಲಾವಿದೆ
ಲೀಲಾವತಿ ಅವರ ಅಭಿನಯದ ಸಿನಿಮಾಗಳನ್ನು ನೋಡಿದರೆ, ಅವರಿಗೆ ಸರಿಸಾಟಿ ಯಾರೂ ಇಲ್ಲ. ಅವರ ನಟನೆ ಮನೋಜ್ಞವಾದುದು. ಯಾವ ಪಾತ್ರವಾದರೂ ಪರಕಾಯಪ್ರವೇಶ ಮಾಡಿ ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ನೀಡಿರುವ ಮೇರು ಕಲಾವಿದೆ ಎಂದರು.

ಹೃದಯ ಶ್ರೀಮಂತಿಕೆ
ನೆಲಮಂಗಲದಲ್ಲಿ ಎಷ್ಟು  ಜನ ಶ್ರೀಮಂತರಿರಬಹುದು, ಆದರೆ ಯಾರೂ ಆಸ್ಪತ್ರೆ, ಶಾಲೆ ಕಟ್ಟಿಸಬೇಕೆಂದು ವಿಚಾರ ಮಾಡಿರಲಿಲ್ಲ. ತಾಯಿ ಲೀಲಾವತಿಯವರು ಇದನ್ನು ಕಟ್ಟಿಸಿ ಅವರ ಹೃದಯ ಶ್ರೀಮಂತಿಕೆ ತೋರುವುದರ ಜೊತೆಗೆ ನಾವೆಲ್ಲಾ ಎಷ್ಟು ಸಣ್ಣವರೆಂದೂ ತೋರಿಸಿದ್ದಾರೆ. ಆಸ್ಪತ್ರೆಯಲ್ಲಿ ಬಡವರಿಗೆ, ಬಡ ಮಕ್ಕಳಿಗೆ ಚಿಕಿತ್ಸೆ ಸಿಗಬೇಕು ಎಂದು ಸರ್ಕಾರಗಳು ಮಾಡಬೇಕಿರುವ ಕೆಲಸ ಮಾಡಿದ್ದೀರಿ. ಇಂಥ ಕಾರ್ಯಕ್ರಮಕ್ಕೆ ನಾನು ಬರದೇ ಹೋದರೆ ನನ್ನ ಕರ್ತವ್ಯಕ್ಕೆ ಚ್ಯುತಿಯಾಗುತ್ತಿತ್ತು. ಈ ಆಸ್ಪತ್ರೆ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಪರಿವರ್ತನೆಯಾಗಬೇಕು. ಅದನ್ನು ಖಂಡಿತವಾಗಿ ಮಾಡುವುದಲ್ಲದೆ, ವೈದ್ಯರ ನೇಮಕಾತಿ ಮುಂತಾದ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಪಶುಚಿಕಿತ್ಸಾಲಯ ಮಂಜೂರು ಮಾಡಲಾಗುವುದು
ಸಮಾಜದಿಂದ ಪಡೆದಿದ್ದನ್ನು ಇಲ್ಲಿನ ಸಮಾಜಕ್ಕೆ ಬಿಟ್ಟು ಹೋದರೆ ನಮ್ಮ ಬದುಕಿನ ಬ್ಯಾಲೆನ್ಸ್ ಶೀಟ್ ಸರಿದೂಗುತ್ತದೆ.  ಪಶು ಚಿಕಿತ್ಸಾಲಯವನ್ನೂ ಕಟ್ಟಿಸಿಕೊಡುವುದಾಗಿ ಹೇಳುವ ಲೀಲಾವತಿಯವರ ಕೊಡಬೇಕೆನ್ನುವ ಹಂಬಲ ಅಪರೂಪದ್ದು. ಬಹಳ ಜನ ಬೇಡುವವರಿದ್ದಾರೆ. ಕೊಡಬೇಕೆನ್ನುವವರು ವಿರಳ. ನೀಡುವವರು  ಎಂದಿಗೂ ಶ್ರೀಮಂತರು. ಕೊಟ್ಟಿದ್ದು  ತನಗೆ ಬಚ್ಚಿಟ್ಟಿದ್ದು ಪರರಿಗೆ ಎಂದು ಸರ್ವಜ್ಞ ಹೇಳಿದ್ದಾನೆ. ಅದನ್ನು ಲೀಲಾವತಿ ಅವರು ನಿಜ ಮಾಡಿ ತೋರಿಸಿದ್ದಾರೆ.  ಲೀಲಾವತಿಯವರ ಬದುಕು ಅನುಕರಣೀಯ.  ಲೀಲಾವತಿಯವರ ಬೇಡಿಕೆಯಂತೆ ಇಲ್ಲಿಗೆ ಖಂಡಿತವಾಗಿಯೂ ಪಶುಚಿಕಿತ್ಸಾಲಯವನ್ನೂ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ