ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಪಾನ್​ ಪ್ರವಾಸ: ಹಿರೋಶಿಮಾದಲ್ಲಿ ಮಹಾತ್ಮ ಗಾಂಧಿ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

Twitter
Facebook
LinkedIn
WhatsApp
ಜಪಾನ್​ ಪ್ರವಾಸ: ಹಿರೋಶಿಮಾದಲ್ಲಿ ಮಹಾತ್ಮ ಗಾಂಧಿ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಹಿರೋಷಿಮಾ: ಜಪಾನ್‌ ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ಅವರು ಜಪಾನ್‌ನ ಹಿರೋಷಿಮಾದಲ್ಲಿ ಇಂದು (ಮೇ20) ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ, ಪ್ರಧಾನಿ ಮೋದಿ ಅವರು ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಜಿ7 ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಶುಕ್ರವಾರ (ಮೇ19) ಸ್ವಾಗತಿಸಿದರು. ಪ್ರಧಾನಿ ಮೋದಿ ಅವರಿಗೆ ಜಪಾನಿನ ಅಧ್ಯಕ್ಷರು ಉಡುಗೊರೆಯಾಗಿ ಬೋಧಿ ವೃಕ್ಷವನ್ನು ನೀಡಿದರು. ನನಗೆ ಇದು ಒಂದು ಉತ್ತಮ ಕ್ಷಣವಾಗಿದೆ, ನಾನು ಜಪಾನ್​​ಗೆ ಬಂದಾಗೆಲ್ಲ ಇಲ್ಲಿಯ ಜನರ ಶಾಂತಿ ಮಹತ್ವವನ್ನು ಅರ್ಥಮಾಡಿಕೊಳ್ಳಬಹುದು. ಜಪನ್​​​ನಲ್ಲಿ ನಾನು ಮಹಾತ್ಮ ಗಾಂಧಿಯವರಿಗೆ ನನ್ನ ಗೌರವವನ್ನು ಸಲ್ಲಿಸಿರುವುದು ಒಂದು ದೊಡ್ಡ ಗೌರವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮೇ 19-21ರವರೆಗೆ ಹಿರೋಷಿಮಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬೇರೆರ ಬೇರೆ ದೇಶ ನಾಯಕರು ಜಪಾನ್‌ನಲ್ಲಿದ್ದಾರೆ. ಜಪಾನ್ 2023ರಲ್ಲಿ G7 ಅಧ್ಯಕ್ಷತೆಯನ್ನು ವಹಿಸಿಕೊಂಡಿದೆ. ಶೃಂಗಸಭೆಯು G7 ಸದಸ್ಯ ರಾಷ್ಟ್ರಗಳಾದ ಫ್ರಾನ್ಸ್, ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಜರ್ಮನಿ, ಜಪಾನ್, ಇಟಲಿ ಮತ್ತು ಕೆನಡಾ ಮತ್ತು ಯುರೋಪಿಯನ್ ಯೂನಿಯನ್ (EU) ನಾಯಕರಿಗೆ ಇದು ವಾರ್ಷಿಕವಾಗಿ ನಡೆಯುವ ಅಂತರರಾಷ್ಟ್ರೀಯ ವೇದಿಕೆಯಾಗಿದೆ.

ಪ್ರಧಾನಿ ಮೋದಿ ಶುಕ್ರವಾರ ನಗರಕ್ಕೆ ಆಗಮಿಸುತ್ತಿದ್ದಂತೆ ಜಪಾನ್‌ನಲ್ಲಿರುವ ಭಾರತೀಯ ವಲಸೆಗಾರರು ಹಿರೋಷಿಮಾದ ಹೋಟೆಲ್‌ನಲ್ಲಿ ಜಮಾಯಿಸಿದ್ದು. “ಭಾರತ್ ಮಾತಾ ಕಿ ಜೈ” ಮತ್ತು “ವಂದೇ ಮಾತರಂ” ಎಂದು ಹರ್ಷೋದ್ಗಾರ ಹಾಕಿದರು. ಅಲ್ಲದೇ ಪ್ರಧಾನಿ ಮೋದಿಗೂ ಅಭಿನಂದಿಸಿದರು.

G7 ಸಭೆಯಲ್ಲಿ ಜಪಾನ್, ಇಟಲಿ, ಕೆನಡಾ, ಫ್ರಾನ್ಸ್, US, UK ಮತ್ತು ಜರ್ಮನಿಯನ್ನು ಒಳಗೊಂಡಿದೆ. ಜಪಾನ್ ತನ್ನ G7 ಅಧ್ಯಕ್ಷತೆಯಲ್ಲಿ ಆಸ್ಟ್ರೇಲಿಯಾ, ಬ್ರೆಜಿಲ್, ಕೊಮೊರೊಸ್, ಕುಕ್ ದ್ವೀಪಗಳು, ಭಾರತ, ಇಂಡೋನೇಷ್ಯಾ, ದಕ್ಷಿಣ ಕೊರಿಯಾ ಮತ್ತು ವಿಯೆಟ್ನಾಂನಿಂದ ನಾಯಕರನ್ನು ಆಹ್ವಾನಿಸಿದೆ.

ಜಿ7 ಶೃಂಗಸಭೆಗೆ ಭಾರತವನ್ನು ಅತಿಥಿ ರಾಷ್ಟ್ರವಾಗಿ ಆಹ್ವಾನಿಸಲಾಗಿದೆ. G7 ಶೃಂಗಸಭೆಯ ಪ್ರಾಶಸ್ತ್ಯಗಳ ವಿಶಾಲವಾದ ನಿಯಮಗಳೆಂದರೆ, ಆಹ್ವಾನಿತ ಅತಿಥಿ ರಾಷ್ಟ್ರಗಳೊಂದಿಗಿನ ಸಂಪರ್ಕಕ್ಕೆ ಸಂಬಂಧಿಸಿದಂತೆ ಪರಮಾಣು ನಿಶ್ಯಸ್ತ್ರೀಕರಣ, ಆರ್ಥಿಕ ಸ್ಥಿತಿಸ್ಥಾಪಕತ್ವ ಮತ್ತು ಆರ್ಥಿಕ ಭದ್ರತೆ, ಪ್ರಾದೇಶಿಕ ಸಮಸ್ಯೆಗಳು, ಹವಾಮಾನ ಮತ್ತು ಶಕ್ತಿ, ಆಹಾರ ಮತ್ತು ಆರೋಗ್ಯ ಮತ್ತು ಅಭಿವೃದ್ಧಿ ಬಗ್ಗೆ ಚರ್ಚಿಸಲಾಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ