ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಗುಂಡಿನ ದಾಳಿ, ವೈದ್ಯ ಸೇರಿ 7 ಮಂದಿ ಸಾವು

Twitter
Facebook
LinkedIn
WhatsApp
J&K: ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ (ಶ್ರೀನಗರ): ಜಮ್ಮು-ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸುರಂಗ ನಿರ್ಮಾಣ ಸ್ಥಳಕ್ಕೆ ಭಯೋತ್ಪಾದಕರು ದಾಳಿ ನಡೆಸಿದ್ದು, ಓರ್ವ ವೈದ್ಯ ಮತ್ತು ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಂದೇರ್‌ಬಾಲ್‌ನ ಗುಂಡ್‌ನಲ್ಲಿ ಸುರಂಗ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮತ್ತು ಇತರ ಸಿಬ್ಬಂದಿ ಸಂಜೆ ತಮ್ಮ ಶಿಬಿರಕ್ಕೆ ಹಿಂದಿರುಗಿದಾಗ ಅಪರಿಚಿತ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯರು ಮತ್ತು ಸ್ಥಳೀಯರಲ್ಲದವರನ್ನು ಒಳಗೊಂಡ ಕಾರ್ಮಿಕರ ಗುಂಪಿನ ಮೇಲೆ ಕನಿಷ್ಠ ಇಬ್ಬರು ಭಯೋತ್ಪಾದಕರು ಗುಂಡು ಹಾರಿಸಿದರು ಎಂದು ನಂಬಲಾಗಿದೆ.

ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬ ವೈದ್ಯ ಮತ್ತು ಇತರ ನಾಲ್ವರು ಅನಂತರ ಸಾವನ್ನಪ್ಪಿದ್ದಾರೆ. ಐದು ಜನರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ಡಾ.ಶಹನವಾಜ್, ಫಹೀಮ್ ನಜೀರ್, ಕಲೀಂ, ಮೊಹಮ್ಮದ್ ಹನೀಫ್, ಶಶಿ ಅಬ್ರೋಲ್, ಅನಿಲ್ ಶುಕ್ಲಾ ಮತ್ತು ಗುರ್ಮೀತ್ ಸಿಂಗ್ ಎಂದು ಗುರುತಿಸಲಾಗಿದೆ.

ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿವೆ ಮತ್ತು ದಾಳಿಕೋರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅವರು ಹೇಳಿದರು.

ಕಾಶ್ಮೀರದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ), ವಿ ಕೆ ಬಿರ್ಡಿ ಸೇರಿದಂತೆ ಉನ್ನತ ಭದ್ರತಾ ಅಧಿಕಾರಿಗಳು ಪರಿಸ್ಥಿತಿಯನ್ನು ನಿರ್ವಹಿಸಲು ಸ್ಥಳಕ್ಕೆ ತಲುಪಿದ್ದಾರೆ.

X ನಲ್ಲಿನ ಪೋಸ್ಟ್‌ನಲ್ಲಿ, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೋನಾಮಾರ್ಗ್ ಪ್ರದೇಶದ ಗಗಂಗೀರ್ ಪ್ರದೇಶದಲ್ಲಿ ನಡೆದ ಘಟನೆಯನ್ನು ಖಂಡಿಸಿದ್ದಾರೆ.

ಘಟನೆಯಲ್ಲಿ ಸಾವುನೋವಿನ ಸಂಖ್ಯೆ ಹೆಚ್ಚಾಗಬಹುದು ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಹೇಳಿದ್ದಾರೆ.

“ಗಗಂಗಿರ್ ದಾಳಿಯಲ್ಲಿ ಗಾಯಗೊಂಡವರ ಸಂಖ್ಯೆ ಅಂತಿಮವಾಗಿಲ್ಲ, ಏಕೆಂದರೆ ಸ್ಥಳೀಯ ಮತ್ತು ಸ್ಥಳೀಯರಲ್ಲದ ಹಲವಾರು ಕಾರ್ಮಿಕರು ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಶ್ರೀನಗರದ ಸ್ಕಿಮ್ಸ್‌ಗೆ ಕಳುಹಿಸಲಾಗುತ್ತಿದ್ದು, ಗಾಯಾಳುಗಳು ಸಂಪೂರ್ಣ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ಹೇಳಿದರು.

ಶುಕ್ರವಾರ, ಶೋಪಿಯಾನ್ ಜಿಲ್ಲೆಯಲ್ಲಿ ಗುಂಡೇಟುಗಳು ಬಿದ್ದಿದ್ದ ಬಿಹಾರದ ಕಾರ್ಮಿಕನೊಬ್ಬನ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಗರಿಕರ ಮೇಲಿನ ಭೀಕರ ಭಯೋತ್ಪಾದಕ ದಾಳಿಯನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತೀವ್ರವಾಗಿ ಖಂಡಿಸಿದ್ದಾರೆ.

“ಈ ಹೇಯ ಕೃತ್ಯದ ಹಿಂದೆ ಇರುವವರಿಗೆ ತಕ್ಕ ಶಿಕ್ಷೆಯಾಗುತ್ತದೆ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ. ನಾವು J&K ಪೊಲೀಸ್, ಸೇನೆ ಮತ್ತು ಭದ್ರತಾ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದ್ದೇವೆ” ಎಂದು X ನಲ್ಲಿನ ಪೋಸ್ಟ್‌ನಲ್ಲಿ ಸಿನ್ಹಾ ಹೇಳಿದ್ದಾರೆ.

ಕಾಶ್ಮೀರದ ಹಲವೆಡೆ ಗ್ರೆನೇಡ್ ದಾಳಿ ನಡೆಸಿದ್ದ ಇಬ್ಬರು ಉಗ್ರರು ಅರೆಸ್ಟ್‌

ಶ್ರೀನಗರ: ಜಮ್ಮು-ಕಾಶ್ಮೀರದ (Jammu and Kashmir) ಘಜ್ನವಿ ಪಡೆಯ (ಜೆಕೆಜಿಎಫ್) ಇಬ್ಬರು ಭಯೋತ್ಪಾದಕರನ್ನು ಪೊಲೀಸರು (Police) ಬಂಧಿಸಿದ್ದಾರೆ.

ಬಂಧಿತರನ್ನು ಹರಿ ಗ್ರಾಮದ ಅಬ್ದುಲ್ ಅಜೀಜ್ ಮತ್ತು ಮನ್ವರ್ ಹುಸೇನ್ ಎಂದು ಗುರುತಿಸಲಾಗಿದೆ. ಇಬ್ಬರು ಪೂಂಚ್‌ನಲ್ಲಿ ಹಲವಾರು ಗ್ರೆನೇಡ್ ದಾಳಿ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಪೊಲೀಸರು, 37ನೇ ರಾಷ್ಟ್ರೀಯ ರೈಫಲ್ಸ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 38 ನೇ ಬೆಟಾಲಿಯನ್ ಪಡೆಗಳೊಂದಿಗೆ ಭಯೋತ್ಪಾದಕ ಅಜೀಜ್‌ನನ್ನು ಬಂಧಿಸಿದ್ದಾರೆ. ಈ ವೇಳೆ 3 ಗ್ರೆನೇಡ್‌ಗಳನ್ನು ಆತನಿಂದ ವಶಪಡಿಸಿಕೊಂಡಿದ್ದಾರೆ. ಹುಸೇನ್‌ನಿಂದ ಪಿಸ್ತೂಲ್, ಒಂದು ಮ್ಯಾಗಜೀನ್ ಮತ್ತು ಒಂಬತ್ತು ಸುತ್ತಿನ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

NAYAN BAKERY

ಧಾರ್ಮಿಕ ಸ್ಥಳಗಳು ಮತ್ತು ಆಸ್ಪತ್ರೆಗಳ ಮೇಲೆ ಗ್ರೆನೇಡ್ ದಾಳಿ, ಭಯೋತ್ಪಾದಕರಿಗೆ ಹಣಕಾಸು ನೆರವು, ದೇಶ ವಿರೋಧಿ ಪ್ರಚಾರ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆ ಸೇರಿದಂತೆ ಭಯೋತ್ಪಾದಕ ಚಟುವಟಿಕೆಗಳಿಗೆ ಜನರನ್ನು ಸಂಘಟಿಸುವಲ್ಲಿ ಇಬ್ಬರೂ ತೊಡಗಿಸಿಕೊಂಡಿದ್ದರು. ಈ ಕಾರ್ಯಾಚರಣೆಯು ಭಯೋತ್ಪಾದಕ ಜಾಲಗಳನ್ನು ಕಿತ್ತುಹಾಕುವಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ.

ವಿಚಾರಣೆ ವೇಳೆ ಇಬ್ಬರೂ ಗಡಿಯಾಚೆಗಿನ ತಮ್ಮ ಹ್ಯಾಂಡ್ಲರ್‌ಗಳಿಂದ ನಾಲ್ಕು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು 1.5 ಲಕ್ಷ ರೂ. ನೆರವು ಪಡೆದಿದ್ದಾರೆ. ಪಿಸ್ತೂಲ್‌ಗಳನ್ನು ನಿರ್ವಹಿಸುವಲ್ಲಿ ತರಬೇತಿ ಪಡೆದಿದ್ದರು ಮತ್ತು ಅರಣ್ಯ ಪ್ರದೇಶದಲ್ಲಿ ಅಭ್ಯಾಸಕ್ಕಾಗಿ ಕೆಲವು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ 15 ರಂದು ಸುರನ್‌ಕೋಟೆಯ ಶಿವ ದೇವಾಲಯದ ಮೇಲೆ ಗ್ರೆನೇಡ್‌ ದಾಳಿ ಪ್ರಕರಣದಲ್ಲಿ ಅಜೀಜ್ ಭಾಗಿಯಾಗಿದ್ದ. ಮಾರ್ಚ್ 26 ರಂದು ಪೂಂಚ್‌ನಲ್ಲಿರುವ ಗುರುದ್ವಾರ ಮಹಂತ್ ಸಾಹಿಬ್, ಜೂನ್‌ನಲ್ಲಿ ಪೂಂಚ್‌ನ ಕಮ್ಸಾರ್‌ನಲ್ಲಿ ಸೇನಾ ಸೆಂಟ್ರಿ ಪೋಸ್ಟ್ ಮತ್ತು ಆಗಸ್ಟ್ 14 ರಂದು CRPF ಸೆಂಟ್ರಿ ಪೋಸ್ಟ್ ಬಳಿ ಶಾಲೆಯ ಮೈದಾನದ ಮೇಲೆ ನಡೆದ ದಾಳಿಯಲ್ಲೂ ಇಬ್ಬರ ಕೈವಾಡ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 18 ರಂದು ಜಿಲ್ಲಾ ಆಸ್ಪತ್ರೆಯ ಕ್ವಾರ್ಟರ್ಸ್ ಬಳಿ ಹುಸೇನ್ ಗ್ರೆನೇಡ್ ದಾಳಿ ನಡೆಸಿದ್ದ. ಇಬ್ಬರು ಸೇರಿ ಸುರನ್‌ಕೋಟೆಯ ವಿವಿಧ ಸ್ಥಳಗಳಲ್ಲಿ ದೇಶ ವಿರೋಧಿ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಇದರಲ್ಲಿ ಹರಿ, ಧುಂಡಕ್, ಸನಾಯಿ, ಈದ್ಗಾ-ಹರಿ ಮತ್ತು ಇತರ ಪಕ್ಕದ ಪ್ರದೇಶಗಳ ಸರ್ಕಾರಿ ಪ್ರೌಢಶಾಲೆ ಸೇರಿದೆ. ಈ ಪೋಸ್ಟರ್‌ಗಳನ್ನು ಹುಸೇನ್‌ನ ಮನೆಯಲ್ಲಿ ಮುದ್ರಿಸಿ, ಸಾರ್ವಜನಿಕರಲ್ಲಿ ಭಯವನ್ನು ಸೃಷ್ಟಿಸಲು ಅಂಟಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist