ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಾಗಿಂಗ್ ಮಾಡುವಾಗ ಕಾರು ಡಿಕ್ಕಿ – ಟೆಕ್ ಸಿಇಒ ಸಾವು

Twitter
Facebook
LinkedIn
WhatsApp
pic 18

ಮುಂಬೈ: ಜಾಗಿಂಗ್‍ಗೆ (Jogging) ಹೋಗಿದ್ದ ತಂತ್ರಜ್ಞಾನ ಸಂಸ್ಥೆಯೊಂದರ ಸಿಇಓಗೆ (Tech CEO) ಕಾರೊಂದು (Car) ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮುಂಬೈನ (Mumbai) ವರ್ಲಿ ಪ್ರದೇಶದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆಯನ್ನು ರಾಜಲಕ್ಷ್ಮಿ ರಾಮಕೃಷ್ಣ (42) ಎಂದು ಗುರುತಿಸಲಾಗಿದೆ. ದಾದರ್ ಮಾತುಂಗಾ ಪ್ರದೇಶದ ನಿವಾಸಿಯಾಗಿರುವ ರಾಜಲಕ್ಷ್ಮಿ ತನ್ನ ಪತಿಯೊಂದಿಗೆ ಬೆಳಗ್ಗೆ ಜಾಗಿಂಗ್ ಹೋಗಿದ್ದರು. ಅಲ್ಲಿಂದ ಹಿಂದಿರುಗುವಾಗ ವರ್ಲಿ ಬಾಂದ್ರಾ ಬಳಿ ಈ ಘಟನೆ ಸಂಭವಿಸಿದೆ. 

ಹಿಂಬದಿಯಿಂದ ವೇಗವಾಗಿ ಬಂದ ಎಸ್‌ಯುವಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ರಾಜಲಕ್ಷ್ಮಿಗೆ ಡಿಕ್ಕಿ ಹೊಡೆದಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಚಾಲಕ ಸುಮರ್ ಮರ್ಚೆಂಟ್ (23)ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ವೇಳೆ ಕಾರಿನ ಚಾಲಕ ಸುಮೇರ್ ಮರ್ಚೆಂಟ್ ಕೂಡ ಗಾಯಗೊಂಡಿದ್ದಾನೆ. ಕಾರು ಚಾಲಕ ಸುಮೇರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾನೆ. ಈತ ಮುಂಬೈನ ತಾರ್ಡಿಯೋ ಪ್ರದೇಶದಲ್ಲಿ ವಾಸವಿದ್ದ. ಘಟನೆಗೆ ಸಂಬಂಧಿಸಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ