ಉಡುಪಿ: ಕಳೆದ ಎರಡು ತಿಂಗಳುಗಳಿಂದ ಜಾಗತಿಕ ಆಂತಕಕ್ಕೆ ಕಾರಣವಾಗಿದ್ದ ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದ್ದು, ಈ ನಡುವೆ ಉಕ್ರೇನ್‌ನಲ್ಲಿ ಜಿಲ್ಲೆಯ ಜನರು ನೆಲೆಸಿದ್ದರೆ, ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ನೀಡುವಂತೆ ಉಡುಪಿ ಜಿಲ್ಲಾಡಳಿತವು ಕೋರಿಕೊಂಡಿದೆ.
ಈ ಬಗ್ಗೆ ಯಾರಾದರೂ ನಮ್ಮವರು ಅಲ್ಲಿ ಸಮಸ್ಯೆಗೆ ಸಿಲುಕಿದ್ದ್ರೆ ಮಾಹಿತಿ ನೀಡಿ, ಅಲ್ಲಿ ಇರುವವರು ಹಾಗೂ ಅಲ್ಲಿ ಸಿಲುಕಿಕೊಂಡಿರುವ ಜನರ ಕುಟುಂಬಸ್ಥರು ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ, ಸಂಖ್ಯೆ: 1077ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾಮ್ ಮನವಿ ಮಾಡಿಕೊಂಡಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದರಿಂದ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಸಹಾಯವಾಣಿ ಆರಂಭಿಸಿದೆ.ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರು ಭಾರತದ ದೂತಾವಾಸ ಮತ್ತು ಸರ್ಕಾರದ ಜೊತೆ ಸಂಪರ್ಕದಲ್ಲಿರಲು ವಿದೇಶಾಂಗ ಇಲಾಖೆಯ 1800118797 (Toll free), +91-11-23012113, +91-11-23014104, +91-11-23017905 ಸಂಪರ್ಕ ಸಂಖ್ಯೆಗೆ ಕರೆ ಮಾಡಬಹುದು. ಅಲ್ಲದೇ Fax: +91-11-23088124, Email: situationroom@mea.gov.in ಮೂಲಕವೂ ಮಾಹಿತಿ ನೀಡಲು ಸರ್ಕಾರ ಸೂಚಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist