ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಿ.ಪಂ, ತಾ.ಪಂ ಚುನಾವಣೆಗೆ 12ವಾರಗಳ ಗಡುವು ನೀಡಿದ ಹೈಕೋರ್ಟ್

Twitter
Facebook
LinkedIn
WhatsApp
ಜಿ.ಪಂ, ತಾ.ಪಂ ಚುನಾವಣೆಗೆ 12ವಾರಗಳ ಗಡುವು ನೀಡಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ.

ಕರ್ನಾಟಕ ಹೈಕೋರ್ಟ್ ಇಂದು(ಮಂಗಳವಾರ) ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ಸರ್ಕಾರಕ್ಕೆ 12 ವಾರಗಳ ಗಡುವು ನೀಡಿದ್ದು, ಅಷ್ಟರಲ್ಲಿ ಕ್ಷೇತ್ರ ಪುನರ್ವಿಂಗಡಣೆ, ಮೀಸಲಾತಿ ನೀಡಲು ಸಮಯಾವಕಾಶ ನೀಡಿದೆ.

ಹಿಂದುಳಿದ ವರ್ಗಗಳಿಗೆ ಮೀಸಲು ಕಲ್ಪಿಸಿ ಚುನಾವಣೆ ನಡೆಸಲು ಸರ್ಕಾರ ಮುಂದಾಗಿದೆ. ಇದೀಗ ಕೋರ್ಟ್, ಸಹ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ ಹೈಕೋರ್ಟ್ 3 ತಿಂಗಳ ಗಡುವು ನೀಡಿದೆ. ಜತೆಗೆ, ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡ ನಂತರದ ಒಂದು ವಾರದ ಬಳಿಕ ಚುನಾವಣಾ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ನಿರ್ದೇಶಿಸಿದೆ. ಅಲ್ಲದೆ, ಯಾವುದೇ ಕಾರಣಕ್ಕೂ ಮತ್ತೆ ಹೆಚ್ಚಿನ ಕಾಲಾವಕಾಶ ಕೇಳದಂತೆ ತಾಕೀತು ಮಾಡಿದೆ.

ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮೆಮೋ ಸಲ್ಲಿಸಿ, ಕ್ಷೇತ್ರ ಪುನರ್ವಿಂಗಡಣೆ, ಮೀಸಲಾತಿಗೆ 12 ವಾರ ಸಮಯಾವಕಾಶ ನೀಡಬೇಕು. ನಿವೃತ್ತ ನ್ಯಾಯಮೂರ್ತಿ ಡಾ.ಕೆ.ಭಕ್ತವತ್ಸಲ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಮೀಸಲು ನಿಗದಿಗೆ ಆಯೋಗ ರಚಿಸಲಾಗಿದೆ ಅದರ ವರದಿಗಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿತ್ತು.

ಸರ್ಕಾರದ ಪರ ವಾದ ಮಂಡಿಸಿದ ಎಜಿ ಪ್ರಭುಲಿಂಗ್ ನಾವದಗಿ ಸಮಯಾವಕಾಶ ಕೋರಿದರು. ಚುನಾವಣೆ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದ ಮಂಡಿಸಿ 12 ವಾರಕ್ಕಿಂತ ಹೆಚ್ಚಿನ ಕಾಲಾವಕಾಶ ನೀಡದಂತೆ ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ಪೀಠ, 12 ವಾರಗಳ ಒಳಗೆ ಸರ್ಕಾರ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಬೇಕು. ಅದಾದ ಒಂದು ವಾರದೊಳಗೆ ಆಯೋಗ ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು. ಸರ್ಕಾರ ಮತ್ತೆ ಯಾವುದೇ ಕಾರಣ ನೀಡಿ ಮತ್ತೆ ಸಮಯ ವಿಸ್ತರಣೆಗೆ ಕೋರುವಂತಿಲ್ಲ ಎಂದು ಹೇಳಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ