ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ

Twitter
Facebook
LinkedIn
WhatsApp
Untitled 18

ಬೆಂಗಳೂರು (ಮೇ 24): ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನು ಗೆಲ್ಲುವುದಕ್ಕೆ ಸಾಧ್ಯವಾಗಿದ್ದು, ಹೀನಾಯ ಸೋಲಿಗೆ ಹೊಣೆಗಾರಿಕೆ ಹೊತ್ತುಕೊಂಡು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ. ಇಬ್ರಾಹಿಂ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಇಬ್ರಾಹಿಂ ಅವರು, ಹೊಸ ಸರ್ಕಾರ ಬಂದಿದೆ. ಅವರಿಗೆ ಶುಭವಾಗಲಿ. ರಾಜ್ಯದಲ್ಲಿ ಬಿಜೆಪಿ ಆಡಳಿತ ವಿರೋಧಿ ಇತ್ತು.  ಇದನ್ನ ಕಾಂಗ್ರೆಸ್ ಅವರು ಹಣದಿಂದ ಮತ್ತೊಂದು ಮಗದೊಂದ ವಿಚಾರದಲ್ಲಿ ಕಾಂಗ್ರೆಸ್ ಗೆದ್ದಿದ್ದಾರೆ. ನಮ್ಮದು ‌ಪ್ರಾದೇಶಿಕ ಪಕ್ಷ. ನಮ್ಮಲ್ಲಿ ದೊಡ್ಡ ಮಟ್ಟದಲ್ಲಿ ಹಣ ಇಲ್ಲ. ನಮಗೆ ಯಾರ ಬೆಂಬಲವೂ ಇರಲಿಲ್ಲ. ಆದರು ನಾವು 60 ಲಕ್ಷ ಮತ ಪಡೆದಿದ್ದೇವೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯ್ತಿ ಹಾಗೂ ಲೋಕಸಭೆ ಚುನಾವಣೆಗೆ ನಾವು ಸಿದ್ದವಾಗಿ ಕೆಲಸ ಮಾಡ್ತೀವಿ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ. ಈ ಮೊದಲು ಚುನಾವಣೆ ವೇಳೆ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಿ. ಮೂರು ತಿಂಗಳು ಅವರಿಗೆ ಸಮಯ ಕೊಡ್ತೀವಿ. ಅವರಿಗೆ ಈ 3 ತಿಂಗಳು ಹನಿಮೂನ್ ಸಮಯವಾಗಿದೆ. ಜನರಿಗೆ ಕೊಟ್ಟ ಭರವಸೆ ಕಾಂಗ್ರೆಸ್ ಅವರು ಈಡೇರಿಸಲಿ. ಜೆಡಿಎಸ್ ನಲ್ಲಿ ಇಬ್ರಾಹಿಂ ಪಾತ್ರ ಏನು ಎಂಬ ಪ್ರಶ್ನೆ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಸದಾ ಜನರ ಮಧ್ಯೆ ಇರೋನು. ಪಕ್ಷದ ಕಾರ್ಯಕರ್ತನಾಗಿ ಕೆಲ‌ಸ ಮಾಡ್ತೀನಿ ಎಂದು ತಿಳಿಸಿದರು.

ನೀವು ಕಾಂಗ್ರೆಸ್‌ನಲ್ಲಿ ಇದ್ದಿದ್ದರೆ ಸಚಿವ ಸ್ಥಾನ ಸಿಗುತ್ತಿತ್ತು ಎಂದು ಮಾಧ್ಯಮಗಳಿಂದ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಗೌರವ ಇಲ್ಲದ ಕಡೆ ನಾನು ಇರೊಲ್ಲ. ಅಂತಹ ಸ್ಥಾನಕ್ಕೆ ನಾನು ಹೋಗಿಲ್ಲ. ಮಾನಕ್ಕಾಗಿ ಹಾಗೂ ಮರ್ಯಾದೆಗಾಗಿಯೇ ನಾನು ಪಕ್ಷವನ್ನು ಬಿಟ್ಟು ಬಂದೆ. ನನಗೆ ಯಾವುದೇ ಅಧಿಕಾರದ ಆಸೆ ಇಲ್ಲವೆಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ