ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜೆಮಿನಿ ಸರ್ಕಸ್ ಸಂಸ್ಥಾಪಕ ಎಂವಿ ಶಂಕರನ್ ನಿಧನ!

Twitter
Facebook
LinkedIn
WhatsApp
AA1afdKt

ಕಣ್ಣೂರು: ಜೆಮಿನಿ ಸರ್ಕಸ್ ಸಂಸ್ಥಾಪಕ ಜೆಮಿನಿ ಶಂಕರನ್ ಅಲಿಯಾಸ್ ಎಂವಿ ಶಂಕರನ್ (99)  ಅವರು ಭಾನುವಾರ ಕಣ್ಣೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ಭಾರತೀಯ ಸರ್ಕಸ್‌ನ ಪ್ರವರ್ತಕರಾಗಿದ್ದ ಜೆಮಿನಿ ಶಂಕರನ್, ಕಳೆದ ಕೆಲ ಸಮಯದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಭಾನುವಾರ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.

1924 ರಲ್ಲಿ ಹುಟ್ಟಿದ ಅವರು, ಮೂರು ವರ್ಷಗಳ ಕಾಲ ಪ್ರಸಿದ್ಧ ಸರ್ಕಸ್ ಕಲಾವಿದ ಕೀಲೇರಿ ಕುಂಞಿಕಣ್ಣನ್ ಅವರಲ್ಲಿ ತರಬೇತಿ ಪಡೆದು, ನಂತರ ಮಿಲಿಟರಿಗೆ ಸೇರಿ, ಎರಡನೇ ಮಹಾಯುದ್ದದ ನಂತರ ನಿವೃತ್ತರಾಗಿದ್ದರು.

ನ್ಯಾಷನಲ್ ಸರ್ಕಸ್ ಮತ್ತು ಗ್ರೇಟ್ ಬಾಂಬೆ ಸರ್ಕಸ್‌ ಸೇರಿದಂತೆ ದೇಶದ ನಾನಾ ಸರ್ಕಸ್‌ ಕಂಪೆನಿಗಳಲ್ಲಿ ಕೆಲಸ ಮಾಡಿದ ಅವರು, ಸ್ನೇಹಿತನೊಂದಿಗೆ ಸೇರಿ 1951 ರಲ್ಲಿ ವಿಜಯ ಸರ್ಕಸ್‌ ಕಂಪೆನಿಯನ್ನು ಖರೀದಿಸಿದ್ದರು. ಬಳಿಕ ಅದನ್ನೇ ಜೆಮಿನಿ ಸರ್ಕಸ್‌ ಎಂದು ನಾಮಕರಣ ಮಾಡಿದ್ದರು. ಇದಾದ ನಂತರ ಜಂಬೋ ಸರ್ಕಸ್ ಕಂಪೆನಿಯನ್ನೂ ಶುರು ಮಾಡಿದ್ದರು.

ಭಾರತದಲ್ಲಿ ಸರ್ಕಸ್‌ ಗೆ ಹೊಸ ರೂಪ ಕೊಟ್ಟಿದ್ದ ಶಂಕರನ್ ಅವರ ಸಾಧನೆಯನ್ನು ಗುರುತಿಸಿ ಅಂದಿನ ಕೇಂದ್ರ ಸರ್ಕಾರ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಅವರು ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ಮೊರಾರ್ಜಿ ದೇಸಾಯಿ ಮತ್ತು ರಾಜೀವ್ ಗಾಂಧಿಯವರೊಂದಿಗೆ ಸೌಹಾರ್ದ ಸಂಬಂಧವನ್ನು ಹೊಂದಿದ್ದರು. ದೇಶದ ಅತ್ಯಂತ ಹಿರಿಯ ಸರ್ಕಸ್ ಕಲಾವಿದರಾಗಿರುವ ಶಂಕರನ್ ಅವರು ಇಂಡಿಯಾ ಸರ್ಕಸ್ ಫೆಡರೇಶನ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಅವರ ಅಂತ್ಯಕ್ರಿಯೆ ಮಂಗಳವಾರ ಕಣ್ಣೂರಿನ ಪಯ್ಯಂಬಳಂನಲ್ಲಿ ನಡೆಯಲಿದೆ. ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅವರು ಅಗಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist