ಜ್ವರದಿಂದ ಬಳಲುತ್ತಿದ್ದಾರೆ ಡಿಕೆ ಶಿವಕುಮಾರ್
Twitter
Facebook
LinkedIn
WhatsApp
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಜ್ವರದಿಂದ ಬಳಲುತ್ತಿದ್ದಾರೆ..
ಕನಕಪುರದಿಂದ ಬೆಂಗಳೂರಿಗೆ ಆಗಮಿಸಿದ ಡಿಕೆಶಿಗೆ ಜ್ವರ ಬಂದಿದೆ. ಹೀಗಾಗಿ ಸದಾಶಿವನಗರ ನಿವಾಸದಲ್ಲಿ ವಿಶ್ರಾಂತಿಗೆ ಮುಂದಾಗಿದ್ದಾರೆ.
ವಿಧಾನಸಭೆ (Karnataka Assembly Election 2023) ಮತದಾನಕ್ಕೆ ಬುಧವಾರ ತೆರೆ ಬಿದ್ದಿದೆ. ಮತದಾನ ಮುಕ್ತಾಯದ ಬಳಿಕ ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ಡಿಕೆ ಶಿವಕುಮಾರ್ ಅವರು ಸ್ಥಳೀಯ ಮುಖಂಡರ ಜೊತೆ ಕನಕಪುರದ ಕೆ.ಎನ್.ಎಸ್. ವೃತ್ತದ ವಾಸು ಹೋಟೆಲ್‍ಗೆ ತೆರಳಿ ಇಡ್ಲಿ ಸವಿದರು. ಅದಾದ ಬಳಿಕ ಚುನಾವಣೆ ಬಗ್ಗೆ ಸ್ಥಳೀಯರ ಜೊತೆ ಮಾತುಕತೆ ನಡೆಸಿ ಕಾಲ ಕಳೆದ ಬಳಿಕ ಬೆಂಗಳೂರಿಗೆ ಆಗಮಿಸಿದ್ದರು.