ಬುಧವಾರ, ಡಿಸೆಂಬರ್ 25, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟರ್ಕಿ ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 8 ಸಾವಿರ; ಗಾಯಾಳುಗಳ ಸಂಖ್ಯೆ 35 ಸಾವಿರ, ರಕ್ಷಣಾ ಕಾರ್ಯಕ್ಕೆ ಅಡಚಣೆ

Twitter
Facebook
LinkedIn
WhatsApp
ಟರ್ಕಿ ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 8 ಸಾವಿರ; ಗಾಯಾಳುಗಳ ಸಂಖ್ಯೆ 35 ಸಾವಿರ, ರಕ್ಷಣಾ ಕಾರ್ಯಕ್ಕೆ ಅಡಚಣೆ

ಟರ್ಕಿ, ಸಿರಿಯಾ ದೇಶಗಳಲ್ಲಿ ಸೋಮವಾರ ಸಂಭವಿಸಿದ ನಾಲ್ಕು ಭೂಕಂಪಗಳಿಂದ ಸಾವಿನ ಸಂಖ್ಯೆ (Death Toll In Turkey Earthquake) ಕ್ಷಣಕ್ಷಣವೂ ಹೆಚ್ಚಾಗುತ್ತಿದೆ. ಬುಧವಾರ ಬೆಳಗಿನ ವರದಿಗಳ ಪ್ರಕಾರ ಸಾವಿನ ಸಂಖ್ಯೆ 7,800 ದಾಟಿದೆ. ಇದು ಅಧಿಕೃತವಾಗಿ ದೃಢಪಟ್ಟ ಸಾವುಗಳು. ಟರ್ಕಿಯೊಂದರಲ್ಲೇ 6 ಸಾವಿರದಷ್ಟು ಮಂದಿ ಸಾವನಪ್ಪಿದ್ದಾರೆ. ಸಿರಿಯಾದಲ್ಲಿ ಸಾವಿನ ಸಂಖ್ಯೆ 2 ಸಾವಿರ ಸಮೀಪವಿದೆ. ಟರ್ಕಿಯಲ್ಲಿ ಗಾಯಾಳುಗಳ ಸಂಖ್ಯೆ 35 ಸಾವಿರಕ್ಕೂ ಹೆಚ್ಚು ಇದ್ದಾರೆ. ಇವರಲ್ಲಿ ಬಹಳಷ್ಟು ಮಂದಿಯ ಸ್ಥಿತಿ ಗಂಭೀರವಾಗಿದೆ. ಅಲ್ಲದೇ, ಭೂಕಂಪದ ಬಳಿಕ ಕಣ್ಮರೆಯಾಗಿರುವವರ ಸಂಖ್ಯೆ ಇನ್ನೂ ಅಧಿಕೃತವಾಗಿ ಲೆಕ್ಕಕ್ಕೆ ಸಿಕ್ಕಿಲ್ಲ. ವಿಶ್ವ ಆರೋಗ್ಯ ಸಂಸ್ಥೆ (WHO) ನಿನ್ನೆ ಮಾಡಿರುವ ಅಂದಾಜು ಪ್ರಕಾರ ಟರ್ಕಿ ಭೂಕಂಪದಲ್ಲಿ ಸಾವಿನ ಸಂಖ್ಯೆ ಕನಿಷ್ಠ 20 ಸಾವಿರವಾದರೂ ಆಗಬಹುದಂತೆ. 

ಇದೇ ವೇಳೆ ಇನ್ನೂ ಬೆಚ್ಚಿಬೀಳಿಸುವ ಸಂಗತಿಯನ್ನು ಭೂಕಂಪ ತಜ್ಞ ಓವಗುನ್ ಅಹ್ಮತ್ ಎರ್ಕಾನ್ ತಿಳಿಸಿದ್ದಾರೆ. ಅವರ ಪ್ರಕಾರ ಕಟ್ಟಡಗಳ ಅವಶೇಷಗಳಡಿ ಸುಮಾರು 1.8 ಲಕ್ಷ ಜನರು ಸಿಲುಕಿರಬಹುದು. ಅವರೆಲ್ಲರೂ ಬಹುತೇಕ ಸಾವನ್ನಪ್ಪಿರಬಹುದು ಎಂದು ಅವರು ಎಕನಾಮಿಸ್ಟ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಅದೇನಾದರೂ ನಿಜವಾದರೆ ಭೂಮಿಯ ಇತಿಹಾಸದಲ್ಲೇ ಅತ್ಯಂತ ಪ್ರಾಣಹಾನಿ ಮಾಡಿದ ಭೂಕಂಪಗಳ ಪೈಕಿ ಟರ್ಕಿಯದ್ದೂ ಒಂದಾಗಬಹುದು.

ಟರ್ಕಿಯಲ್ಲಿ ಒಂದು ಅಂದಾಜು ಪ್ರಕಾರ 11,342 ಕಟ್ಟಡಗಳು ಭೂಕಂಪದಿಂದ ಕುಸಿದುಬಿದ್ದಿವೆಯಂತೆ. ಆದರೆ, ಅಧಿಕೃತ ಲೆಕ್ಕದ ಪ್ರಕಾರ 5,775 ಕಟ್ಟಡಗಳು ಬಿದ್ದಿರುವುದು ದೃಢಪಟ್ಟಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆಯಾದರೂ ಪ್ರತಿಕೂಲ ಹವಾಮಾನದ ಸಮಸ್ಯೆ ಎದುರಾಗಿದೆ. ಆದಾಗ್ಯೂ ಕಟ್ಟಡಗಳ ಅವಶೇಷಗಳ ರಾಶಿಯಿಂದ 8 ಸಾವಿರಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಸುಮಾರು 4 ಲಕ್ಷದಷ್ಟು ಜನರು ಸರ್ಕಾರ ವ್ಯವಸ್ಥೆ ಮಾಡಿದ ವಸತಿಗಳಲ್ಲಿ ಆಶ್ರಯ ಪಡೆದಿದ್ದಾರೆ. ರಕ್ಷಣಾ ಕಾರ್ಯಗಳು ನಡೆದಂತೆ ಶವಗಳ ರಾಶಿ ರಸ್ತೆಗಳಲ್ಲಿ ಗುಡ್ಡೆಯಂತೆ ಬೀಳುತ್ತಿವೆ. ಈ ಶವಗಳ ವಿಲೇವಾರಿ ಮಾಡಲೂ ರಕ್ಷಣಾ ಕಾರ್ಯಕರ್ತರಿಗೆ ಸಮಯ ಇಲ್ಲದಷ್ಟು ಭೀಕರವಾಗಿ ಅಲ್ಲಿನ ಪರಿಸ್ಥಿತಿ.

ಟರ್ಕಿ ದೇಶದಲ್ಲಿ ಈಗ ಮಹಾ ಚಳಿಯ ವಾತಾವರಣ. ಉಷ್ಣಾಂಶ ಶೂನ್ಯಕ್ಕೆ ಬಂದು ನಿಂತಿದೆ. ಸಿರಿಯಾದಲ್ಲಿ ಮಳೆಯ ಕಾಟ ಇದೆ. ಹೀಗಾಗಿ ಈ ಎರಡು ದೇಶಗಳಲ್ಲಿ ರಕ್ಷಣಾ ಕಾರ್ಯಗಳಿಗೆ ತೊಡಕುಂಟಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist