ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್‌ಕೀಪರ್ ಆಗಿ ಹೆಚ್ಚು ಕ್ಯಾಚ್‌ಗಳನ್ನು ಪಡೆದು ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ

Twitter
Facebook
LinkedIn
WhatsApp
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್‌ಕೀಪರ್ ಆಗಿ ಹೆಚ್ಚು ಕ್ಯಾಚ್‌ಗಳನ್ನು ಪಡೆದು ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ

IPL 2023: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಅತ್ಯುತ್ತಮ ಪ್ರದರ್ಶನ ತೋರಿದರು. ಒಂದು ಕ್ಯಾಚ್, ಒಂದು ರನೌಟ್ ಮತ್ತು ಸ್ಟಂಪ್ ಔಟ್ ಮಾಡಿ ವಿಕೆಟ್ ಹಿಂಭಾಗದಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ. ಐಪಿಎಲ್ 2023 ರಲ್ಲಿ ಶುಕ್ರವಾರ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿತು. ಬ್ಯಾಟಿಂಗ್​ನಲ್ಲಿ ಡೆವೋನ್ ಕಾನ್ವೆ ಮಿಂಚಿದರೆ, ಬೌಲಿಂಗ್​ನಲ್ಲಿ ರವೀಂದ್ರ ಜಡೇಜಾ 4 ಓವರ್​ಗೆ 22 ರನ್ ನೀಡಿ ಪ್ರಮುಖ 3 ವಿಕೆಟ್ ಕಿತ್ತರು.

ಈ ಪಂದ್ಯದಲ್ಲಿ ಸಿಎಸ್​ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಅತ್ಯುತ್ತಮ ಪ್ರದರ್ಶನ ತೋರಿದರು. ಒಂದು ಕ್ಯಾಚ್, ಒಂದು ರನೌಟ್ ಮತ್ತು ಸ್ಟಂಪ್ ಔಟ್ ಮಾಡಿ ವಿಕೆಟ್ ಹಿಂಭಾಗದಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ. 

ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ವಿಕೆಟ್‌-ಕೀಪರ್‌ ಎಂಬ ಸಾಧನೆಯನ್ನು 41 ವರ್ಷದ ಎಂಎಸ್ ಧೋನಿ ನಿರ್ಮಿಸಿದ್ದಾರೆ. ಈ ಹಿಂದೆ ಕ್ವಿಂಟನ್ ಡಿಕಾಕ್ ಅವರು ಈ ದಾಖಲೆಯನ್ನು ಹೊಂದಿದ್ದರು. ಇದೀಗ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮೀರಿಸಿದ್ದಾರೆ. ಈ ಪಂದ್ಯಕ್ಕು ಮುನ್ನ ಧೋನಿ ಹಾಗೂ ಡಿಕಾಕ್ ಒಟ್ಟು 207 ಕ್ಯಾಚ್‌ಗಳನ್ನು ಪಡೆದು ನಂಬರ್ 1 ಸ್ಥಾನದಲ್ಲಿದ್ದರು. ಮಹೇಶ್ ತೀಕ್ಷಣ ಅವರ ಬೌಲಿಂಗ್‌ನಲ್ಲಿ ಆ್ಯಡಂ ಮಾರ್ಕ್ರಮ್ ಅವರ ಕ್ಯಾಚ್ ಅನ್ನು ಧೋನಿ ಪಡೆದ ಕೂಡಲೆ ಇತಿಹಾಸ ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಹೈದರಾಬಾದ್‌ ಆರಂಭ ನಿಧಾನ ಗತಿಯಿಂದ ಕೂಡಿತ್ತು. 13 ಎಸೆತಗಳಿಂದ 18 ರನ್‌ ಮಾಡಿ ಬ್ರೂಕ್‌ ಪೆವಿಲಿಯನ್‌ ಸೇರಿಕೊಂಡರು. ದ್ವಿತೀಯ ವಿಕೆಟಿಗೆ ಅಭಿಷೇಕ್‌ ಶರ್ಮ-ರಾಹುಲ್‌ ತ್ರಿಪಾಠಿ 36 ರನ್‌ ಪೇರಿಸಿದರು. 26 ಎಸೆತಗಳಲ್ಲಿ, 3 ಬೌಂಡರಿ, 1 ಸಿಕ್ಸರ್‌ ಮೂಲಕ 34 ರನ್‌ ಮಾಡಿದ ಅಭಿಷೇಕ್‌ ತಂಡದ ಪರ ಗರಿಷ್ಠ ಮೊತ್ತ ಕಲೆಹಾಕಿದರು. ತ್ರಿಪಾಠಿ ಆಟ 21 ರನ್​ಗೆ ಅಂತ್ಯವಾಯಿತು. ನಾಯಕ ಮಾರ್ಕ್‌ರಮ್‌ (12), ಕೀಪರ್‌ ಕ್ಲಾಸೆನ್‌ (17), ಜಾನ್ಸೆನ್‌ (ಅಜೇಯ 17) ಸಿಡಿಯಲು ವಿಫ‌ಲರಾದರು. ಎಸ್​ಆರ್​ಹೆಚ್ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತು. ಜಡೇಜಾ 3 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ಚೆನ್ನೈಗೆ ಉತ್ತಮ ಆರಂಭ ದೊರೆಯಿತು. ಕಾನ್ವೆ ಮತ್ತು​ ಗಾಯಕ್ವಾಡ್ (35 ರನ್) 87 ರನ್​ಗಳ ಜೊತೆಯಾಟ ಮಾಡಿದರು. ರಹಾನೆ 9 ರನ್​ಗೆ ವಿಕೆಟ್​ ಒಪ್ಪಿಸಿದರು. ಅಂಬಟಿ ರಾಯುಡು ಸಹ 9 ರನ್​ಗೆ ಪೆವಿಲಿಯನ್​ ದಾರಿ ಹಿಡಿದರು. ಒಂದೆಡೆ ವಿಕೆಟ್​ ಹೋಗುತ್ತಿದ್ದರೂ ಕಾನ್ವೆ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. 57 ಎಸೆತಗಳಲ್ಲಿ 12 ಬೌಂಡರಿ ಮತ್ತು 1 ಸಿಕ್ಸ್​ನಿಂದ ಅಜೇಯ 77 ರನ್​ ಗಳಿಸಿ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು. ಸಿಎಸ್​ಕೆ 18.4 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿ ಗೆಲುವು ಸಾಧಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ