ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು : ಮೋದಿ ಬಳಿ ಅಫ್ರಿದಿ ಮನವಿ

Twitter
Facebook
LinkedIn
WhatsApp
Online fraud 4 5

ಇಸ್ಲಾಮಾಬಾದ್: ಮುಂಬರುವ ಏಷ್ಯಾಕಪ್ ಕ್ರಿಕೆಟ್ (Aisa Cup 2023) ಟೂರ್ನಿಗೆ ಪಾಕಿಸ್ತಾನದಲ್ಲಿ ಭಾರತ ತಂಡ ಕ್ರಿಕೆಟ್ ಆಡಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವಕಾಶ ಮಾಡಿಕೊಡಬೇಕು ಎಂದು ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ (Shahid Afridi) ಮನವಿ ಮಾಡಿದ್ದಾರೆ.

Ind vs Pak, Asia Cup 2022 - India vs Pakistan - after compelling Round 1,  cricket takes centre stage ahead of Roun | ESPNcricinfo

ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ವೇಳೆ 2023ರ ಏಷ್ಯಾಕಪ್ ಟೂರ್ನಿ ಸಂಬಂಧ ಮಾತನಾಡಿದ ಅವರು, 2023ರ ಏಷ್ಯಾಕಪ್ ಟೂರ್ನಿಗೆ ಪಾಕಿಸ್ತಾನಕ್ಕೆ ಭಾರತ ತಂಡವನ್ನು ಕಳುಹಿಸುವಂತೆ ಮನವಿ ಮಾಡಿದ್ದಾರೆ. ಭಾರತ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಬೇಕು. ಆ ಮೂಲಕ ಉಭಯ ತಂಡಗಳ ನಡುವಣ ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ಉತ್ತಮಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 

ಇಸ್ಲಾಮಾಬಾದ್: ಮುಂಬರುವ ಏಷ್ಯಾಕಪ್ ಕ್ರಿಕೆಟ್ (Aisa Cup 2023) ಟೂರ್ನಿಗೆ ಪಾಕಿಸ್ತಾನದಲ್ಲಿ ಭಾರತ ತಂಡ ಕ್ರಿಕೆಟ್ ಆಡಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವಕಾಶ ಮಾಡಿಕೊಡಬೇಕು ಎಂದು ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ (Shahid Afridi) ಮನವಿ ಮಾಡಿದ್ದಾರೆ.

India vs Pakistan Asia Cup 2022: Where to watch, live streaming, other  details | Mint

ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ವೇಳೆ 2023ರ ಏಷ್ಯಾಕಪ್ ಟೂರ್ನಿ ಸಂಬಂಧ ಮಾತನಾಡಿದ ಅವರು, 2023ರ ಏಷ್ಯಾಕಪ್ ಟೂರ್ನಿಗೆ ಪಾಕಿಸ್ತಾನಕ್ಕೆ ಭಾರತ ತಂಡವನ್ನು ಕಳುಹಿಸುವಂತೆ ಮನವಿ ಮಾಡಿದ್ದಾರೆ. ಭಾರತ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಬೇಕು. ಆ ಮೂಲಕ ಉಭಯ ತಂಡಗಳ ನಡುವಣ ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ಉತ್ತಮಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 

2023ರ ಏಷ್ಯಾಕಪ್ ಟೂರ್ನಿಯ ಆತಿಥ್ಯವನ್ನು ಪಾಕಿಸ್ತಾನಕ್ಕೆ ನೀಡಲಾಗಿದೆ. ಆದರೆ ಕಳೆದ ವರ್ಷ ಬಿಸಿಸಿಐ (BCCI) ಕಾರ್ಯದರ್ಶಿ ಜಯ್ ಶಾ ಅವರು, ಪಾಕಿಸ್ತಾನದಲ್ಲಿ ಏಷ್ಯಾ ಕಪ್ ಟೂರ್ನಿ ನಡೆದರೆ, ಭಾರತ ತಂಡವನ್ನು ಕಳುಹಿಸುವುದಿಲ್ಲ ಎಂದಿದ್ದರು. ಆ ಮೂಲಕ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವಂತೆ ಏಷ್ಯಾ ಕ್ರಿಕೆಟ್ ಕೌನ್ಸಿಲ್ ಬಳಿ ಮನವಿ ಸಲ್ಲಿಸಲಾಗುವುದು ಎಂದಿದ್ದರು. 

Not just cricket: India and Pakistan prepare to renew rivalry at World Cup  | Cricket World Cup 2019 | The Guardian

ಈ ವಿಷಯವನ್ನು ಮತ್ತೊಮ್ಮೆ ಪ್ರಸ್ತಾಪಿಸಿರುವ ಅಫ್ರಿದಿ, ಭಾರತ ತಂಡ ಪಾಕಿಸ್ತಾನಕ್ಕೆ ಬಂದರೆ ನಿಜಕ್ಕೂ ಉತ್ತಮವಾಗಿರುತ್ತದೆ. ಆ ಮೂಲಕ ಭಾರತ ಹಾಗೂ ಪಾಕಿಸ್ತಾನ ನಡುವಣ ದ್ವಿಪಕ್ಷೀಯ ಕ್ರಿಕೆಟ್‌ಗೆ ಮೊದಲ ಹೆಜ್ಜೆಯಾಗಲಿದೆ. ಯುದ್ದ ಹಾಗೂ ದ್ವೇಷವನ್ನು ಈಗಿನ ಪೀಳಿಗೆ ಬಯಸುವುದಿಲ್ಲ. ನಮ್ಮ ನಡುವಣ ಸಂಬಂಧವನ್ನು ಉತ್ತಮ ಪಡಿಸುವುದು ಇದಾಗಿದೆ. ಬೇರೆಯವರ ರೀತಿ ನಾವು ಸ್ನೇಹಿತರಾಗಿದ್ದರೆ, ಯಾರು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಿಸಿಸಿಐ ಬಲಿಷ್ಠ ಮಂಡಳಿಯಾಗಿ ಉಳಿದಿದೆ. ಅದು ಶತ್ರುಗಳನ್ನ ಹುಟ್ಟುಹಾಕಬಾರದು, ಸ್ನೇಹಿತರನ್ನಾಗಿ ಮಾಡಿಕೊಳ್ಳುವತ್ತ ಗಮನಹರಿಸಬೇಕು. ಹೆಚ್ಚು ಮಂದಿಯನ್ನು ಸ್ನೇಹಿತರನ್ನಾಗಿ ಮಾಡಿಕೊಂಡರೆ, ನೀವು ಇನ್ನಷ್ಟು ಬಲಿಷ್ಠವಾಗಬಹುದು ಎಂದು ಸಲಹೆ ನೀಡಿದ್ದಾರೆ. 

India v Pakistan Live Updates, T20 World Cup 2022 Live Blog: Live Score,  Commentary, TV Channels & Streaming Details | IND vs PAK

ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. 2008ರಲ್ಲಿ ಮುಂಬೈ ಮೇಲಿನ ದಾಳಿಯ ಬಳಿಕ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕೊನೆಯದ್ದಾಗಿ 2022ರ ಏಷ್ಯಾಕಪ್ ಟೂರ್ನಿ ಬಳಿಕ, ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ