ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟೀಮ್ ಇಂಡಿಯಾಕ್ಕೆ ಪಾದಾರ್ಪಣೆ ಮಾಡಿದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್..!

Twitter
Facebook
LinkedIn
WhatsApp
277172758 532841501533636 7790018118631827681 n 4

WTC Final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆ ಮಾಡಲಾದ ಟೀಮ್ ಇಂಡಿಯಾಗೆ ಯುವ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮೀಸಲು ಆಟಗಾರನಾಗಿ ಎಂಟ್ರಿ ಕೊಟ್ಟಿದ್ದಾರೆ. ಇಂಗ್ಲೆಂಡ್​ನ ಓವಲ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಈ ಹಿಂದೆ ರುತುರಾಜ್ ಗಾಯಕ್ವಾಡ್ ಅವರನ್ನು ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು.

 

ಆದರೀಗ ರುತುರಾಜ್ ಗಾಯಕ್ವಾಡ್ ವೈಯುಕ್ತಿಕ ಕಾರಣಗಳಿಂದಾಗಿ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬದಲಿ ಮೀಸಲು ಆಟಗಾರನಾಗಿ ಯಶಸ್ವಿ ಜೈಸ್ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

 

ಜೂನ್ 7 ರಿಂದ ಶುರುವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಫೈನಲ್ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ಪ್ರಮುಖ ಆಟಗಾರರು ಇಂಗ್ಲೆಂಡ್​ಗೆ ಪ್ರಯಾಣಿಸಿದ್ದಾರೆ. ಇನ್ನು ಐಪಿಎಲ್​ ಫೈನಲ್ ಪಂದ್ಯದ ಬಳಿಕ ಇತರೆ ಆಟಗಾರರು ತೆರಳಲಿದ್ದಾರೆ.

ಹಾಗೆಯೇ ಮೀಸಲು ಆಟಗಾರರಾಗಿ ಸೂರ್ಯಕುಮಾರ್ ಯಾದವ್, ಮುಖೇಶ್ ಕುಮಾರ್ ಹಾಗೂ ರುತುರಾಜ್ ಗಾಯಕ್ವಾಡ್ ತಂಡವನ್ನು ಸೇರಿಕೊಳ್ಳಬೇಕಿತ್ತು. ಆದರೀಗ ವೈಯುಕ್ತಿಕ ಕಾರಣಗಳಿಂದಾಗಿ ರುತುರಾಜ್ ಹಿಂದೆ ಸರಿದಿದ್ದಾರೆ.
ಇತ್ತ ರುತುರಾಜ್ ಗಾಯಕ್ವಾಡ್ ಹೊರಗುಳಿಯುತ್ತಿದ್ದಂತೆ ಕೋಚ್ ರಾಹುಲ್ ದ್ರಾವಿಡ್ ಅವರು ಬದಲಿ ಆಟಗಾರನನ್ನು ಆಯ್ಕೆ ಮಾಡುವಂತೆ ಆಯ್ಕೆದಾರರಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅದೃಷ್ಟ ಖುಲಾಯಿಸಿದ್ದು, ಶೀಘ್ರದಲ್ಲೇ ಅವರು ಲಂಡನ್​ಗೆ ತೆರಳಲಿದ್ದಾರೆ ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಪಿಎಲ್ 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಮುಂಬೈ ಮೂಲದ ಯಶಸ್ವಿ ಜೈಸ್ವಾಲ್ 14 ಪಂದ್ಯಗಳಲ್ಲಿ 48.08 ಸರಾಸರಿಯಲ್ಲಿ 625 ರನ್ ಗಳಿಸಿ ಮಿಂಚಿದ್ದರು.

ಹಾಗೆಯೇ ಕಳೆದ ಸೀಸನ್ ರಣಜಿ ಟ್ರೋಫಿಯಲ್ಲಿ ಜೈಸ್ವಾಲ್ 5 ಪಂದ್ಯಗಳಲ್ಲಿ 404 ರನ್ ಗಳಿಸಿ ಅಬ್ಬರಿಸಿದ್ದರು. ಹೀಗಾಗಿ ಎಡಗೈ ದಾಂಡಿಗನನ್ನು ಮೀಸಲು ಆಟಗಾರನಾಗಿ ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ.
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist