ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೀಮ್ ಇಂಡಿಯಾಗೆ ಹೊಸ ನಾಯಕ-ನೂತನ ಕೋಚ್ ಆಯ್ಕೆ ಸಾಧ್ಯತೆ

Twitter
Facebook
LinkedIn
WhatsApp
ಟೀಮ್ ಇಂಡಿಯಾಗೆ ಹೊಸ ನಾಯಕ-ನೂತನ ಕೋಚ್ ಆಯ್ಕೆ ಸಾಧ್ಯತೆ

ಟಿ20 ವಿಶ್ವಕಪ್​ನಲ್ಲಿನ ಸೋಲಿನ ಬಳಿಕ ಟೀಮ್ ಇಂಡಿಯಾದಲ್ಲಿ (Team India) ಮಹತ್ವದ ಬದಲಾವಣೆ ತರಲು ಬಿಸಿಸಿಐ (BCCI) ಮುಂದಾಗಿದೆ.  ಅದರ ಮೊದಲ ಹೆಜ್ಜೆ ಎಂಬಂತೆ ಟೀಮ್ ಇಂಡಿಯಾಗೆ ವಿಭಿನ್ನ ನಾಯಕರುಗಳ ಆಯ್ಕೆ ಮಾಡುವ ಬಗ್ಗೆ ಚರ್ಚಿಸಲಾಗಿದೆ. ಹೀಗಾಗಿ ಮೂರು ಮಾದರಿಯ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಇಬ್ಬರು ನಾಯಕರುಗಳನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಇಲ್ಲಿ ರೋಹಿತ್ ಶರ್ಮಾ (Rohit Sharma) ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ನಲ್ಲಿ ತಂಡವನ್ನು ಮುನ್ನಡೆಸಿದರೆ, ಹಾರ್ದಿಕ್ ಪಾಂಡ್ಯ (Hardik Pandya) ಟಿ20 ತಂಡಕ್ಕೆ ನಾಯಕರಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ ಟಿ20 ತಂಡಕ್ಕಾಗಿ ಹೊಸ ಕೋಚ್ ಅನ್ನು ಕೂಡ ನೇಮಕ ಮಾಡುವ ಬಗ್ಗೆ ಕೂಡ ಚಿಂತಿಸಲಾಗಿದೆ.

 

ಮುಂಬರುವ ಏಕದಿನ ವಿಶ್ವಕಪ್ ಹಾಗೂ ಟಿ20 ವಿಶ್ವಕಪ್​​ ಅನ್ನು ಮುಂದಿಟ್ಟುಕೊಂಡು ಭಾರತ ತಂಡವು ಪ್ರಮುಖ ಬದಲಾವಣೆ ಮಾಡಿಕೊಳ್ಳಲು ಮುಂದಾಗಿದೆ. ಇಲ್ಲಿ ಮುಖ್ಯವಾಗಿ 2024 ರ ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಟಿ20 ತಂಡದ ನಾಯಕ ಹಾಗೂ ಕೋಚ್ ಅನ್ನು ಬದಲಿಸಲು ಬಿಸಿಸಿಐ ಆಲೋಚಿಸಿದೆ ಎಂದು ವರದಿಯಾಗಿದೆ.

ಈ ವರದಿಯ ಪ್ರಕಾರ, ರಾಹುಲ್ ದ್ರಾವಿಡ್ ಬದಲಿಗೆ ಟಿ20 ತಂಡಕ್ಕೆ ಹೊಸ ಕೋಚ್ ನೇಮಕವಾಗಲಿದ್ದಾರೆ. ಹಾಗೆಯೇ ನಾಯಕನಾಗಿ ಹಾರ್ದಿಕ್ ಪಾಂಡ್ಯಗೆ ಜವಾಬ್ದಾರಿ ನೀಡಲಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ಬಿಸಿಸಿಐ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚೆ ನಡೆಸಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಈಗಾಗಲೇ ವಿಭಿನ್ನ ನಾಯಕ ಹಾಗೂ ಕೋಚ್​ಗಳೊಂದಿಗೆ ಇಂಗ್ಲೆಂಡ್ ತಂಡವು ಯಶಸ್ಸು ಸಾಧಿಸಿದೆ. ಅದರಲ್ಲೂ 2019 ರಲ್ಲಿ ಏಕದಿನ ವಿಶ್ವಕಪ್ ಹಾಗೂ 2022 ರಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಇಂಗ್ಲೆಂಡ್ ಪಾರುಪತ್ಯ ಮೆರೆದಿದೆ. ಹೀಗಾಗಿ ಅಂತಹದ್ದೇ ಪ್ರಯೋಗಕ್ಕೆ ಬಿಸಿಸಿಐ ಕೂಡ ಮುಂದಾಗುತ್ತಿದೆ.

ಇಲ್ಲಿ ಇಂಗ್ಲೆಂಡ್ ತಂಡವನ್ನು ಏಕದಿನ ಹಾಗೂ ಟಿ20 ಯಲ್ಲಿ ಜೋಸ್ ಬಟ್ಲರ್ ಮುನ್ನಡೆಸುತ್ತಿದ್ದರೆ, ಕೋಚ್ ಆಗಿ ಮಾಥ್ಯೂ ಮೋಟ್ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗೆಯೇ ಟೆಸ್ಟ್ ತಂಡದ ನಾಯಕನಾಗಿ ಬೆನ್ ಸ್ಟೋಕ್ಸ್ ಹಾಗೂ ಕೋಚ್ ಆಗಿ ಬ್ರೆಂಡನ್ ಮೆಕಲಂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ಬಗ್ಗೆ ಬಿಸಿಸಿಐ ಶೀಘ್ರದಲ್ಲೇ ವಿಶೇಷ ಸಭೆ ಕರೆಯಲಿದ್ದು, ಈ ವೇಳೆ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಅವರ ಅಭಿಪ್ರಾಯಗಳನ್ನು ಕೇಳಲಿದ್ದೇವೆ. ನಾವು ಕೂಡ ದ್ರಾವಿಡ್ ಅವರ ಕೆಲಸದ ಹೊರೆ ಕಡಿಮೆ ಮಾಡಲು ಬಯಸಿದ್ದೇವೆ. ಹೀಗಾಗಿ ಈ ಸಭೆಯ ಬಳಿಕ ಟೀಮ್ ಇಂಡಿಯಾದಲ್ಲಿನ ಮಹತ್ವದ ಬದಲಾವಣೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಮುಂದಿನ ವರ್ಷ ನಡೆಯಲಿರುವ ಟೀಮ್ ಇಂಡಿಯಾದ ಟಿ20 ಸರಣಿಯಲ್ಲಿ ಹೊಸ ನಾಯಕ ಹಾಗೂ ನೂತನ ಕೋಚ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ