ಟೆಸ್ಟ್ ಉಪನಾಯಕನ ಪಟ್ಟದಿಂದ ಹೊರಬಿದ್ದ ರಾಹುಲ್!
ಮುಂಬೈ: ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಕೆಎಲ್ ರಾಹುಲ್ (KL Rahul) ಟೆಸ್ಟ್ ಉಪನಾಯಕನ (Vice-Captain) ಪಟ್ಟದಿಂದ ಔಟ್ ಆಗಿದ್ದಾರೆ.
ಟೆಸ್ಟ್ ಸರಣಿಗೂ ಮುನ್ನವೇ ರಾಹುಲ್ ಪ್ರದರ್ಶನ ಕಳಪೆಯಾಗಿತ್ತು. ಈ ಕಾರಣಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಇಂದು ಮುಕ್ತಾಯಗೊಂಡ ಎರಡನೇ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ರಾಹುಲ್ 1 ರನ್ ಗಳಿಸಿ ಔಟಾಗಿದ್ದರು.
ರಾಹುಲ್ ಕಳಪೆ ಪ್ರದರ್ಶನದ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ ವ್ಯಕ್ತಪಡಿಸಿದ್ದರು. ಟೀಕೆಗಳು ಜೋರಾಗುತ್ತಿದ್ದಂತೆ ಬಿಸಿಸಿಐ (BCCI) ರಾಹುಲ್ ಅವರನ್ನು ಟೆಸ್ಟ್ (Test Cricket) ಉಪನಾಯಕನ ಸ್ಥಾನದಿಂದ ಕೈ ಬಿಟ್ಟಿದೆ. ಆಸ್ಟ್ರೇಲಿಯಾ (Australia) ವಿರುದ್ಧ ನಡೆಯಲಿರುವ ಮುಂದಿನ ಎರಡು ಟೆಸ್ಟ್ ಮತ್ತು ಮೂರು ಏಕದಿನದ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದೆ. ಎರಡು ಮಾದರಿಯ ಕ್ರಿಕೆಟಿಗೆ ರೋಹಿತ್ ಶರ್ಮಾ (Rohith Sharma) ನಾಯಕನಾಗಿದ್ದರೆ ಏಕದಿನಕ್ಕೆ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಮುಂದುವರಿಯಲಿದ್ದಾರೆ.
ಮಾರ್ಚ್ 17 ರಂದು ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಕಾರಣ ರೋಹಿತ್ ಶರ್ಮಾ ಅಲಭ್ಯರಾಗಲಿದ್ದು, ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನದ್ಕತ್