ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೈಲರ್ ಹತ್ಯೆ: ಉದಯಪುರಕ್ಕೆ ಎನ್‌ಐಎ ತಂಡ ರವಾನಿಸಿದ ಕೇಂದ್ರ ಗೃಹ ಸಚಿವಾಲಯ

Twitter
Facebook
LinkedIn
WhatsApp
ಟೈಲರ್ ಹತ್ಯೆ: ಉದಯಪುರಕ್ಕೆ ಎನ್‌ಐಎ ತಂಡ ರವಾನಿಸಿದ ಕೇಂದ್ರ ಗೃಹ ಸಚಿವಾಲಯ

ಮೇಲ್ನೋಟಕ್ಕೆ ಇದು ಭಯೋತ್ಪಾದಕ ದಾಳಿಯಂತೆ ತೋರುತ್ತಿದೆ ಎಂದು ಅನಾಮಧೇಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಇಬ್ಬರು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಈ ಸಂಪೂರ್ಣ ದಾಳಿಯ ವಿಡಿಯೋ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲ, ಘಟನೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವ ಮೂಲಕ ಆರೋಪಿಗಳು ಕೊಲೆಯ ಹೊಣೆಯನ್ನೂ ಹೊತ್ತುಕೊಂಡಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ
ಉದಯಪುರದ 7 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಇದರಲ್ಲಿ ಧನ್ಮಂಡಿ, ಘಂಟಾಘರ್, ಹತಿಪೋಲ್, ಅಂಬಾಮತ, ಸೂರಜ್ಪೋಲ್, ಭೂಪಾಲಪುರ ಮತ್ತು ಸವಿನ ಪೊಲೀಸ್ ಠಾಣೆ ವ್ಯಾಪ್ತಿಗಳು ಸೇರಿವೆ. ಅಲ್ಲದೆ, ಇಡೀ ರಾಜಸ್ಥಾನದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಆರೋಪಿಗಳು ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೂ ಬೆದರಿಕೆ ಹಾಕಿದ್ದಾರೆ. ಆರೋಪಿಗಳಾದ ರಿಯಾಜ್ ಅನ್ಸಾರಿ ಮತ್ತು ಮೊಹಮ್ಮದ್ ಗೌಸ್ ಅವರನ್ನು ರಾತ್ರಿ 7 ಗಂಟೆಗೆ ರಾಜ್‌ಸಮಂದ್‌ನ ಭೀಮ್‌ನಲ್ಲಿ ಬಂಧಿಸಲಾಗಿದೆ. ಇಬ್ಬರೂ ಉದಯಪುರದ ಸೂರಜ್ಪೋಲ್ ಪ್ರದೇಶದ ನಿವಾಸಿಗಳು.

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಇಡೀ ರಾಜ್ಯದಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಬಂದ್ ಮಾಡಲಾಗಿದೆ. ಘಟನೆಯನ್ನು ವಿರೋಧಿಸಿ ಉದಯಪುರದ ಹಾಥಿಪೋಲ್, ಘಂಟಾಘರ್, ಅಶ್ವಿನಿ ಬಜಾರ್, ಡೆಹ್ಲಿ ಗೇಟ್ ಮತ್ತು ಮಾಲ್ದಾಸ್ ಸ್ಟ್ರೀಟ್‌ನ ಮಾರುಕಟ್ಟೆಗಳನ್ನು ಮುಚ್ಚಲಾಗಿದೆ. ಇಡೀ ರಾಜಸ್ಥಾನದಲ್ಲಿ ತೀವ್ರ ಎಚ್ಚರಿಕೆ ವಹಿಸಲಾಗಿದೆ. ಶವ ಇನ್ನೂ ಅಂಗಡಿಯ ಹೊರಗೆ ಬಿದ್ದಿದೆ. ಮೃತರ ಕುಟುಂಬಸ್ಥರು 50 ಲಕ್ಷ ರೂಪಾಯಿ ಹಾಗೂ ಸರ್ಕಾರಿ ಉದ್ಯೋಗ ನೀಡುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ಅಳತೆ ನೀಡುವ ನೆಪದಲ್ಲಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು
40 ವರ್ಷದ ಟೈಲರ್ ಕನ್ಹಯ್ಯಾಲಾಲ್ ತೇಲಿ ಅವರು, ಧನ್ಮಂಡಿಯ ಭೂತಮಹಲ್ ಬಳಿ ಸುಪ್ರೀಂ ಟೈಲರ್ಸ್ ಎಂಬ ಅಂಗಡಿ ಇಟ್ಟುಕೊಂಡಿದ್ದರು. ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಬೈಕ್‌ನಲ್ಲಿ ಇಬ್ಬರು ದುಷ್ಕರ್ಮಿಗಳು ಬಂದಿದ್ದಾರೆ. ಬಟ್ಟೆಯ ಅಳತೆ ಕೊಡುವ ನೆಪದಲ್ಲಿ ಅಂಗಡಿ ಪ್ರವೇಶಿಸಿದ್ದಾರೆ. ಕನ್ಹಯ್ಯಲಾಲ್‌ಗೆ ಏನೋ ಅರ್ಥವಾಗುವಷ್ಟರಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತೇಲಿ ಮೇಲೆ ಕತ್ತಿಯಿಂದ ಹಲವಾರು ಬಾರಿ ಇರಿದಿದ್ದಾರೆ. ಇದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ