ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ

Twitter
Facebook
LinkedIn
WhatsApp
ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ

ನವದೆಹಲಿ: ಸಾಮಾನ್ಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ (National Highway) ಟೋಲ್ ಪ್ಲಾಜಾಗಳನ್ನು (Toll Plaza) ನೋಡುತ್ತವೆ. ಅಲ್ಲಿ ಟೋಲ್ (Toll) ಪಾವತಿಗಾಗಿ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಇದರಿಂದ ವಾಹನ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಕಿರಿಕಿರಿ ಆಗುವುದುಂಟು. ಆದರೆ ಭವಿಷ್ಯದಲ್ಲಿ ಈ ಟೋಲ್ ಪ್ಲಾಜಾಗಳಿಂದ ಕಿರಿಕಿರಿ ಆಗುವುದೇ ಇಲ್ಲ.

ಈ ಕುರಿತು ಮಾತನಾಡಿರುವ ಕೇಂದ್ರ ನಿತಿನ್ ಗಡ್ಕರಿ (Nitin Gadkari), ಶೀಘ್ರದಲ್ಲೇ ಸ್ವಯಂಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸುವ ವ್ಯವಸ್ಥೆ ಅಳವಡಿಸಲಾಗುವುದು. ಸ್ವಯಂ ಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸಲು ಕೇಂದ್ರ ಸರ್ಕಾರ ಈಗಾಗಲೇ ಪ್ರಾಯೋಗಿಕ ಯೋಜನೆಗಳನ್ನು ನಡೆಸುತ್ತಿದೆ. ಇದು ವಾಹನ ಮಾಲೀಕರ ಬ್ಯಾಂಕ್ ಖಾತೆಗಳಿಂದ (Bank Account) ಶುಲ್ಕವನ್ನು ಖಡಿತಗೊಳಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದ್ದಾರೆ.

ಫಾಸ್ಟ್ಯಾಗ್‌ಗಳನ್ನು (FASTags) ಪರಿಚಯಿಸಿದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(NHAI) ಟೋಲ್ ಆದಾಯವು ವರ್ಷಕ್ಕೆ 15 ಸಾವಿರ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ. ಅದಕ್ಕಾಗಿ ಈಗ ಆಟೋ ಮೊಬೈಲ್ ನಂಬರ್‌ಪ್ಲೇಟ್(ಸ್ವಯಂಚಾಲಿನ ನಂಬರ್‌ಪ್ಲೇಟ್ ರೀಡರ್ ಕ್ಯಾಮೆರಾ) (Automatic Number Plate Reader Cameras) ತ್ರಜ್ಞಾನವನ್ನು ಪರಿಚಯಿಸಲಿದ್ದೇವೆ ಎಂದು ಹೇಳಿದ್ದಾರೆ.

2018-19ರಲ್ಲಿ ಟೋಲ್ ಪ್ಲಾಜಾಗಳಲ್ಲಿ (Toll Plaza) ವಾಹನಗಳು ಕಾಯುತ್ತಿದ್ದ ಸಮಯ ಸರಿಸುಮಾರು 8 ನಿಮಿಷಗಳಿತ್ತು. 2020 ರಿಂದ 2022ರ ಅವಧಿಯಲ್ಲಿ ಫಾಸ್ಟ್ಯಾಗ್‌ಗಳನ್ನು ಪರಿಚಯಿಸಿದ ನಂತರ ವಾಹನಗಳ ಸರಾಸರಿ ಸಮಯವು 47 ಸೆಕೆಂಡುಗಳಿಗೆ ಇಳಿಕೆಯಾಯಿತು. ಹೀಗಿದ್ದೂ ಕೆಲವು ನಗರಗಳಲ್ಲಿ ಸಂದಿಗ್ಧ ಸಮಯಗಳಲ್ಲಿ ಹೆಚ್ಚಿನ ವಿಳಂಬವಾಗುತ್ತಿವೆ. ಅದಕ್ಕಾಗಿ ಸಂಪೂರ್ಣ ಬದಲಿ ವ್ಯವಸ್ಥೆ ಕಲ್ಪಿಸಲು ಸ್ವಯಂಚಾಲಿನ ಟೋಲ್ ಸಂಗ್ರಹಿಸುವ ವಿಧಾನವನ್ನು ಪರಿಚಯಿಸಲಾಗುತ್ತಿದೆ ಎಂದಿದ್ದಾರೆ.

ಸರ್ಕಾರ ಒಟ್ಟು ಎರಡು ರೀತಿಯ ಆಯ್ಕೆಗಳನ್ನು ಎದುರುನೋಡುತ್ತಿದೆ. ಮೊದಲಿಗೆ ಟೋಲ್ ಅನ್ನು ನೇರವಾಗಿ ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದ ಕಡಿತಗೊಳಿಸುವುದು, 2ನೇ ಅಯ್ಕೆಯಾಗಿ ಕಾರಿನಲ್ಲಿ ಜಿಪಿಎಸ್ ಅಳವಡಿಸಿ ಉಪಗ್ರಹ ಆಧಾರಿತವಾಗಿ ಟೋಲ್ ಸಂಗ್ರಹ ಮಾಡುವ ವಿಧಾನವನ್ನು ಎದುರು ನೋಡುತ್ತಿದೆ. ಉಪಗ್ರಹ ವಿಧಾನ ಅನುಸರಿಸಿದರೆ ಫಾಸ್ಟ್ಯಾಗ್‌ ಬದಲಾಗಿ ಜಿಪಿಎಸ್ ಅಳವಡಿಸಬೇಕಾಗುತ್ತದೆ. ಯಾವ ಆಯ್ಕೆಯನ್ನು ಈಗಲೇ ಅಂತಿಮಗೊಳಿಸಿಲ್ಲ. ಆದರೆ ಟೋಲ್ ಪ್ಲಾಜಾಗಳಿಂದ ಮುಕ್ತಿ ನೀಡುವುದು ಖಚಿತ. ಸ್ವಯಂ ಚಾಲಿತ ಟೋಲ್ ಸಂಗ್ರಹಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist