ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟ್ಯೂಶನ್‍ಗೆ ಹೋಗಿದ್ದ ಬಾಲಕಿ ನೀರಿನ ಸಂಪ್‍ನಲ್ಲಿ ಶವವಾಗಿ ಪತ್ತೆ

Twitter
Facebook
LinkedIn
WhatsApp

ಮಂಡ್ಯ: ಟ್ಯೂಶನ್‍ಗೆ ಹೋದ ಬಾಲಕಿ ನೀರಿನ ಸಂಪ್‍ನಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ಪಟ್ಟಣದಲ್ಲಿ ಜರುಗಿದೆ.

ಮಳವಳ್ಳಿ ಪಟ್ಟಣದ ಎನ್‍ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ದಂಪತಿಯ ಪುತ್ರಿ ದಿವ್ಯಾ(10) ಶವವಾಗಿ ಪತ್ತೆಯಾಗಿರುವ ಬಾಲಕಿಯಾಗಿದ್ದಾಳೆ. ಇಂದು ಬೆಳಗ್ಗೆ 11 ಗಂಟೆಗೆ ಟ್ಯೂಶನ್‍ಗೆ ಎಂದು ಮನೆಯಿಂದ ಹೋದ ಬಾಲಕಿ ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆ ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದಾಗ ಬಾಲಕಿ ಪತ್ತೆಯಾಗಿಲ್ಲ. ಇದಾದ ಬಳಿಕ ಪೋಷಕರು ಎಲ್ಲಾ ಕಡೆ ತಮ್ಮ ಮಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಇಷ್ಟಾದರೂ ಸಹ ದಿವ್ಯಾ ಮಾತ್ರ ಪತ್ತೆಯಾಗಿಲ್ಲ.

ಇದಾದ ನಂತರ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ನೀರಿನ ಸಂಪ್‍ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿಯ ಶವ ಪತ್ತೆಯಾಗಿದೆ. ಸದ್ಯ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಬಾಲಕಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಡಿವೈಎಸ್‍ಪಿ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಾಳದೊಂದಿಗೆ ಪರಿಶೀಲನೆ ನಡೆಸಿದರು. ಈ ಸಂಬಂಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ