ಟ್ರಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ; 7 ಮಂದಿ ಸಾವು..!
Twitter
Facebook
LinkedIn
WhatsApp
ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭಾರಿ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, 13 ಮಂದಿ ಗಾಯಗೊಂಡಿದ್ದಾರೆ, ಮಹಾರಾಷ್ಟ್ರದ ಮುಲ್ಧಾನಾ ಜಿಲ್ಲೆಯಲ್ಲಿ ಘಟನೆ ನಡೆದಿದೆ.
ಬಸ್ ಪುಣೆಯ ಮೆಹೆಕರ್ನಿಂದ ಪ್ರಯಾಣಿಕರನ್ನು ಹೊತ್ತು ಬರುತ್ತಿತ್ತು, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್ ಬಸ್ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.