ಮಂಗಳವಾರ, ಮೇ 21, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಕೆ ಸುರೇಶ್ ಗೂಂಡಾಗಿರಿ ಎಂದು ಆರೋಪಿಸಿ ರಾಜ್ಯ ವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟ ಬಿಜೆಪಿ

Twitter
Facebook
LinkedIn
WhatsApp
ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು . ಡಿಕೆಶಿ ಬ್ರದರ್ಸ್ ಗೆ ಟಾಂಗ್ ನೀಡಿದ ಕುಮಾರಸ್ವಾಮಿ

ರಾಮನಗರ : ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ಅನಾವರಣದ ಸರ್ಕಾರಿ ಕಾರ್ಯಕ್ರಮ ಅಕ್ಷರಷಃ ಗೂಂಡಾಗಿರಿಗೆ ಸಾಕ್ಷಿಯಾಯಿತು. ಹೆಸರು ಎತ್ತದೇ ಸಚಿವ ಡಾ.ಅಶ್ವತ್ಥನಾರಾಯಣ್ ನಡೆಸಿದ ವಾಗ್ದಾಳಿ ಗೆ ಸಂಸದ ಡಿ.ಕೆ.ಸುರೇಶ್ ಕೆರಳಿ ಕೆಂಡವಾಗಿದ್ದಲ್ಲದೇ ವೇದಿಕೆ ಮೇಲೆಯೇ ಸಚಿವ ಅಶ್ವತ್ಥ ನಾರಾಯಣ್ ಮೇಲೆ ತಿರುಗಿ ಬಿದ್ದರು. ಸಿಎಂ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಎದುರೇ ನಡೆದ ಈ ಹೈಡ್ರಾಮಾ ರಾಜ್ಯ ರಾಜಕೀಯದ ಜಿದ್ದಾಜಿದ್ದಿಗೆ  ಸಾಕ್ಷಿಯಾಗಿದೆ.

ರಾಮ ನಗರದಲ್ಲಿ ಸಿಎಂ ಸಮ್ಮುಖದಲ್ಲೇ ಸಂಸದ ಡಿ.ಕೆ.ಸುರೇಶ್ ನಡೆಸಿದ ವರ್ತನೇ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.‌ಸದಾ ಕಾಲ ಕಾಂಗ್ರೆಸ್ ಸಂಸ್ಕೃತಿ ವಿರುದ್ಧ ಮಾತನಾಡುವ ಬಿಜೆಪಿ ಇಂದು ಕಾಂಗ್ರೆಸ್ ಗೂಂಡಾ ಸಂಸ್ಕೃತಿಗೆ ಸಾಕ್ಷಿ ಒದಗಿಸಿದೆ ಎಂದು ನೇರವಾಗಿ ಆರೋಪಿಸಿದೆ. ಕಾರ್ಯಕ್ರಮದುದ್ದಕ್ಕೂ ಸಿಎಂ ಹಾಗೂ ಸರ್ಕಾರವನ್ನು ಪರೋಕ್ಷವಾಗಿ ಅವಮಾನಿಸಿದ್ದಕ್ಕೇ ನನಗೆ ಬೇಸರವಾಯಿತು. ಆದರೂ ನಾನು ಯಾರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ಅಶ್ವತ್ಥ ನಾರಾಯಣ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡರೇ, ನಮಗೆ ಯಾರ ಪಾಠವೂ ಬೇಡ. ನಮ್ಮ ಜಿಲ್ಲೆಯ ಬಗ್ಗೆ ಮಾತನಾಡಲು ಅಶ್ವತ್ಥ ನಾರಾಯಣ್ ಯಾರು ? ಕೆರಳಿದರು.

ಆದರೆ ಸಿಎಂ ಸಮ್ಮುಖದಲ್ಲಿ ಶಿಷ್ಟಾಚಾರ ಉಲ್ಲಂಘಿಸಿ ನಡೆದ ಈ ಘಟನೆಗೆ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ್ದು ಘಟನೆ ಖಂಡಿಸಿ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ರಾಮನಗರ ಜಿಲ್ಲೆ ಎಂದ್ರೆ ಕನಕಪುರ ರಿಪ್ಲಬಿಕ್ ಎಂದು ಡಿಕೆ ಸಹೋದರರು ಭಾವಿಸಿದಂತಿದೆ ಎಂದು ಬಿಜೆಪಿ ಕುಟುಕಿದ್ದು, ಕಾಂಗ್ರೆಸ್ ಸಂಸ್ಕೃತಿ ಗೂಂಡಾ ಸಂಸ್ಕೃತಿ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ನಾಯಕರಾದ ಎಂಎಲ್ ಸಿ ರವಿಕುಮಾರ್, ರಾಷ್ಟ್ರೀಯಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ.‌ಪ್ರಹ್ಲಾದ್ ಜೋಷಿ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿ ಘಟನೆಯನ್ನು ಖಂಡಿಸಿದ್ದಾರೆ.

ಆದರೆ ಇಷ್ಟಕ್ಕೆ ಬಿಜೆಪಿ ಆಕ್ರೋಶ ತಣ್ಣಗಾಗಿಲ್ಲ. ಹೀಗಾಗಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ‌ನಡೆಸುವಂತೆ ಕಾರ್ಯಕರ್ತರಿಗೆ ಬಿಜೆಪಿ ಟ್ವೀಟ್ ಮೂಲಕ ಕರೆ ಕೊಟ್ಟಿದೆ. ಶಿಷ್ಟಾಚಾರ ಉಲ್ಲಂಘಿಸಿ ಸಿಎಂ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಉದ್ಧಟತನ, ದುರ್ವತನೆ ತೋರುವ ಮೂಲಕ ಅವಮಾನ ಎಸಗಿದ್ದಾರೆ. ತಮ್ಮ ಸಂಸ್ಕೃತಿಯನ್ನು ಜನತೆ ಎದುರು ಬಹಿರಂಗಗೊಳಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ರಾಮನಗರ ಜಿಲ್ಲೆ ಎಂದರೆ “ಕನಕಪುರ ರಿಪಬ್ಲಿಕ್” ಎಂದು ಡಿಕೆ ಸಹೋದರರು ಭಾವಿಸಿದಂತಿದೆ. ನಿಮ್ಮ ಅಟ್ಟಹಾಸ, ದೌರ್ಜನ್ಯ, ರಾಜಕೀಯ ಮೇಲಾಟವನ್ನು ಎಲ್ಲ ಕಾಲಕ್ಕೂ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದು ಬಿಜೆಪಿ ಹೇಳಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು