ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!
ಶಿವಮೊಗ್ಗ: ಗುರುವಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಇವರಿಬ್ಬರನ್ನು ಹೊರತುಪಡಿಸಿ ಬೇರೆ ನಿರ್ದೇಶಕರು ನಾಮಪತ್ರ ಸಲ್ಲಿಸದಿರುವುದರಿಂದ ಚುನಾವಣಾಧಿಕಾರಿ ಅವಿರೋಧ ಆಯ್ಕೆ ಘೋಷಿಸಿದರು. ಈ ಬಾರಿ ಅಧ್ಯಕ್ಷ ಸ್ಥಾನಕ್ಕೇರುವ ಮೂಲಕ 11ನೇ ಬಾರಿ ಅಧ್ಯಕ್ಷರಾದ ದಾಖಲೆ ಆರ್.ಎಂ.ಮಂಜುನಾಥ ಗೌಡರ ಪಾಲಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಅನಿರೀಕ್ಷಿತವಾಗಿ ಎಸ್.ಕೆ.ಮರಿಯಪ್ಪ ಆಯ್ಕೆಯಾಗಿದ್ದಾರೆ. ಹಿಂದೆ ಅನೇಕ ಸಹಕಾರ ಸಂಸ್ಥೆಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅಧಿಕಾರ ನಡೆಸಿದ್ದಾರೆ. ದೀರ್ಘಕಾಲ ಶಿವಮೊಗ್ಗ ನಗರಸಭೆ, ಬಳಿಕ ಪಾಲಿಕೆ ಸದಸ್ಯರಾಗಿ, ಮೇಯರ್ ಆಗಿ ರಾಜಕೀಯದಲ್ಲೂ ಗಮನ ಸೆಳೆದಿದ್ದರು. ಅವಿರೋಧ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಡಿಸಿಸಿ ಬ್ಯಾಂಕ್ ನಿರ್ದೇಶಕರು, ಸಿಬ್ಬಂದಿ ಹಾಗೂ ಕಾಂಗ್ರೆಸ್ ಮುಖಂಡರು ಇಬ್ಬರನ್ನೂ ಸನ್ಮಾನಿಸಿದರು.
2060ರ ವೇಳೆಗೆ ಭಾರತ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಲಿದೆ :ರಿಸರ್ವ್ ಬ್ಯಾಂಕ್ ಡೆಪ್ಯುಟಿ ಗವರ್ನರ್
ನವದೆಹಲಿ:2031ರ ವೇಳೆಗೆ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಮತ್ತು 2060ರ ವೇಳೆಗೆ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ರಿಸರ್ವ್ ಬ್ಯಾಂಕ್ ಡೆಪ್ಯುಟಿ ಗವರ್ನರ್ ಮೈಕೆಲ್ ಡಿ ಪಾತ್ರಾ ಹೇಳಿದ್ದಾರೆ.
ಮಸ್ಸೂರಿಯ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿ,
ಭಾರತವು ಕಾರ್ಮಿಕ ಉತ್ಪಾದಕತೆ, ಮೂಲಸೌಕರ್ಯ, ಜಿಡಿಪಿಯಲ್ಲಿ ಉತ್ಪಾದನಾ ವಲಯದ ಕೊಡುಗೆ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ಆರ್ಥಿಕತೆಯ ಹಸಿರೀಕರಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳಲ್ಲಿ ಜಯವನ್ನು ಸಾಧಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
“ನಾನು ಹೇಳಿರುವ ಸಹಜ ವಿಷಯಗಳು ಮತ್ತು ಅದರ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸುವ ಸಂಕಲ್ಪವನ್ನು ಮಾಡಿದರೆ, ಭಾರತವು 2048ರ ವೇಳೆಗೆ ಅಲ್ಲ, 2031ರಲ್ಲೇ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಮತ್ತು 2060ರ ವೇಳೆಗೆ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಬಹುದು ಎಂದು ಊಹಿಸಲು ಸಾಧ್ಯವಿದೆ. ಮುಂದಿನ ಹತ್ತು ವರ್ಷಗಳಲ್ಲಿ ಭಾರತವು ವಾರ್ಷಿಕ 9.6% ದರದಲ್ಲಿ ಬೆಳೆದರೆ, ಅದು ಕಡಿಮೆ-ಮಧ್ಯಮ ಆದಾಯದ ಸಂಕೋಲೆಗಳಿಂದ ಮುಕ್ತಿ ಹೊಂದಿ ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗಲಿದೆ ಎಂದು ಅಂದಾಜಿಸಲಾಗಿದೆ” ಎಂದು ಹೇಳಿದ್ದಾರೆ.
ಬಾಲ್ಯವಿವಾಹದಲ್ಲಿ ಕರ್ನಾಟಕ 2ನೇ ಸ್ಥಾನ; ಇದು ತಲೆತಗ್ಗಿಸುವ ವಿಚಾರ ಎಂದ ಲಕ್ಷ್ಮೀ ಹೆಬ್ಬಾಳ್ಕರ್
ದಕ್ಷಿಣ ಕನ್ನಡ, ಜು.13: ಬಾಲ್ಯವಿವಾಹ(child marriage) ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ದುರದೃಷ್ಟಕರ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಪ್ರತಿಕ್ರಿಯೆ ನೀಡಿದ್ದಾರೆ. ಶನಿವಾರ(ಜು.13) ಮಂಗಳೂರಿನಲ್ಲಿ ಮಾತನಾಡಿದ ಅವರು, ‘ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂಬುದು ಜವಾಬ್ದಾರಿ ಸ್ಥಾನವಾದ ಮಹಿಳಾ ಮಂತ್ರಿಯಾಗಿ ಇದೊಂದು ತಲೆ ತಗ್ಗಿಸುವ ವಿಚಾರ ಎಂದು ಬೇಸರ ವ್ಯಕ್ತಪಡಿಸಿದರು.
ಈ ಕುರಿತು ನಮ್ಮ ಇಲಾಖೆಯಿಂದ ಸಾಕಷ್ಟು ಕ್ರಮಗಳು ಆಗಿದೆ. ಇದಕ್ಕೆ ನಮ್ಮ ಒಂದು ಇಲಾಖೆಯು ಮಾತ್ರ ಲೋಪದೋಷವೆಂದು ಹೇಳಲು ಸಾಧ್ಯವಿಲ್ಲ. ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯತ್, ಪ್ರೈಮರಿ ಶಾಲೆಯ ಎಸ್.ಡಿ.ಎಂ.ಸಿ, ಕಾನೂನು, ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ಸಹಕಾರ ಕೂಡ ಬೇಕಾಗುತ್ತದೆ. ಎಲ್ಲರೂ ಒಗ್ಗಟಾಗಿ ಕೆಲಸ ಮಾಡಿದಾಗ ಈ ಬಾಲ್ಯ ವಿವಾಹ ತಡೆಗಟ್ಟಲು ಸಾದ್ಯವಿದೆ ಎಂದರು.
ಇವತ್ತು ಬಳ್ಳಾರಿ ಪ್ರಥಮ ಸ್ಥಾನವಾಗಿದೆ, ಬೆಳಗಾವಿ ಎರಡನೇ ಜಿಲ್ಲೆಯಾಗಿದೆ. ಬೆಳಗಾವಿ ಎರಡನೇ ಜಿಲ್ಲೆಯಾಗಿದೆ ಎಂದು ಹೇಳಲು ನನಗೆ ಬಹಳಷ್ಟು ನಾಚಿಕೆ ಆಗುತ್ತದೆ. ಅದು ಮೂಡನಂಬಿಕೆಯಿಂದ ಮಾಡುತ್ತಾರೋ ಅಥವಾ ಏನಾದರೂ ಕಾರಣ ಇದೆಯಾ ಎಂಬುದೇ ಗೊತ್ತಾಗುತ್ತಿಲ್ಲ. ಈ ಕುರಿತು ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದ ಕಮೀಟಿ ಇದೆ. ಅದರಲ್ಲಿ ವಕೀಲರು, ಸಂಘ ಸಂಸ್ಥೆಗಳ ಮುಖ್ಯಸ್ಥರು ಇರುತ್ತಾರೆ. ಹೀಗಾಗಿ ಕಟ್ಟು ನಿಟ್ಟಿನ ನಿರ್ದಾಕ್ಷಿಣ್ಯ ಕ್ರಮ ಆಗುತ್ತದೆ. ನಮಗೆ ವಿಚಾರ ಗೊತ್ತಾದ ತಕ್ಷಣ ಎಫ್.ಐ.ಆರ್ ಮಾಡ್ತೇವೆ. ಆದ್ರೂ ಸಹ ಬಾಲ್ಯ ವಿಹಾಹ ಆಗುತ್ತಿದೆ. ಜೊತೆಗೆ ಬಾಲ್ಯದಲ್ಲೇ ಗರ್ಭಿಣಿಯರು ಆಗುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಗಟ್ಟಿಯಾಗಿ ಬೇರು ಮಟ್ಟದಿಂದ ಹೋಗಲಾಡಿಸುವ ಪ್ರಯತ್ನ ಮಾಡುತ್ತೇವೆ. ಈ ಬಗ್ಗೆ ಅಧಿಕಾರಿಗಳಿಗೂ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.