ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡೇಟಿಂಗ್‌ ಆ್ಯಪ್‌ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಯುವತಿ!

Twitter
Facebook
LinkedIn
WhatsApp
Detect Matrimony Fraud p6y8ljh817g9ue16cb1jwnvc4gecpv2aeukgvw1k7c

ಬೆಂಗಳೂರು : ಡೇಟಿಂಗ್‌ ಆ್ಯಪ್‌ ಮೂಲಕ ಪರಿಚಯವಾದ ಅಪರಿಚಿತ ವಂಚಕನ ಬಲೆಗೆ ಬಿದ್ದ ಯುವತಿಯೊಬ್ಬರು 3.18 ಲಕ್ಷ ರೂ. ಕಳೆದುಕೊಂಡಿದ್ದಾರೆ.ಈ ಕುರಿತು ಮೋಸ ಹೋದ 35 ವರ್ಷದ ಯುವತಿ ವೈಟ್‌ಫೀಲ್ಡ್‌ ಸೈಬರ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದಿತ್ಯ ಹೆಸರಿನ ವಂಚಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿರುವ ದೂರುದಾರೆಗೆ ಕೆಲ ತಿಂಗಳ ಹಿಂದೆ ಡೇಟಿಂಗ್‌ ಆ್ಯಪ್‌ನಲ್ಲಿಆದಿತ್ಯ ಎಂಬಾತ ಪರಿಚಯವಾಗಿದ್ದ. ತಾನು ಲಂಡನ್‌ನಲ್ಲಿ ವೈದ್ಯನಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದ. ಬಳಿಕ ಇಂಟರ್ನೆಟ್‌ ವಾಟ್ಸ್‌ಆ್ಯಪ್‌ ಕಾಲ್‌ನಲ್ಲಿ ಸಂಪರ್ಕ ಸಾಧಿಸಿದ್ದು, ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು.

ಏಪ್ರಿಲ್‌ 4 ರಂದು ದೆಹಲಿ ಏರ್‌ಪೋರ್ಟ್‌ಗೆ ಬಂದಿರುವುದಾಗಿ ಆದಿತ್ಯ ಮೆಸೇಜ್‌ ಮಾಡಿದ್ದ. ಇದಾದ ಕೆಲವೇ ಸಮಯದ ಬಳಿಕ ಏರ್‌ಪೋರ್ಟ್‌ ಸಿಬ್ಬಂದಿ ಎಂದು ಹೇಳಿಕೊಂಡ ಯುವತಿ ಕರೆ ಮಾಡಿ ಆದಿತ್ಯ ಅವರು ಮನಿ ಲಾಂಡರಿಂಗ್‌ ಸರ್ಟಿಫಿಕೇಟ್‌ ಹೊಂದಿಲ್ಲ. ಹೀಗಾಗಿ, ಅವರು ವಿದೇಶದಿಂದ ತಂದಿರುವ ಹಣ ಜಪ್ತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಳು. ಜತೆಗೆ, ಆದಿತ್ಯರನ್ನು ಹಣದ ಸಮೇತ ಬಿಡಲು ಶುಲ್ಕ ಪಾವತಿಸಬೇಕು ಎಂದು ಹೇಳಿದ್ದಳು. ಇದರಿಂದ ಕಂಗಾಲಾದ ದೂರುದಾರೆ, ಯುವತಿ ಕೊಟ್ಟ ಅಕೌಂಟ್‌ ನಂಬರ್‌ಗೆ ಹಂತ-ಹಂತವಾಗಿ 3.18 ಲಕ್ಷ ರೂ. ವರ್ಗಾವಣೆ ಮಾಡಿದ್ದರು. ಪುನಃ ಹೆಚ್ಚಿನ ಹಣಕ್ಕೆ ಬೇಡಿಕೆ ಬಂದಾಗ ತಾವು ಮೋಸ ಹೋಗಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ