ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಢಾಕಾದ ಕಟ್ಟಡದಲ್ಲಿ ಸ್ಫೋಟ, 17 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!

Twitter
Facebook
LinkedIn
WhatsApp
ಢಾಕಾದ ಕಟ್ಟಡದಲ್ಲಿ ಸ್ಫೋಟ, 17 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!

ಢಾಕಾ: ಬಾಂಗ್ಲಾದೇಶ ರಾಜಧಾನಿಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಸ್ಫೋಟಕ್ಕೆ 17 ಮಂದಿ ಮೃತಪಟ್ಟಿದ್ದಾರೆ. ಗಾಯಾಗಳುಗಳ ಸಂಖ್ಯೆ 100ಕ್ಕೂ ಹೆಚ್ಚಾಗಿದೆ. ಇದೀಗ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಡಾಕಾ ಬಸ್ ನಿಲ್ದಾಣದ ಬಳಿಯ ಗುಲಿಸ್ತಾನ ಬಳಿಯಲ್ಲಿನ ಕಟ್ಟದಲ್ಲಿ ಈ ಸ್ಫೋಟ ಸಂಭವಿಸಿದೆ. ಸಂಜೆ 4.50ಕ್ಕೆ ಬಾಂಬ್ ಸ್ಫೋಟ ಸಂಭವಿಸಿದೆ.ಸ್ಫೋಟಕ್ಕೆ ಕಾರಣ ಸ್ಪಷ್ಟವಾಗಿಲ್ಲ.

ಮಾಹಿತಿ ತಿಳಿಯುತ್ತಿದ್ದಂತ ರಕ್ಷಣಾ ತಂಡ, ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಕಟ್ಟಡ ನೆಲಕ್ಕುರುಳಿದೆ. 7ಅಗ್ನಿಶಾಮಕ ವಾಹನ ಸ್ಥಳದಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿದೆ. ರಕ್ಷಣಾ ತಂಡಗಳು ಕ್ಷಿಪ್ರ ಕಾರ್ಯಾಚರಣೆ ನಡೆಸುತ್ತಿದೆ.  ಅಧಿಕಾರಿಗಳು ಸ್ಥಳದಲ್ಲಿದ್ದೂ ಪರಿಶೀಲನೆ ನಡೆಸುತ್ತಿದ್ದಾರೆ.

ಕಟ್ಟಡದಲ್ಲಿನ ಸಿಲಿಂಡರ್ ಸ್ಫೋಟಗೊಂಡು ಈ ಘಟನೆ ಸಂಭವಿಸಿದೆಯಾ? ಅಥವಾ ಶಾರ್ಟ್ ಸರ್ಕ್ಯೂಟ್‌‌ನಿಂದ ಅವಘಡ ಸಂಭವಸಿದೆಯಾ ಅನ್ನೋ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇತ್ತ ಇದು ಬಾಂಬ್ ಸ್ಫೋಟವೇ ಅನ್ನೋ ಆಯಾಮದಲ್ಲೂ ತನಿಖೆ ಆರಂಭಗೊಂಡಿದೆ. ಭಾರಿ ಶಬ್ದ ಕೇಳಿಬಂದ ಹಿನ್ನಲೆಯಲ್ಲಿ ಸ್ಥಳೀಯರು, ಪಕ್ಕದ ಕಟ್ಟಡದಲ್ಲಿದ್ದ ಹಲವರು ಹೊರಬಂದು ನೋಡಿದ್ದಾರೆ. ಈ ವೇಳೆ ಸ್ಫೋಟ ಸಂಭವಿಸಿದ ಕಟ್ಟದ ಕುಸಿಯಲು ಆರಂಭಿಸಿದೆ. ಚೀರಾಟ, ನರಳಾಟಗಳು ಕೇಳಿಸತೊಡಗಿದೆ ಎಂದು ಘಟನೆಯನ್ನು ಹತ್ತಿರದಿಂದ ನೋಡಿದವರು ವಿವರಿಸಿದ್ದಾರೆ.

ತಕ್ಷಣವೆ ಹಲವರು ನೆರವಿಗೆ ಧಾವಿಸಿದ್ದಾರೆ. ರಕ್ಷಣಾ ತಂಡಗಳು ಧಾವಿಸಿದೆ. ಆರಂಭಿಕ ಹಂತದಲ್ಲಿ 7 ಮತೃ ದೇಹ ಹೊರತೆಗೆಯಲಾಗಿತ್ತು. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಇತ್ತ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದ್ದರೆ, ಗಾಯಾಳುಗಳ ಸಂಖ್ಯೆ 100 ದಾಟಿದೆ. ಹಲವರು ಸ್ಥಿತಿ ಗಂಭೀರವಾಗಿದೆ.

ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ.ಮಾಹಿತಿ ತಿಳಿಯುತ್ತಿದ್ದಂತೆ 5 ಸಾವಿರಕ್ಕೂ ಹೆಚ್ಚು ಮಂದಿ ಸ್ಥಳಕ್ಕೆ ಧಾವಿಸಿ ಘಟನೆ ವೀಕ್ಷಿಸಲು ಮುಂದಾಗಿದ್ದಾರೆ. ಹಲವರು ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಣಕ್ಕೆ ಮುಂದಾಗಿದ್ದಾರೆ. ಇದರಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆಯಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವ ಕಾರಣ ರಕ್ಷಣ ವಾಹನ, ಆ್ಯಂಬುಲೆನ್ಸ್, ಗಾಯಳುಗಳನ್ನು ಆಸ್ಪತ್ರೆ ಸಾಗಿಸಲು ಹರಸಹಾಸ ಪಡಬೇಕಾಗಿದೆ. ಇೀಗ ಪೊಲೀಸರು ಜನರನ್ನ ಚದುರಿಸುವ ಕೆಲಸ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ