ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತನ್ನ ಆದಾಯ ತಿಳಿಸಲು ನಿರಾಕರಿಸಿದ ಪತಿ, ಆರ್ ಟಿಐ ಮೂಲಕ ಗಂಡನ ಆದಾಯದ ವಿವರ ಪಡೆದ ಪತ್ನಿ!

Twitter
Facebook
LinkedIn
WhatsApp
ತನ್ನ ಆದಾಯ ತಿಳಿಸಲು ನಿರಾಕರಿಸಿದ ಪತಿ, ಆರ್ ಟಿಐ ಮೂಲಕ ಗಂಡನ ಆದಾಯದ ವಿವರ ಪಡೆದ ಪತ್ನಿ!

ಬರೇಲಿ: ನೀವು ಎಷ್ಟು ಸಂಪಾದಿಸುತ್ತೀರಿ? ಅಂತ ಯಾರನ್ನಾದ್ರೂ ಕೇಳಿದ್ರೆ, ಅದೆಲ್ಲಾ ನಿಮಗ್ಯಾಕೆ? ಎಷ್ಟೋ ಸಂಪಾದಿಸ್ತೀವಿ. ನಿಮ್ಗೆಲ್ಲಾ ಹೇಳಲ್ಲ ಅನ್ನೋ ಉತ್ತರ ಸಿಗಬಹುದು. ಯಾಕಂದ್ರೆ ಇಂತಹ ವಿಚಾರಗಳನ್ನ ಯಾರೂ ಸಾರ್ವಜನಿಕವಾಗಿ ಹಂಚಿಕೊಳ್ಳಲ್ಲ. ಹೆಚ್ಚಿನವರು ಎಲ್ಲರೊಂದಿಗೆ ಚರ್ಚಿಸಲು ಇಷ್ಟಪಡುವುದಿಲ್ಲ. ಅಂತಹ ಮಾಹಿತಿಯನ್ನು ಸಾಮಾನ್ಯವಾಗಿ ಕುಟುಂಬದ ಸದಸ್ಯರಿಗೆ ಮಾತ್ರ ಬಹಿರಂಗಪಡಿಸಲಾಗುತ್ತದೆ. ಆದಾಗ್ಯೂ ವೈವಾಹಿಕ ವಿವಾದದ ಸಂದರ್ಭದಲ್ಲಿ ಇಂತಹ ವಿಷಯಗಳು ವಿಭಿನ್ನವಾಗಿವೆ. ಆರ್ ಟಿಐ ಅಡಿ ಗಂಡನ ಆದಾಯದ ವಿವರವನ್ನೂ ಪಡೆಯಬಹುದಾಗಿದೆ.

 

ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದಾಗ, ಭಾವನಾತ್ಮಕ ಸವಾಲುಗಳ ಜೊತೆಗೆ ನಿಮ್ಮ ಹಣಕಾಸು ಸಹ ಪರಿಣಾಮ ಬೀರುತ್ತದೆ. ಇಂತಹ ಸಂದರ್ಭದಲ್ಲಿ ಆಸ್ತಿಗಳನ್ನು ಇಬ್ಬರ ನಡುವೆ ವಿಂಗಡಿಸಲಾಗುತ್ತೆ. ಆದರೆ ವಿಚ್ಛೇದನವು ಪರಸ್ಪರ ಒಪ್ಪಿಗೆ ಮೇರೆಗೆ ಇಲ್ಲದಿದ್ದಾಗ, ಕೆಲವು ಸಂದರ್ಭಗಳಲ್ಲಿ, ಹೆಂಡತಿಯು ತನ್ನ ಪತಿಯಿಂದ ಆದಾಯದ ವಿವರಗಳನ್ನು ಮತ್ತು ಜೀವನಾಂಶವನ್ನು ಕೇಳಬಹುದು.

ಇಲ್ಲಿ ಪುರುಷನು ಆದಾಯದ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದರೆ, ಹೆಂಡತಿ ಇತರ ಮಾರ್ಗಗಳ ಮೂಲಕ ಆದಾಯದ ಮಾಹಿತಿ ಪಡೆಯಬಹುದು. ಮಹಿಳೆಯೊಬ್ಬರು RTI (ಮಾಹಿತಿ ಹಕ್ಕು) ಅರ್ಜಿ ಸಲ್ಲಿಸುವ ಮೂಲಕ ತನ್ನ ಪತಿಯ ಆದಾಯದ ವಿವರಗಳನ್ನು ಕೋರಿದ ಪ್ರಸಂಗ ಇತ್ತೀಚಿಗೆ ವರದಿಯಾಗಿದೆ.

ತನ್ನ ಆದಾಯ ತಿಳಿಸಲು ನಿರಾಕರಿಸಿದ ಪತಿ, ಆರ್ ಟಿಐ ಮೂಲಕ ಗಂಡನ ಆದಾಯದ ವಿವರ ಪಡೆದ ಪತ್ನಿ!

ದಿ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಪ್ರಕಾರ, ಕೇಂದ್ರೀಯ ಮಾಹಿತಿ ಆಯೋಗ(ಸಿಐಸಿ) ತನ್ನ ಇತ್ತೀಚಿನ ಆದೇಶದಲ್ಲಿ ಮಹಿಳೆಗೆ ತನ್ನ ಪತಿಯ ನಿವ್ವಳ ತೆರಿಗೆಯ ಆದಾಯ/ಒಟ್ಟು ಆದಾಯದ ಸಾಮಾನ್ಯ ವಿವರಗಳನ್ನು 15 ದಿನಗಳೊಳಗೆ ಒದಗಿಸುವಂತೆ ಆದಾಯ ತೆರಿಗೆ ಇಲಾಖೆಗೆ ನಿರ್ದೇಶನ ನೀಡಿದೆ.

ಸಂಜು ಗುಪ್ತಾ ಎಂಬ ಮಹಿಳೆ ತನ್ನ ಸಂಗಾತಿಯ ಆದಾಯದ ವಿವರಗಳನ್ನು ಕೋರಿ ಆರ್‌ಟಿಐ ಸಲ್ಲಿಸಿದ ನಂತರ ಈ ಆದೇಶ ಬಂದಿದೆ. ಆರಂಭದಲ್ಲಿ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ(CPIO), ಆದಾಯ ತೆರಿಗೆ ಅಧಿಕಾರಿ, ಬರೇಲಿಯ ಆದಾಯ ತೆರಿಗೆ ಇಲಾಖೆ ಕಚೇರಿಯು ಪತಿಯ ಒಪ್ಪಿಗೆ ಇಲ್ಲದ ಕಾರಣದಿಂದ RTI ಅಡಿಯಲ್ಲಿ ವಿವರಗಳನ್ನು ನೀಡಲು ನಿರಾಕರಿಸಿದರು ಎಂದು ವರದಿಯಾಗಿದೆ.

ನಂತರ ಮಹಿಳೆ ಮೇಲ್ಮನವಿ ಸಲ್ಲಿಸುವ ಮೂಲಕ ಮೊದಲ ಮೇಲ್ಮನವಿ ಪ್ರಾಧಿಕಾರದಿಂದ(ಎಫ್‌ಎಎ) ಸಹಾಯವನ್ನು ಕೋರಿದರು. ಆದಾಗ್ಯೂ, FAA CPIO ನ ಆದೇಶವನ್ನು ಎತ್ತಿಹಿಡಿದಿದೆ. CICಗೆ ಎರಡನೇ ಮೇಲ್ಮನವಿ ಸಲ್ಲಿಸಲು ಸಂಜು ಗುಪ್ತಾ ಅವರನ್ನು ಪ್ರೇರೇಪಿಸಿತು.

ಕೇಂದ್ರ ಮಾಹಿತಿ ಆಯೋಗವು ತನ್ನ ಹಿಂದಿನ ಕೆಲವು ಆದೇಶಗಳು ಮತ್ತು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ತೀರ್ಪುಗಳನ್ನು ಪರಿಶೀಲಿಸಿತು ಮತ್ತು ಸೆಪ್ಟೆಂಬರ್ 19, 2022 ರಂದು ತನ್ನ ಆದೇಶವನ್ನು ನೀಡಿದೆ. ಸ್ವೀಕರಿಸಿದ ದಿನಾಂಕದಿಂದ 15 ದಿನಗಳಲ್ಲಿ ಸಾರ್ವಜನಿಕ ಪ್ರಾಧಿಕಾರದಲ್ಲಿ ಲಭ್ಯವಿರುವ ತನ್ನ ಪತಿಯ ನಿವ್ವಳ ತೆರಿಗೆಯ ಆದಾಯ/ಒಟ್ಟು ಆದಾಯದ ವಿವರಗಳನ್ನು ಪತ್ನಿಗೆ ಒದಗಿಸುವಂತೆ ಅದು CPIO ಗೆ ನಿರ್ದೇಶಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ