ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಮಿಳುನಾಡು ನದಿಜೋಡಣೆ ಯೋಜನೆಗಳಿಗೆ ಆಕ್ಷೇಪ ಸಲ್ಲಿಕೆ : ಬಸವರಾಜ ಬೊಮ್ಮಾಯಿ

Twitter
Facebook
LinkedIn
WhatsApp
ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಕಠಿಣ ನಿರ್ಬಂಧ ಜಾರಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು

ಹೊಸದಿಲ್ಲಿ: ತಮಿಳುನಾಡು ಸರಕಾರ ಕೈಗೊಂಡಿರುವ ಹೊಗೆನಕಲ್ ಜಲವಿದ್ಯುತ್ ಯೋಜನೆ ಮತ್ತು ಕಾವೇರಿ, ಗುಂಡಾರ್ ಹಾಗೂ ವೈಗೈ ನದಿಜೋಡಣೆ ಯೋಜನೆಗಳನ್ನು ನ್ಯಾಯಾಲಯದ ಮೂಲಕ ವಿರೋಧಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು  ಅಂತರರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರೊಂದಿಗೆ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಅಂತರರಾಜ್ಯ ಜಲವಿವಾದಗಳ ಬಗ್ಗೆ ಸಚಿವರು, ಹಿರಿಯ ವಕೀಲರು, ಅಡ್ವೊಕೇಟ್ ಜನರಲ್ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಕರ್ನಾಟಕ ರಾಜ್ಯ ನೆಲ ಜಲದ ವಿಚಾರದಲ್ಲಿ ಎಂದಿಗೂ ಒಂದಾಗಿದೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎನ್.ಜಿ.ಟಿ. ಹಾಗೂ ಮತ್ತೊಂದು ಪ್ರಕರಣ ಒಟ್ಟಿಗೆ ವಿಚಾರಣೆಗೆ ಬರಲಿದ್ದು, ನಮ್ಮ ಆಕ್ಷೇಪಗಳನ್ನು ಸಲ್ಲಿಸಿ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲಿದ್ದೇವೆ ಎಂದರು.


ನ್ಯಾಯಮೂರ್ತಿಗಳ ನೇಮಕ:
ಕೃಷ್ಣಾ ನದಿಯ 2ನೇ ಟ್ರಿಬ್ಯುನಲ್ ಗಳ ಅಧಿಸೂಚನೆಗೆ ಸಂಬಂಧಿಸಿದಂತೆ ಕಳೆದ ಬಾರಿ ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದು, ಈ ಬಾರಿ ಹೊಸ ನ್ಯಾಯಮೂರ್ತಿಗಳ ನೇಮಕ್ಕಕ್ಕೆ ರಿಜಿಸ್ಟ್ರಾರ್ ಜನರಲ್ ಅವರ ಬಳಿ ಮುಂದಿನ ವಿಚಾರಣೆಯಷ್ಟರಲ್ಲಿ ನೇಮಕವಾಗಬೇಕೆಂದು ಅರ್ಜಿ ಸಲ್ಲಿಸಲಾಗಿದೆ. ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ಕ್ರಮಕೈಗೊಳ್ಳಲಿದ್ದಾರೆ. ತಪ್ಪಿದಲ್ಲಿ ನ್ಯಾಯಾಲಯದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಬೇಕೆಂದು ತೀರ್ಮಾನಿಸಲಾಗಿದೆ ಎಂದರು.
ಕೇಂದ್ರ ಜಲ ಆಯೋಗದಲ್ಲಿ ಹಾಗೂ ಕಾವೇರಿ ನದಿ ಪ್ರಾಧಿಕಾರದ ಮುಂದೆಯೂ ನಮ್ಮ ನಿಲುವನ್ನು ಸ್ಪಷ್ಟಪಡಿಸಲು ತೀರ್ಮಾನಿಸಲಾಗಿದೆ. ಜಲಶಕ್ತಿ ಸಚಿವರನ್ನು ಭೇಟಿಯಾಗಿದ್ದು, ಪರಿಸರ ಅನುಮತಿ ದೊರೆಯಬೇಕಿದೆ ಎಂದರು.


ಮಹದಾಯಿ ವಿವಾದ:
ಮಹದಾಯಿ ನದಿಯ ಬಗ್ಗೆಯೂ ಚರ್ಚೆಯಾಗಿದೆ. ವಿಚಾರಣೆಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕೆಂದು ಕೋರಲಾಗಿದೆ. ಅದೂ ಅಂತಿಮ ಘಟ್ಟದಲ್ಲಿದೆ. ಟ್ರಿಬ್ಯುನಲ್ ಬಗ್ಗೆ ಎಲ್ಲಾ ರಾಜ್ಯಗಳೂ ಆಕ್ಷೇಪ ವ್ಯಕ್ತಪಡಿಸಿರುವ ಪ್ರಕರಣವಾಗಿದ್ದು, ಅಲ್ಲಿಯೂ ಕೂಡ ನಾವು ಪರಿಹಾರ ಕಂಡುಕೊಳ್ಳಬೇಕಿದೆ. ನದಿ ತಿರುವಿನ ಬಗ್ಗೆ ಈಗಾಗಲೇ ಚರ್ಚೆಯಾಗಿ ನಿರ್ಧಾರವಾಗಿದೆ. ಡಿ.ಪಿ.ಆರ್. ಒಪ್ಪಿಗೆಯಾದರೆ, ಕಾಮಗಾರಿಯನ್ನು ಮುಂದುವರೆಸಲಾಗುವುದು ಎಂದರು.
ಮುಂಬರುವ ದಿನಗಳಲ್ಲಿ ಯಾವ ರೀತಿ ನಮ್ಮ ಯೋಜನೆಗಳನ್ನು ಪ್ರಾರಂಭ ಮಾಡಬೇಕು. ನ್ಯಾಯಾಲಯದ ಪ್ರಕರಣಗಳು ಯಾವ ಹಂತದಲ್ಲಿವೆ, ಈಗಾಗಲೇ ಪ್ರಾರಂಭಿಸಿರುವ ಯೋಜನೆಗಳನ್ನು ಹೇಗೆ ಮುಂದುವರೆಸಬೇಕೆಂಬ ಬಗ್ಗೆ ಚರ್ಚೆ ಮಾಡಲಾಗಿದೆ. ಒಟ್ಟಾರೆ ಸಲಹೆಗಳನ್ನು ಸ್ವೀಕರಿಸಲಾಗಿದೆ. ಗೋದಾವರಿ, ಕೃಷ್ಣಾ, ಕಾವೇರಿ, ಪೆನ್ನಾರ್ ನದಿ ಜೋಡಣೆಗೆ ಸಂಬಂಧಿಸಿದಂತೆಯೂ ಚರ್ಚೆಯಾಗಿದ್ದು, ಆಕ್ಷೇಪಗಳನ್ನು ದಾಖಲಿಸಬೇಕಿದೆ. ಇತರೆ ರಾಜ್ಯಗಳೂ ಸೇರಿದಂತೆ ನಮ್ಮ ಪಾಲೂ ನಿರ್ಧರಿಸುವವರೆಗೂ ಡಿ.ಪಿ.ಆರ್.ಗೆ ಒಪ್ಪಿಗೆ ನೀಡಬೇಕೆಂದು ಹೊಸದಾಗಿ ಆಕ್ಷೇಪ ಸಲ್ಲಿಸಬೇಕಿದೆ. ಎಲ್ಲಾ ರಾಜ್ಯಗಳೂ ಈ ಬಗ್ಗೆ ಒಪ್ಪಿಗೆ ನೀಡಬೇಕೆಂದು ಆರ್ಥಿಕ ಸಚಿವರಿಗೂ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.


ಸಂಪುಟ ವಿಸ್ತರಣೆ:
ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು