ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಮ್ಮನ್ನು ಹಾಸ್ಯ ಮಾಡುವರಿಗೆ ನಾನು ಹೋರಾಟದ ಮೂಲಕ ಉತ್ತರ ಕೊಡುತ್ತೇನೆ

Twitter
Facebook
LinkedIn
WhatsApp
ತಮ್ಮನ್ನು ಹಾಸ್ಯ ಮಾಡುವರಿಗೆ ನಾನು ಹೋರಾಟದ ಮೂಲಕ ಉತ್ತರ ಕೊಡುತ್ತೇನೆ

ಬೆಂಗಳೂರು : ನಮ್ಮ ಪಕ್ಷವನ್ನು ಯಾರು ತುಳಿಯಬೇಕು ಎಂದು ಪ್ರಯತ್ನ ಮಾಡಿದ್ದರೋ ಅವರ ವಿರುದ್ಧ ಶತಾಯ ಗತಾಯ ಹೋರಾಟ ಮಾಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು.

ಜೆಪಿ ಭವನದಲ್ಲಿಂದು ಜನತಾಮಿತ್ರ ಜನ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಸುಮ್ಮನೆ ಕೂರುವುದಿಲ್ಲ.

ಕೂರಲು ಏಳಲು ಆಗುವುದಿಲ್ಲ ಎಂದು ಹಾಸ್ಯ ಮಾಡುವರಿಗೆ ನಾನು ಹೋರಾಟದ ಮೂಲಕ ಉತ್ತರ ಕೊಡುತ್ತೇನೆ ಎಂದರು.

ಮೊದಲು ಜಲಧಾರೆ ಕಾರ್ಯಕ್ರಮ ಆಯಿತು. ಈಗ ಜನಮಿತ್ರ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರಿಗೆ ಏನೇನು ಮಾಡಿದ್ದೇನೆ ಎಂಬುದನ್ನು ಹೇಳುವ ಕಾಲ ಬರುತ್ತದೆ. ಈ ದೇವೇಗೌಡ ಹಳ್ಳಿ ರೈತನ ಮಗ. ಕೆಲವರು ಏನು ಮಾಡಲು ಆಗುತ್ತದೆ ಎಂದು ಕುಹಕವಾಡಿದ್ದಾರೆ. ನಮ್ಮ ಪಕ್ಷಕ್ಕೆ ಶಕ್ತಿ ಇಲ್ಲ ಅಂತಾ ಅಪಹಾಸ್ಯ ಮಾಡುತ್ತಾರೆ. ನಮ್ಮ ಶಕ್ತಿ ಏನು ಅನ್ನೋದನ್ನು ಸಾಬೀತುಪಡಿಸುತ್ತೇನೆ ಸವಾಲು ಹಾಕಿದರು.

ಈ ಭಾರಿ ನಮಗೆ ದೈವಿ ಶಕ್ತಿ ಇದೆ. ಪಕ್ಷದ ಪ್ರತಿಯೊಬ್ಬರೂ ಹೋರಾಟದ ಕೆಚ್ಚಿನಿಂದ ಕೆಲಸ ಮಾಡುತ್ತಿದ್ದಾರೆ. ನಮ್ಮ ಹೋರಾದ ಮೇಲೆ ಶಕ್ತಿ ಇದೆ. ಇದನ್ನು ನಾನು ಮಾಡುತ್ತೇನೆ. ಹೋರಾಟಕ್ಕೆ ಸಿದ್ದರಾಗಿ ನಿಲ್ಲಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಇದಕ್ಕೂ ಮುನ್ನ ಜೆಪಿಭವನದಲ್ಲಿ ಜಲಧಾರೆಯ ಮಹಾಕಳಸಕ್ಕೆ ಪೂಜೆ ಹಾಗೂ ಗಂಗಾಪೂಜೆಯನ್ನು ಪುರೋಹಿತರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಶಾಸಕರಾದ ಆರ್. ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ, ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ