
ಬೆಂಗಳೂರು: ನೂತನ ಪಠ್ಯ ಪರಿಷ್ಕರಣೆ ವಿವಾದ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದ್ದು, ತಮ್ಮ ಪಠ್ಯವನ್ನು ಕೈಬಿಡಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರ ಬರೆದಿರುವ ದೇವನೂರು ಮಹಾದೇವ,ಈ ಹಿಂದಿನ ಪಠ್ಯದಲ್ಲಿ ಎಲ್. ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮೊದಲಾದವರ ಕತೆ, ಲೇಖನಗಳನ್ನು ಕೈಬಿಟ್ಟವರಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿ ಕುರಿತು ಏನೇನೂ ತಿಳಿದಿಲ್ಲ ಎಂದೇ ಅರ್ಥ ಎಂದು ಖಂಡಿಸಿದ್ದಾರೆ.
ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ. ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ.
ಇದು ಈಗಿನದ್ದಲ್ಲ. ಡಾ.ಮುರಳಿ ಮನೋಹರ ಜೋಶಿ ಅವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರ್ಎಸ್ಎಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈ ಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ ಎಂದಿದ್ದಾರೆ.
ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ-ಮೇಲ್, ಆನ್ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.
ದೇವನೂರು ಮಹಾದೇವ , ಬರಗೂರು ರಾಮಚಂದ್ರಪ್ಪ ಸೇರಿದಂತೆ ಕನ್ನಡದ ಹಿರಿಯ ಸಾಹಿತಿಗಳು ಕನ್ನಡದ ಆಸ್ತಿ. ಕನ್ನಡತನದ ಪ್ರತೀಕ. ಅವರಿಗೆ ಅಪಮಾನ, ಅಪಚಾರ ವಾಗುವ ಕೆಲಸವನ್ನು ಯಾರೂ ಮಾಡಬಾರದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ಮಧ್ಯ ಪ್ರವೇಶಿಸಿ ವಿವಾದ ಬಗೆಹರಿಸಬೇಕು ಎಂದು ಕನ್ನಡಪರ ಹೋರಾಟಗಾರ ನಾರಾಯಣಗೌಡ ಒತ್ತಾಯಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist