ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಮ್ಮ ಪಠ್ಯ ಕೈಬಿಡಿ ಎಂದ ಮಹಾದೇವ, ಸಿಎಂ ಮಧ್ಯ ಪ್ರವೇಶಕ್ಕೆ ನಾರಾಯಣಗೌಡ ಒತ್ತಾಯ

Twitter
Facebook
LinkedIn
WhatsApp
ತಮ್ಮ ಪಠ್ಯ ಕೈಬಿಡಿ ಎಂದ ಮಹಾದೇವ, ಸಿಎಂ ಮಧ್ಯ ಪ್ರವೇಶಕ್ಕೆ ನಾರಾಯಣಗೌಡ ಒತ್ತಾಯ

ಬೆಂಗಳೂರು: ನೂತನ ಪಠ್ಯ ಪರಿಷ್ಕರಣೆ ವಿವಾದ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದ್ದು, ತಮ್ಮ ಪಠ್ಯವನ್ನು ಕೈಬಿಡಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ದೇವನೂರು ಮಹಾದೇವ,ಈ ಹಿಂದಿನ ಪಠ್ಯದಲ್ಲಿ ಎಲ್. ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮೊದಲಾದವರ ಕತೆ, ಲೇಖನಗಳನ್ನು ಕೈಬಿಟ್ಟವರಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿ ಕುರಿತು ಏನೇನೂ ತಿಳಿದಿಲ್ಲ ಎಂದೇ ಅರ್ಥ ಎಂದು ಖಂಡಿಸಿದ್ದಾರೆ.

ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ. ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ.

ಇದು ಈಗಿನದ್ದಲ್ಲ. ಡಾ.ಮುರಳಿ ಮನೋಹರ ಜೋಶಿ ಅವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರ್‌ಎಸ್‍ಎಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈ ಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ  ಎಂದಿದ್ದಾರೆ.

 

ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ-ಮೇಲ್, ಆನ್‍ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ದೇವನೂರು ಮಹಾದೇವ , ಬರಗೂರು ರಾಮಚಂದ್ರಪ್ಪ ಸೇರಿದಂತೆ ಕನ್ನಡದ ಹಿರಿಯ ಸಾಹಿತಿಗಳು ಕನ್ನಡದ ಆಸ್ತಿ. ಕನ್ನಡತನದ ಪ್ರತೀಕ. ಅವರಿಗೆ ಅಪಮಾನ, ಅಪಚಾರ ವಾಗುವ ಕೆಲಸವನ್ನು ಯಾರೂ ಮಾಡಬಾರದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ಮಧ್ಯ ಪ್ರವೇಶಿಸಿ ವಿವಾದ ಬಗೆಹರಿಸಬೇಕು ಎಂದು ಕನ್ನಡಪರ ಹೋರಾಟಗಾರ ನಾರಾಯಣಗೌಡ ಒತ್ತಾಯಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ