ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಳಿಕಟ್ಟೋ ಕೊನೆ ಕ್ಷಣದಲ್ಲೇ ಹೃದಯಾಘಾತ – 21ರ ಯುವತಿ ಸಾವು

Twitter
Facebook
LinkedIn
WhatsApp
ತಾಳಿಕಟ್ಟೋ ಕೊನೆ ಕ್ಷಣದಲ್ಲೇ ಹೃದಯಾಘಾತ – 21ರ ಯುವತಿ ಸಾವು

ಲಕ್ನೋ: ಬದಲಾದ ಜೀವನಶೈಲಿಂದ (Life Style) ಇತ್ತೀಚೆಗೆ ಯುವಕ-ಯುವತಿಯರಲ್ಲಿ ಹೃದಯಾಘಾತ (Heart Attack) ಹೆಚ್ಚುತ್ತಿದೆ. ಹಾಗೆಯೇ ಮಧ್ಯಪ್ರದೇಶದಲ್ಲಿ ಸಾಯಿಬಾಬಾ ಮಂದಿರದಲ್ಲಿಯೇ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ವಿಷಯ ನಿನ್ನೆಯಷ್ಟೇ ಕೇಳಿಬಂದಿತ್ತು.

ಈ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ (Uttar Pradesh) ಮದುವೆ ವೇದಿಕೆಯಲ್ಲೇ 21 ವರ್ಷದ ಯುವತಿಯೊಬ್ಬಳು ತಾಳಿಕಟ್ಟುವ ಕೊನೆಯ ಕ್ಷಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಕ್ನೋನ ಮಲಿಹಾಬಾದ್ ನಗರ ವ್ಯಾಪ್ತಿಯ ಭದ್ವಾನ ಗ್ರಾಮದಲ್ಲಿ ಡಿಸೆಂಬರ್ 3ರಂದು ಶಿವಾಂಗಿ ಶರ್ಮಾ ವಿವಾಹ (Marriage) ಇತ್ತು. ಭಾವಿ ಪತಿಯೊಂದಿಗೆ ವೇದಿಕೆ ಮೇಲೆ ಶಿವಾಂಗಿ ಸಂತಸದಿಂದ ಕಾಲ ಕಳೆಯುತ್ತಿದ್ದರು. 

ಆಹಾರ ಬದಲಾಯಿಸಿದ ಬಳಿಕ ಶಿವಾಂಗಿ ಕುಸಿದಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟೊತ್ತಿಗಾಗಲೇ ಆಕೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಇದಕ್ಕೆ ಹಠಾತ್ ಹೃದಯಾಘಾತವೇ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ.

ಮದುವೆಗಿಂತ 15-20 ದಿನಕ್ಕೂ ಮೊದಲು ರಕ್ತದೊತ್ತಡ ಹಾಗೂ ಜ್ವರದಿಂದ ಬಳಲುತ್ತಿದ್ದ ಶಿವಾಂಗಿ ಚಿಕಿತ್ಸೆ ಪಡೆದಿದ್ದರು. ಇದಾದ ಬಳಿಕ ಸುಧಾರಿಸಿಕೊಂಡಿದ್ದರು. ಆದರೆ ಹಸೆಮಣೆ ಏರಬೇಕಾದ ದಿನವೇ ಹಸುನೀಗಿದ್ದಾರೆ. ಸದ್ಯ ಮದುವೆ ಸಂಭ್ರಮದಲ್ಲಿದ್ದ ಶಿವಾಂಗಿಯ ವೀಡಿಯೋ ಈಗ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ