![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದ ಬಸ್ ಅಪಘಾತ (Bus Accident) ಪ್ರಕರಣಕ್ಕೆ ಸಂಬಂಧಿಸಿ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಫಲಿಸದೆ 18 ವರ್ಷದ ಮಹೇಂದ್ರ ಮೃತಪಟ್ಟಿದ್ದಾರೆ. ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಕೊನೆಯುಸಿರೆಳೆದಿದ್ದಾರೆ. ಯುವಕ ಮಹೇಂದ್ರಗೆ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಸುತ್ತಿ, ಕೊನೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಲೆಗೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿತ್ತು. ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಉಲ್ಟಾ ಹೊಡೆದಿತ್ತು. ಮಿತಿ ಮೀರಿ ಬಸ್ನಲ್ಲಿ ಜನರನ್ನು ತುಂಬಿ ಚಲಾಯಿಸಿದ ಹಿನ್ನೆಲೆ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಪಘಾತದಲ್ಲಿ ಸ್ಥಳದಲ್ಲಿ ಸುಮಾರು ಆರು ಜನ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಪಾವಗಡ ತಾಲೂಕಿನ ಬುಡ್ಡಾರೆಡ್ಡಿಹಳ್ಳಿ ಗ್ರಾಮದ ನಿವಾಸಿ ಮಹೇಂದ್ರ ಇಂದು ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist