ತುಮಕೂರು: ಬೈಕ್-ಲಾರಿ ನಡುವೆ ಅಪಘಾತ, ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ
Twitter
Facebook
LinkedIn
WhatsApp
ತುಮಕೂರು(ಫೆ.07): ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಿನ್ನೆ(ಸೋಮವಾರ) ನಡೆದಿದೆ. ಮೃತರನ್ನ ಯಶಸ್ವಿನಿ, ಅಭಿಲಾಶ್ ಅಂತ ಗುರುತಿಸಲಾಗಿದೆ.
ಮೃತ ವಿದ್ಯಾರ್ಥಿಗಳು ಕಾಲೇಜು ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಅಮತ ತಿಳಿದು ಬಂದಿದೆ.
ಮೃತ ವಿದ್ಯಾರ್ಥಿಗಳು ಸಿಐಟಿ ಕಾಲೇಜಿನ ಇ ಅಂಡ್ ಸಿ ಬ್ರಾಂಚ್ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ.
ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.