ಬುಧವಾರ, ಮೇ 8, 2024
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!-ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್-ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೃತೀಯಲಿಂಗಿ ದಂಪತಿಗಳಿಗೆ ಮಗುವಿನ ಜನನ! ಭಾರತದಲ್ಲಿ ಮೊದಲ ಟ್ರಾನ್ಸ್ ಮ್ಯಾನ್‌ನ ಗರ್ಭಧಾರಣೆ.

Twitter
Facebook
LinkedIn
WhatsApp
ತೃತೀಯಲಿಂಗಿ ದಂಪತಿಗಳಿಗೆ ಮಗುವಿನ ಜನನ! ಭಾರತದಲ್ಲಿ ಮೊದಲ ಟ್ರಾನ್ಸ್ ಮ್ಯಾನ್‌ನ ಗರ್ಭಧಾರಣೆ.

ಕೋಝಿಕ್ಕೋಡ್ : ಇತ್ತೀಚೆಗೆ ಗರ್ಭಿಣಿ ಎಂದು ಘೋಷಿಸಿದ ಕೇರಳದ ತೃತೀಯಲಿಂಗಿ ದಂಪತಿಗಳು ಬುಧವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನು ಪಡೆದಿದ್ದಾರೆ, ಇದು ದೇಶದಲ್ಲೇ ಮೊದಲ ಪ್ರಕರಣ ಎಂದು ಪರಿಗಣಿಸಲಾಗಿದೆ.

“ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಬೆಳಗ್ಗೆ 9.30 ರ ಸುಮಾರಿಗೆ ಮಗು ಜನಿಸಿತು” ಎಂದು ತೃತೀಯಲಿಂಗಿ ದಂಪತಿಗಳಲ್ಲಿ ಒಬ್ಬರಾದ ಜಿಯಾ ಪಾವಲ್ ಪಿಟಿಐಗೆ ತಿಳಿಸಿದ್ದಾರೆ.

ಮಗು ಮತ್ತು ಮಗುವಿಗೆ ಜನ್ಮ ನೀಡಿದ ಆಕೆಯ ಸಂಗಾತಿ ಜಹ್ಹಾದ್ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಪಾವಲ್ ಹೇಳಿದ್ದಾರೆ. ಆದಾಗ್ಯೂ, ನವಜಾತ ಶಿಶುವಿನ ಲಿಂಗದ ಗುರುತನ್ನು ಬಹಿರಂಗಪಡಿಸಲು ನಿರಾಕರಿಸಿದ್ದು, ಅದನ್ನು ಸಾರ್ವಜನಿಕಗೊಳಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಜಿಯಾ ಪಾವಲ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್ ನಲ್ಲಿ ಜಹಾದ್ ಎಂಟು ತಿಂಗಳ ಗರ್ಭಿಣಿ ಎಂದು ಘೋಷಿಸಿದ್ದರು ”ನಾವು ನನ್ನ ತಾಯಿಯಾಗುವ ಕನಸು ಮತ್ತು ತಂದೆಯಾಗುವ ಅವರ ಕನಸನ್ನು ನನಸಾಗಿಸಿಕೊಳ್ಳಲಿದ್ದೇವೆ. ಎಂಟು ತಿಂಗಳ ವಯಸ್ಸಿನ ಭ್ರೂಣವು ಈಗ ಜಹಾದ್‌ನ ಹೊಟ್ಟೆಯಲ್ಲಿದೆ… ನಮಗೆ ತಿಳಿದುಬಂದ ಪ್ರಕಾರ, ಇದು ಭಾರತದಲ್ಲಿ ಮೊದಲ ಟ್ರಾನ್ಸ್ ಮ್ಯಾನ್‌ನ ಗರ್ಭಧಾರಣೆ…” ಎಂದು ಪಾವಲ್ ಪೋಸ್ಟ್‌ನಲ್ಲಿ ಹೇಳಿದ್ದರು. ಪಾವಲ್ ಮತ್ತು ಜಹಾದ್ ಕಳೆದ ಮೂರು ವರ್ಷಗಳಿಂದ ಜೊತೆಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ