ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೆರಿಗೆ ಪಾವತಿ ಮಾಡದ ಹಿನ್ನೆಲೆಯಲ್ಲಿ ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ

Twitter
Facebook
LinkedIn
WhatsApp
ತೆರಿಗೆ ಪಾವತಿ ಮಾಡದ ಹಿನ್ನೆಲೆಯಲ್ಲಿ ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು : ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಮಾಲ್‌ಗಳಲ್ಲಿ ಒಂದಾಗಿರುವ ಮಂತ್ರಿಮಾಲ್‌ ಗೆ ಬಿಬಿಎಂಪಿ (BBMP) ಅಧಿಕಾರಿಗಳು ಬೀಗ ಜಡಿದಿದ್ದಾರೆ. ಮಂತ್ರಿ ಮಾಲ್‌ 27 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಬಿಗ ಜಡಿಯುತ್ತಲೇ 5 ಕೋಟಿ ತೆರಿಗೆಯನ್ನು ಮಾಲ್‌ ಪಾವತಿ ಮಾಡಿದೆ.

ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಮಂತ್ರಿ ಮಾಲ್‌ ಬಿಬಿಎಂಪಿಗೆ ಪಾವತಿ ಮಾಡಬೇಕಾಗಿದ್ದ ಸುಮಾರು 27 ಕೋಟಿ ರೂಪಾಯಿ ಆಸ್ತಿ ಹಾಗೂ ಕಟ್ಟಡ ತೆರಿಗೆಯನ್ನು ಬಾಕಿ ಉಳಿಸಿಕೊಂಡಿತ್ತು. ಹೀಗಾಗಿ ಕಳೆದ ಮೂರು ವರ್ಷಗಳಿಂದಲೂ ಬಿಬಿಎಂಪಿ ಅಧಿಕಾರಿಗಳು ಮಾಲ್‌ ಮಾಲೀಕರಿಗೆ ಹಲವು ಬಾರಿ ನೋಟಿಸ್‌ ನೀಡಿದ್ದರು. ಆದರೆ ಮಂತ್ರಿ ಮಾಲ್‌ ತೆರಿಗೆಯನ್ನು ಪಾವತಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್‌ಗೆ ಬೀಗ ಜಡಿಯುತ್ತಿದ್ದಂತೆಯೇ 5 ಕೋಟಿ ರೂಪಾಯಿ ತೆರಿಗೆಯನ್ನು ಡಿಡಿ ರೂಪದಲ್ಲಿ ಬಿಬಿಎಂಪಿ ಅಧಿಕಾರಿಗಳ ಕೈಗೆ ನೀಡಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು, ಇನ್ನೂ ಒಂದು ತಿಂಗಳ ಕಾಲಾವಕಾಶವನ್ನು ನೀಡುವಂತೆಯೂ ಮಂತ್ರಿ ಮಾಲ್‌ ಮಾಲೀಕರು ಅಧಿಕಾರಿಗಳಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್‌ ವರೆಗೆ ಕಾಲಾವಕಾಶವನ್ನು ನೀಡಿದ್ದಾರೆ.
ಮಂತ್ರಿಮಾಲ್‌ 2018-19, 2019-20, 2020-21ನೇ ಸಾಲಿನಲ್ಲಿ ಬಿಬಿಎಂಪಿಗೆ ಆಸ್ತಿ ತೆರಿಗೆ ಹಾಗೂ ಕಟ್ಟಡ ತೆರಿಗೆಯನ್ನು ಪಾವತಿ ಮಾಡಿರಲಿಲ್ಲ. ಈ ಕುರಿತು ಸಾಕಷ್ಟು ಬಾರಿ ನೋಟೀಸ್‌ ಜಾರಿ ಮಾಡಿದ್ದರೂ ಕೂಡ ಮಂತ್ರಿ ಮಾಲ್‌ ಮಾಲೀಕರು ತೆರಿಗೆ ಪಾವತಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿಂದು ಮಾಲ್‌ಗೆ ಬೀಗ ಹಾಕಲಾಗಿದೆ. ಆದರೆ 5 ಕೋಟಿ ರೂಪಾಯಿ ಹಣವನ್ನು ಪಾವತಿ ಮಾಡಿದ್ದು, ಉಳಿದ ಹಣವನ್ನು ಶೀಘ್ರದಲ್ಲಿಯೇ ಪಾವತಿ ಮಾಡುವುದಾಗಿ ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಿಬಿಎಪಿ ಆಯುಕ್ತರ ಸೂಚನೆಯ ಮೇರೆಗೆ ಕಾಲಾವಕಾಶ ನೀಡಲಾಗಿದೆ. ಅಲ್ಲಿಯ ವರೆಗೆ ಮಾಲ್‌ ತೆರೆಯಲಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ ಅವರು ತಿಳಿಸಿದ್ದಾರೆ.

ಮಂತ್ರಿ ಮಾಲ್‌ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಈ ಹಿಂದೆ ನೋಟಿಸ್‌ ನೀಡಿದಾಗ ಚೆಕ್‌ ನೀಡಿದ್ದರು. ಆದರೆ ಚೆಕ್‌ ಬೌನ್ಸ್‌ ಆಗಿತ್ತು. ಹೀಗಾಗಿಯೇ ಡಿಡಿ ನೀಡುವಂತೆ ಕೇಳಿದ್ದೇವೆ. ಈ ಹಿನ್ನೆಲೆಯಲ್ಲಿ ಅವರು ಐದು ಕೋಟಿ ರೂಪಾಯಿಯ ತೆರಿಗೆ ಹಣವನ್ನು ಡಿಡಿ ರೂಪದಲ್ಲಿ ನೀಡಿದ್ದಾರೆ. ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಮಾತ್ರವೇ ಮಾಲೀಕರಿಗೆ ಕಾಲಾವಕಾಶವನ್ನು ನೀಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು