ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಪುತ್ರಿ ಕೆ.ಕವಿತಾ ಬಂಧನ..!
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಿಆರ್‌ಎಸ್ ನಾಯಕಿ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಬಂಧಿಸಿದ್ದಾರೆ.
ಇಂದು ಹೈದರಾಬಾದ್‌ನಲ್ಲಿರುವ ಬಿಆರ್ ಎಸ್ ಎಂಎಲ್ ಸಿ ಕೆ ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಇಡಿ ಅಧಿಕಾರಿಗಳು, ಕೆಲವು ಗಂಟೆಗಳ ನಂತರ ಕೆಸಿಆರ್ ಪುತ್ರಿಯನ್ನು ಬಂಧಿಸಿದೆ ಮತ್ತು ಅವರನ್ನು ದೆಹಲಿಗೆ ಕರೆದೊಯ್ಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
44 ವರ್ಷದ ಕೆ ಕವಿತಾ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಇಡಿ ಹಲವು ಬಾರಿ ವಿಚಾರಣೆಗೆ ಒಳಪಡಿಸಿದೆ ಮತ್ತು ಅವರ ಹೇಳಿಕೆಯನ್ನು ದಾಖಲಿಸಿದೆ. ಆದರೆ ಈ ವರ್ಷ ಇಡಿ ನೀಡಿದ್ದ ಎರಡು ಸಮನ್ಸ್‌ಗಳನ್ನು ಅವರು ತಪ್ಪಿಸಿದ್ದರು.
‘ಸೌತ್ ಗ್ರೂಪ್’ ಎಂಬುದು ಕವಿತಾ, ಅರಬಿಂದೋ ಫಾರ್ಮಾ ಪ್ರವರ್ತಕ ಶರತ್ ರೆಡ್ಡಿ, ವೈಎಸ್ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಮತ್ತು ಇತರರೊಂದಿಗೆ ಸಂಪರ್ಕ ಹೊಂದಿದ ಮದ್ಯದ ಕಾರ್ಟೆಲ್ ಆಗಿದೆ. ಪಿಳ್ಳೈ ಅವರು ಕವಿತಾ ಅವರ ಬೇನಾಮಿ ಹೂಡಿಕೆಗಳನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ಇಡಿ ಆರೋಪಿಸಿದೆ.
ಇಡಿ ದಾಳೆ ಬಗ್ಗೆ ಪ್ರತಿಕ್ರಿಯಿಸಿದ ಕೆ ಕವಿತಾ ಅವರ ಸಹೋದರ ಹಾಗೂ ತೆಲಂಗಾಣ ಮಾಜಿ ಸಚಿವ ಕೆಟಿ ರಾಮರಾವ್ ಅವರು, “ಶೋಧ ಕಾರ್ಯ ಮುಗಿದಿದೆ ಮತ್ತು ಬಂಧನ ವಾರಂಟ್ ಅನ್ನು ಪ್ರಸ್ತುತಪಡಿಸಲಾಗಿದೆ. ಆದರೆ ಕವಿತಾ ಟ್ರಾನ್ಸಿಟ್ ವಾರಂಟ್ ಇಲ್ಲ ಎಂದು ಹೇಳುತ್ತಿದ್ದಾರೆ” ಎಂದು ಹೇಳಿದ್ದಾರೆ. ಈ ಮೂಲಕ ಇಡಿ ದಾಳಿ ಮತ್ತು ಕೆ.ಕವಿತಾ ಅವರ ಬಂಧನವನ್ನು ಖಚಿತಪಡಿಸಿದ್ದಾರೆ.
ತೆಲಂಗಾಣ ಕಾಂಗ್ರೆಸ್ ಸರ್ಕಾರದಿಂದ ಗುಡ್ನ್ಯೂಸ್! ಸರ್ಕಾರಿ ಶಾಲಾ-ಕಾಲೇಜುಗಳಿಗೂ ಉಚಿತ ವಿದ್ಯುತ್
ಫೆಬ್ರವರಿ ತಿಂಗಳಿನಿಂದ ಅರ್ಹ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೆ ತರಲಿದೆ. ಡಿಸೆಂಬರ್ 2023ಕ್ಕೆ ವಿದ್ಯುತ್ ಬಿಲ್ ಪಾವತಿಸಿದ ಜನರಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ ಎಂದು ತೆಲಂಗಾಣ ಸರ್ಕಾರ ಸ್ಪಷ್ಟಪಡಿಸಿದೆ.
ಈ ಅವಧಿಯಲ್ಲಿ ಯಾವುದೇ ಬಾಕಿ ಇದ್ದರೆ, ಅರ್ಜಿದಾರರು ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅನರ್ಹರಾಗುತ್ತಾರೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇದೀಗ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್ ನೀಡುವುದಾಗಿ ಸಿಎಂ ರೇವಂತ್ ರೆಡ್ಡಿ ಘೋಷಿಸಿದ್ದಾರೆ. ಸಿಎಂ ನಿರ್ಧಾರಕ್ಕೆ ಹಲವು ಸರ್ಕಾರಿ ಶಿಕ್ಷಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್‌ಗಳಿಗೆ ಸ್ಪರ್ಧಾತ್ಮಕವಾಗಿಸಲು ಸರ್ಕಾರ ಈಗಾಗಲೇ ಪ್ರಯತ್ನಗಳನ್ನು ಮಾಡುತ್ತಿದೆ. ಮುಂಬರುವ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಮತ್ತು ಉಚಿತ ಊಟ, ನೋಟ್‌ಬುಕ್ ಮತ್ತು ಪೌಷ್ಟಿಕಾಂಶದ ಊಟವನ್ನು ಒದಗಿಸಬೇಕು ಎಂಬ ಮಾತುಗಳು ಕೇಳಿಬರುತ್ತಿವೆ.
ಈಗಾಗಲೇ ಅನೇಕ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ತರಗತಿಗಳನ್ನು ನೀಡಲಾಗುತ್ತಿದೆ, ಜೊತೆಗೆ ಮಧ್ಯಾಹ್ನದ ಊಟಕ್ಕೆ ಮೊಟ್ಟೆ ಮತ್ತು ಮೀನಿನ ಕರಿಯನ್ನು ನೀಡಲಾಗುತ್ತಿದೆ. ಹಾಗಾಗಿ ರೇವಂತ್ ರೆಡ್ಡಿ ಸರ್ಕಾರ ಶಾಲೆಗಳಿಗೂ ಉಚಿತ ವಿದ್ಯುತ್ ಯೋಜನೆ ದೊರೆಕಿಸಿಕೊಡಲು ಮುಂದಾಗಿದ್ದಾರೆ.
ಈಗಾಗಲೇ ಕರ್ನಾಟಕ ಸರ್ಕಾರ ಕೂಡ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್ ಹಾಗೂ ಉಚಿತ ನೀರಿನ ಸೌಲಭ್ಯ ಒದಗಿಸಿಕೊಡುತ್ತಿದೆ. ಇದೀಗ ಮತ್ತೊಂದು ಕಾಂಗ್ರೆಸ್ ಸರ್ಕಾರ ಇದೇ ಮಾದರಿಯನ್ನು ಅನುಸರಿಸುತ್ತಿದೆ.
ಇದೇ ಮೊದಲ ಬಾರಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಈಗಾಗಲೇ ಮಹಿಳೆಯರಿಗೆ ಉಚಿತ ಬಸ್ ಯೋಜನೆ ಜಾರಿಗೆ ತಂದಿದೆ. ಇದರ ಜೊತೆಗೆ ಗೃಹಜ್ಯೋತಿ ಫೆಬ್ರವರಿಯಿಂದ ಜಾರಿಗೆ ಬಂದಿದೆ.