ಕನ್ನಡ, ತಮಿಳು ಹಾಗೂ ತೆಲುಗಿನಲ್ಲಿ ಹಲವು ಸಿನಿಮಾಗಳನ್ನು ಮಾಡಿರುವ ಸಂಯುಕ್ತ, ಬಿಡುವು ಮಾಡಿಕೊಂಡು ಆಗಾಗ್ಗೆ ಪ್ರವಾಸಗಳನ್ನು ಮಾಡುತ್ತಲೇ ಇರುತ್ತಾರೆ. ಈ ಬಾರಿ ಅವರು ಥೈಲ್ಯಾಂಡ್ (Thailand) ಪ್ರವಾಸ ಕೈಗೊಂಡಿದ್ದು, ಆ ಪ್ರವಾಸದ ಅನುಭವಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಹಾಟ್ ಹಾಟ್ ಆಗಿರುವಂತಹ ಫೋಟೋಗಳನ್ನೂ ಅವರು ಪೋಸ್ಟ್ ಮಾಡಿದ್ದಾರೆ.
ಥೈಲ್ಯಾಂಡ್ ಪ್ರವಾಸವನ್ನು ಎಂಜಾಯ್ ಮಾಡುತ್ತಿರುವ ಅವರು, ಸಮುದ್ರದ ನೂರು ಅಡಿ ಆಳಕ್ಕೆ ಇಳಿದು, ಅಲ್ಲಿನ ಸೌಂದರ್ಯವನ್ನು ಸವಿದಿದ್ದಾರೆ. ನನ್ನ ಜೀವನದಲ್ಲಿ ಇದು ಮರೆಯೋಕೆ ಆಗದೇ ಇರುವಂತಹ ಅನುಭವ ಎಂದು ಹಂಚಿಕೊಂಡಿದ್ದಾರೆ. ಆ ಅನುಭವವನ್ನು ಅಲ್ಲಿಗೆ ಹೋಗಿಯೇ ಅನುಭವಿಸಬೇಕು. ಪದಗಳಿಂದ ವರ್ಣಿಸುವುದಕ್ಕೆ ಆಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಎರಡ್ಮೂರು ತಿಂಗಳ ಹಿಂದೆಯಷ್ಟೇ ಅವರು ಚಿತ್ರೀಕರಣದಲ್ಲಿ ಇದ್ದಾಗ ಕಾಲಿಗೆ ಏಟು ಮಾಡಿಕೊಂಡಿದ್ದರು. ಕೆಲ ತಿಂಗಳ ಕಾಲ ಮನೆಯಲ್ಲೇ ವಿಶ್ರಾಂತಿ ತಗೆದುಕೊಳ್ಳಬೇಕು ಎಂದು ವೈದ್ಯರು ಸೂಚಿಸಿದ್ದರು. ಸಣ್ಣ ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿತ್ತು. ಕಾಲು ಸರಿಯಾಗಿ, ನಡೆದಾಡುವುದಕ್ಕೆ ಆಗುತ್ತಿದ್ದಂತೆಯೇ ಥೈಲ್ಯಾಂಡ್ ವಿಮಾನ ಏರಿದ್ದಾರೆ. ಇದೊಂದು ಸೋಲೋ ಟ್ರಿಪ್ ಆಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?