ದಕ್ಷಿಣ ಕನ್ನಡದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾರಿ ಅಂತರಗಳಿಂದ ಮುನ್ನಡೆ..!
Twitter
Facebook
LinkedIn
WhatsApp
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವಿಎಂ ಮತ ಎಣಿಕೆಯು ಅಧಿಕಾರಿಗಳ ನೇತೃತ್ವದಲ್ಲಿ ಆರಂಭಗೊಂಡಿದ್ದು, ಉಭಯ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಇವಿಎಂ ಮತ ಎಣಿಕೆಯಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿಯ ಕ್ಯಾ.ಬ್ರಿಜೇಶ್ ಚೌಟ ಅವರು 68609 ಮತಗಳನ್ನು, ಕಾಂಗ್ರೆಸ್ ನ ಪದ್ಮರಾಜ್ ಅವರು 53232 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಬ್ರಿಜೇಶ್ ಚೌಟ ಅವರು 15377 ಮತಗಳ ಅಂತರವನ್ನು ಕಾಯ್ದುಕೊಂಡಿದ್ದಾರೆ. ಇನ್ನು 2171 ಅಷ್ಟು ನೋಟಾ ಮತ ಚಲಾವಣೆಯಾಗಿದೆ.