ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜು. 19ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಉಡುಪಿ ಜಿಲ್ಲೆ
ಉಡುಪಿ ಜಿಲ್ಲೆಯಾದ್ಯಂತ ಜುಲೈ 18 ರಂದು ಧಾರಾಕಾರ ಮಳೆ ಸುರಿದಿದೆ. ಜುಲೈ 19 ರಂದು ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಳಿದಂತೆ ಪದವಿ ತರಗತಿಗಳಿಗೆ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ ಎಂದು ಜಿಲ್ಲಾಡಳಿತ ತನ್ನ ಆದೇಶದಲ್ಲಿ ತಿಳಿಸಲಾಗಿದೆ.
ಪದವಿ ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ. ಆದರೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ, ಬೈಂದೂರು, ಕಾಪು, ಉಡುಪಿ, ಕಾರ್ಕಳ, ಹೆಬ್ರಿ, ಕುಂದಾಪುರ ತಾಲೂಕುಗಳಲ್ಲಿ ಭಾರೀ ಮಳೆ ಸುರಿದಿದೆ.
ಕಳೆದ ಕೆಲವು ದಿನಗಳಿಂದಲೂ ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೀಗ ಶುಕ್ರವಾರ ಕೂಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಮುಂದುವರಿಕೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲೀಗ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಗಳನ್ನು ಕೈಗೊಂಡಿದೆ.
ಕೊಡಗು ಜಿಲ್ಲೆ
ಕೊಡಗು ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ(ಪಿಯುಸಿ) ಜು.19ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ಕಾಸರಗೋಡು
ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ನಾಳೆ ಜುಲೈ 19( ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್ ಆದೇಶ ನೀಡಿದ್ದಾರೆ.
ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯ, ಸಿ ಬಿ ಎಸ್ ಇ, ಐ ಸಿ ಎಸ್ ಇ ಶಾಲೆಗಳು , ಕೇಂದ್ರೀಯ ವಿದ್ಯಾಲಯ, ಅಂಗನವಾಡಿ, ಮದ್ರಸ ಗಳಿಗೂ ರಜೆ ಅನ್ವಯವಾಗಲಿದೆ. ಕಾಲೇಜುಗಳಿಗೆ ರಜೆ ಇಲ್ಲ. ಜಿಲ್ಲೆಯಲ್ಲಿ ಕಳೆದ 24 ಗಂಟೆ ಗಳಿಂದ ಭಾರೀ ಗಾಳಿ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತ ಗೊಂಡಿದೆ.
ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿದೆ. ಭಾರೀ ಗಾಳಿ ಮಳೆಗೆ ವಿದ್ಯುತ್ ಸಂಪರ್ಕ ಅಸ್ತವ್ಯಸ್ತ ಗೊಂಡಿದೆ. ಪೂರ್ವ ನಿರ್ಧರಿತ ಪರೀಕ್ಷೆ ಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.