ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ; ಬಾರಿ ಮಳೆ ಸಾಧ್ಯತೆ!

ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ, ಎಚ್ಎಎಲ್ನಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೊಯ್ನಾ ಡ್ಯಾಂನಿಂದ 21 ಸಾವಿರ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ – ಚಿಕ್ಕೋಡಿ, ಬಾಗಲಕೋಟೆಯಲ್ಲಿ ಪ್ರವಾಹ ಭೀತಿ
ಮಹಾರಾಷ್ಟ್ರದ (Maharashtra) ಘಟ್ಟ ಪ್ರದೇಶಗಳಲ್ಲಿ ರಣಮಳೆ ಸುರಿಯುತ್ತಿರುವ ಕಾರಣ ಅಧಿಕೃತವಾಗಿ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದಿಂದ (Koyna Dam) ಕೃಷ್ಣ ನದಿಗೆ (Krishna River) 21 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.
ನೀರು ಬಿಡುಗಡೆ ಮಾಡಿದ ಪರಿಣಾಮ ಚಿಕ್ಕೋಡಿ (Chikkodi) ಮತ್ತು ಬಾಗಲಕೋಟೆ (Bagalkote) ಜಿಲ್ಲೆಗಳ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಮತ್ತೊಮ್ಮೆ ಪ್ರವಾಹದ (Flood) ಭೀತಿ ಎದುರಾಗಿದೆ. ಸದ್ಯಕ್ಕೆ ಕೃಷ್ಣಾ ನದಿಯಲ್ಲಿ 2.05 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಅಪಾಯದ ಮಟ್ಟವನ್ನು ಮೀರಿ ನದಿ ಹರಿಯುತ್ತಿದೆ. ಈಗಾಗಲೇ ಕೆಲವು ಗ್ರಾಮಗಳ ಸಂಪರ್ಕ ಕಲ್ಪಿಸುವ ರಸ್ತೆಗಳು ಕೂಡ ಜಲಾವೃತವಾಗಿದ್ದು ನದಿ ದಂಡೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕ್ಯಾಸಲ್ರಾಕ್, ಸಿದ್ದಾಪುರ, ಕಮ್ಮರಡಿ, ಕೊಟ್ಟಿಗೆಹಾರ, ಆಗುಂಬೆ, ಸೋಮವಾರಪೇಟೆ, ಭಾಗಮಂಡಲ, ಕಳಸ, ಕೊಲ್ಲೂರು, ಯಲ್ಲಾಪುರ, ಗೇರುಸೊಪ್ಪ, ಧರ್ಮಸ್ಥಳ, ಲೋಂಡಾ, ಮಂಗಳೂರು ವಿಮಾನ ನಿಲ್ದಾಣ, ಲಿಂಗನಮಕ್ಕಿ, ಎನ್ಆರ್ಪುರ, ನಾಪೊಕ್ಲು, ಹುಂಚದಕಟ್ಟೆ, ಶೃಂಗೇರಿಯಲ್ಲಿ ಮಳೆಯಾಗಿದೆ.
ಕಾರ್ಕಳ, ಜಯಪುರ, ತರೀಕೆರೆ, ಕದ್ರಾ, ಪುತ್ತೂರು, ಕೋಟ, ಶಿರಾಲಿ, ಬೆಳ್ತಂಗಡಿ, ಅಜ್ಜಂಪುರ, ಅರಕಲಗೂಡು, ಪಣಂಬೂರು, ಮೂರ್ನಾಡು, ತ್ಯಾಗರ್ತಿ, ಹಾಸನ, ಹೊನ್ನಾವರ, ಅಂಕೋಲಾ, ಬನವಾಸಿ, ಔರಾದ್, ಸರಗೂರು, ಭದ್ರಾವತಿ, ಚನ್ನರಾಯಪಟ್ಟಣ, ಮುಂಡಗೋಡು, ಹಳಿಯಾಳ, ಕಾರವಾರ, ಮುಲ್ಕಿ, ಸಂಕೇಶ್ವರ, ಹಿಡಕಲ್, ಶ್ರವಣಬೆಳಗೊಳ, ಕುಮಟಾ, ಸುಳ್ಯ, ಧಾರವಾಡ, ಕಮಲಾಪುರ, ಕಲಘಟಗಿ, ಕಲಬುರಗಿ, ಮುದ್ದೇಬಿಹಾಳ, ಚಿಂಚೋಳಿ, ಕೃಷ್ಣರಾಜಪೇಟೆ, ಚನ್ನಗಿರಿ, ನಾಗಮಂಡಲ, ರಾಮನಗರದಲ್ಲಿ ಮಳೆಯಾಗಿದೆ.
ಹೊನ್ನಾವರದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 24.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 25.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೆಆರ್‌ಎಸ್‌ನಿಂದ 1.50 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ
ಮಂಡ್ಯ/ ಮಡಿಕೇರಿ/ ಹಾಸನ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕ್ಷಣ ಕ್ಷಣಕ್ಕೂ ಕೃಷ್ಣರಾಜಸಾಗರ ಜಲಾಶಯದ (KRS Dam) ಒಳಹರಿವಿನಲ್ಲಿ ಹೆಚ್ಚಳ ಕಾಣುತ್ತಿದೆ. ಕನ್ನಂಬಾಡಿ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದ್ದು, 1.50 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
3 ದಿನಗಳ ವಿರಾಮದ ಬಳಿಕ ಕೊಡಗಿನಲ್ಲಿ (Kodagu) ಜೋರು ಮಳೆಯಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದೆ. ಕುಶಾಲನಗರ ತಾಲೂಕಿನ ಕಣಿವೆ ಭಾಗದಲ್ಲಿ ಹೊಲಗದ್ದೆಗಳಿಗೆ ನೀರು ನುಗ್ಗಿದೆ.
ಸೋಮವಾರಪೇಟೆ, ಭಾಗಮಂಡಲ ತಲಕಾವೇರಿ ರಸ್ತೆಯಲ್ಲಿ ಸಂಚಾರಕ್ಕೆ ಸಮಸ್ಯೆಯಾಗಿದೆ. ಇದೆಲ್ಲದರ ಪರಿಣಾಮ ಕ್ಷಣ ಕ್ಷಣಕ್ಕೂ ಕೆಆರ್‌ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ. ರಂಗನತಿಟ್ಟು ಪಕ್ಷಿಧಾಮ ಸೇರಿ ನದಿಪಾತ್ರದ ಪ್ರವಾಸಿ ತಾಣಗಳು ಮುಳುಗುವ ಆತಂಕ ಸೃಷ್ಟಿಯಾಗಿದೆ.
ಹಾಸನದಲ್ಲಿ (Hassana) ಮಳೆ ಜೋರಾಗಿದ್ದು ಅರಸೀಕೆರೆ, ಚನ್ನರಾಯಪಟ್ಟಣ ಬಿಟ್ಟು ಉಳಿದ 6 ತಾಲೂಕಿನ ಪ್ರೌಢಶಾಲೆವರೆಗೆ ನಾಳೆ ರಜೆ ಘೋಷಿಸಲಾಗಿದ್ದರೆ ಕಾಲೇಜ್‌ಗಳು ತೆರೆಯಲಿವೆ.
ಚಿಕ್ಕಮಗಳೂರು, ಸಕಲೇಶಪುರ ಭಾಗದಲ್ಲಿ ಭಾರೀ ಮಳೆಯಿಂದಾಗಿ ಹೇಮಾವತಿ ಜಲಾಶಯಕ್ಕೆ (Hemavathi Dam) ಒಳ ಹರಿವು ಹೆಚ್ಚಾಗಿ 65 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ನದಿ ಪಾತ್ರದಲ್ಲಿ ನಾಟಿಗೆ ಸಿದ್ಧವಾಗಿದ್ದ ಗದ್ದೆಗಳಲ್ಲಿ ನೀರು ತುಂಬಿದೆ.
ಸಕಲೇಶಪುರದ ಹೊಳೆಮಲ್ಲೇಶ್ವರ ದೇವಾಲಯ ಜಲಾವೃತವಾಗಿದೆ. ಮಳಲಿಯ ಚತುಷ್ಪಥ ಬಳಿ ಗುಡ್ಡಕುಸಿದು 5 ಮನೆಗಳಿಗೆ ಆತಂಕ ಎದುರಾಗಿದೆ. ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ಕೆರೆ ಒಡೆದು 12 ಎಕರೆಯಲ್ಲಿ ನಾಟಿ ಮಾಡಿದ್ದ ಭತ್ತದ ಗದ್ದೆಗೆ ನೀರು ನುಗ್ಗಿದೆ. ಯಗಚಿ ಡ್ಯಾಮ್‌ನಿಂದ ಭರ್ತಿಯಾಗಿ ಅಪಾರ ನೀರು ಹೊರಬಿಡಲಾಗಿದೆ.