ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡ, ಉಡುಪಿ ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮತ್ತೆ ಮಳೆಯಾಗುವ ಸಾಧ್ಯತೆ!

Twitter
Facebook
LinkedIn
WhatsApp
rain159333075315951780421602271532

ಬೆಂಗಳೂರು: ನವೆಂಬರ್ ತಿಂಗಳು ಮುಗಿಯುತ್ತಾ ಬಂದರೂ ಕರ್ನಾಟಕದಲ್ಲಿ ಇನ್ನೂ ಮಳೆಯ ಅಬ್ಬರ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಕಳೆದೊಂದು ವಾರದಿಂದ ರಾಜ್ಯದಾದ್ಯಂತ ಚಳಿ ಹೆಚ್ಚಾಗಿತ್ತು. ಆದರೆ, ಇಂದಿನಿಂದ ಮತ್ತೆ ಮಳೆಯ ಆರ್ಭಟ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಇಂದಿನಿಂದ (ನವೆಂಬರ್ 22) 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ವ್ಯಾಪಕ ಮಳೆಯ ಮುನ್ಸೂಚನೆಯಿದೆ.

ಈಗಾಗಲೇ ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗುವ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದರ ಮಧ್ಯೆ ಈಗ ಮತ್ತೆ ಮಳೆಯ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಂಜು ಕೂಡ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಷಿಯಸ್, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಷಿಯಸ್ ಇರಲಿದೆ.

ಇಂದು ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಚದುರಿದ ತುಂತುರು ಮತ್ತು ಗುಡುಗು ಸಹಿತ ಕೆಲವು ಭಾರಿ ಬೀಳುವ ಸಾಧ್ಯತೆಯಿದೆ. ತಮಿಳುನಾಡು, ಕರ್ನಾಟಕ, ಕೇರಳ, ತೆಲಂಗಾಣ ಮತ್ತು ಒಡಿಶಾದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ