ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಸಿದ ಬಿಸಿಗಾಳಿ, ದೇಶದಲ್ಲೇ ಮೊದಲು!

Twitter
Facebook
LinkedIn
WhatsApp
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಸಿದ ಬಿಸಿಗಾಳಿ, ದೇಶದಲ್ಲೇ ಮೊದಲು!

ಬೆಂಗಳೂರು: ಅರಬ್ಬೀ ಸಮುದ್ರದ  ಮೇಲೆ ಆಂಟಿಸೈಕ್ಲೋನ್ ಗಾಳಿ ಬೀಸಿದ ಪರಿಣಾಮ ಕರಾವಳಿ ಪ್ರದೇಶದ ಎರಡು ಜಿಲ್ಲೆಗಳಾದ ದಕ್ಷಿಣ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಸೋಮವಾರದವರೆಗು ಬಿಸಿ ಗಾಳಿ ಬೀಸಿದೆ. ಈ ಬೇಸಿಗೆಗಾಲದಲ್ಲಿ ದೇಶದಲ್ಲೇ ಇದೇ ಮೊದಲ ಬಿಸಿಗಾಳಿಯಾಗಿದೆ. ಶನಿವಾರ (ಮಾ.4) ರಂದು ದೇಶದ ವಿವಿಧ ಭಾಗಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ​ ದಾಖಲಾಗಿತ್ತು. ಇನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಹೊನ್ನಾವರದಲ್ಲಿ 39 ರಿಂದ 40.4 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿತ್ತು. ಇದು ಸಾಮನ್ಯ ತಾಪಮಾನಕ್ಕಿಂತ 6 ಡಿಗ್ರಿ ಸೆಲ್ಸಿಯಸ್​​ಗಿಂತ​ ಹೆಚ್ಚಿತ್ತು.

ರವಿವಾರ (ಮಾ.5) ರಂದು ಗೋವಾದಲ್ಲಿ ಅತಿ ಹೆಚ್ಚಿನ 37.1 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದ್ದು, ಸಾಮಾನ್ಯ ತಾಪಮಾನಕ್ಕಿಂತ 5 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗಿದೆ. ಇನ್ನು ಮುಂಬೈನಲ್ಲಿ 38.1 ಡಿಗ್ರಿ ಸೆಲ್ಸಿಯಸ್​, ಹೊನ್ನಾವರದಲ್ಲಿ 37.3 ಡಿಗ್ರಿ ಸೆಲ್ಸಿಯಸ್​, ಕನ್ನುರ್​​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಆಂಟಿಸೈಕ್ಲೋನಿಕ್​​ನಿಂದ ಪಶ್ಚಿಮ ಕರಾವಳಿಯಲ್ಲಿ ಬೆಚ್ಚಗಿನ ವಾತಾವರಣವಿರುತ್ತದೆ. ದಕ್ಷಿಣ ಕರಾವಳಿ ಪ್ರದೇಶಗಳಲ್ಲಿ ಬಿಸಿ ಗಾಳಿ ಅಪರೂಪವಾಗಿದ್ದು, ಈ ಬಾರಿ ಕರಾವಳಿ ಕರ್ನಾಟಕದಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿದೆ ಆದರೆ ಅದೃಷ್ಟವಶಾತ್ ಬೆಚ್ಚಗಿನ ಅನುಭವ ಕಡಿಮೆಯಾಗಿತ್ತು. ತಾಪಮಾನವು ಮತ್ತೆ ಕುಸಿಯಲು ಪ್ರಾರಂಭಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಯ ಮಹಾನಿರ್ದೇಶಕ ಎಂ ಮೊಹಾಪಾತ್ರ ಹೇಳಿದ್ದಾರೆ.

ಪಶ್ಚಿಮ ಕರಾವಳಿಯ ಪ್ರದೇಶಗಳಲ್ಲಿ ಮಾರ್ಚ್‌ನಲ್ಲಿ ಬಿಸಿ ಗಾಳಿ ಬೀಸುತ್ತದೆ. ಮತ್ತು ಏಪ್ರಿಲ್ ಅಂತ್ಯ ಮತ್ತು ಮೇ ಆರಂಭದಲ್ಲಿ ಪೂರ್ವ ಕರಾವಳಿ ಪ್ರದೇಶಗಳಾದ ಒಡಿಶಾ ಮತ್ತು ಆಂಧ್ರಪ್ರದೇಶಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಫೆಬ್ರವರಿಯಲ್ಲಿ ಆಂಟಿಸೈಕ್ಲೋನ್‌ನಿಂದ ಪಶ್ಚಿಮ ಕರಾವಳಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಇಂದಿನಿಂದ (ಮಾ.7) ರಾಜ್ಯದ ಕರಾವಳಿ ಪ್ರದೇಶದಲ್ಲಿ ಬಿಸಿ ಗಾಳಿ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನಶಾಸ್ತ್ರಜ್ಞ ಮಹೇಶ್ ಪಲಾವತ್ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ