ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ

Twitter
Facebook
LinkedIn
WhatsApp
ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ

ಮಂಗಳೂರು: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವು ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಗುರುವಾರ, ಜುಲೈ 18 ರಂದು ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12 ನೇ ತರಗತಿಯವರೆಗೆ) ರಜೆ ಘೋಷಿಸಿದ್ದಾರೆ.

ಐದು ತಾಲೂಕುಗಳಾದ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ಐದು ತಾಲೂಕುಗಳಿಗೆ ರಜೆ ಘೋಷೊಸಲಾಗಿದೆ. ಆದರೆ ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ.

ಸಂಭಾವ್ಯ ಪ್ರವಾಹ ಮತ್ತು ಭೂಕುಸಿತ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.ಸಾರ್ವಜನಿಕರು ಮತ್ತು ಪ್ರವಾಸಿಗರು ನೀರು, ಸರೋವರಗಳು, ನದಿ ದಡಗಳು ಮತ್ತು ಕಡಲತೀರಗಳಿರುವ ತಗ್ಗು ಪ್ರದೇಶಗಳನ್ನು ತಪ್ಪಿಸುವಂತೆ ಸೂಚಿಸಲಾಗಿದೆ.
ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಸಾರ್ವಜನಿಕರು ನದಿ, ಹೊಳೆ, ವಿದ್ಯುತ್ ಕಂಬ/ತಂತಿಗಳಿಂದ ದೂರ ಇರುವಂತೆ ಎಚ್ಚರಿಕೆ ನೀಡಲಾಗಿದೆ.
ಸಂಭವನೀಯ ಹಾನಿಯನ್ನು ತಡೆಗಟ್ಟಲು, ಸಾರ್ವಜನಿಕರು ಅಪಾಯಕಾರಿ ಸಂದರ್ಭಗಳನ್ನು ತಪ್ಪಿಸಬೇಕು ಮತ್ತು ಜಿಲ್ಲಾಡಳಿತದ ಸಲಹೆ ಮತ್ತು ಸೂಚನೆಗಳನ್ನು ಪಾಲಿಸಬೇಕು.

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಘಟನೆಗಳು ಅಥವಾ ಎಚ್ಚರಿಕೆಗಳು ಕಂಡುಬಂದಲ್ಲಿ, ಸಾರ್ವಜನಿಕರು ತಕ್ಷಣ ಆಯಾ ಪಂಚಾಯತ್ ಅಥವಾ ಜಿಲ್ಲಾ ಸ್ಥಳೀಯ ಸಂಸ್ಥೆಗಳಿಗೆ ತಿಳಿಸಬೇಕು.

ದೇವಸ್ಥಾನದಲ್ಲಿ ಜಾರಿ ಬಿದ್ದ ಎಚ್.ಡಿ.ರೇವಣ್ಣ, ಆಸ್ಪತ್ರೆಗೆ ದಾಖಲು

ಹಾಸನ: ಮಾಜಿ ಸಚಿವ ಹಾಗೂ ಹಾಲಿ ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ಅವರು ಬುಧವಾರ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆ ದಾಖಲಾಗಿದ್ದಾರೆ.

ಆಷಾಢಮಾಸ ನಿಮಿತ್ತ ಉಪವಾಸವಿದ್ದ ಎಚ್ ಡಿ ರೇವಣ್ಣ ಅವರು ಇಂದು ಹೊಳೆನರಸೀಪುರ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ಮನೆ ದೇವರು ಹರದನಹಳ್ಳಿಯ ಈಶ್ವರ ದೇವಾಲಯಕ್ಕೆ ತೆರಳಿದ್ದಾಗ ಕಾಲು ಜಾರಿಬಿದ್ದಿದ್ದು, ಪಕ್ಕೆಲುಬು ಮುರಿದಿದೆ ಎನ್ನಲಾಗಿದೆ.

ತಕ್ಷಣ ರೇವಣ್ಣ ಅವರನ್ನು ಹೊಳೆನರಸೀಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಾರಿನಲ್ಲಿಯೇ ಬೆಂಗಳೂರಿಗೆ ತೆರಳಿದರು. 

ಎಚ್. ಡಿ. ರೇವಣ್ಣ ಅವರು ಮಂಗಳವಾರ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಂಡಿದ್ದರು. ಅಪಾರ ದೈವ ಭಕ್ತರಾಗಿರುವ ರೇವಣ್ಣ ಅವರು ಇಂದು ಹೊಳೆನರಸೀಪುರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಬೇಕಿತ್ತು. ಹೀಗಾಗಿ ಹೊಳೆನರಸೀಪುರಕ್ಕೆ ತೆರಳಿದ್ದರು.

ಕರಾವಳಿ ಕರ್ನಾಟಕದ ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗೊಳಿಸಲಾಗುವುದು: ಕೇಂದ್ರ ಸಚಿವ ವಿ.ಸೋಮಣ್ಣ

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಬಾಕಿ ಉಳಿದಿರುವ ಹಲವಾರು ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಬುಧವಾರ ಭರವಸೆ ನೀಡಿದರು.

ರೈಲ್ವೆ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ವಿ ಸೋಮಣ್ಣ ಅವರು, ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆ ಗೇರಿಸಲು ಎರಡು ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ ವಹಿಸಲಾಗುವುದು. ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಉನ್ನತ ಮಟ್ಟದ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು ಎಂದು ಹೇಳಿದರು.

ಕಳೆದ 40 ವರ್ಷಗಳಿಂದ ಮಂಗಳೂರಿನ ರೈಲ್ವೆ ಅಭಿವೃದ್ಧಿ ಕುಂಠಿತವಾಗಿದ್ದು, ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು. ತಮಿಳುನಾಡು, ಕೇರಳ, ಗೋವಾ ಮತ್ತು ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಮಂಗಳೂರು ಮತ್ತು ಕಾರವಾರ ವಿಭಾಗದಲ್ಲಿ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ.

ಈ ನಿಟ್ಟಿನಲ್ಲಿ ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಟ್ಟುಗೂಡಿಸಿ ಎರಡು ತಿಂಗಳೊಳಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು ಎಂದರು.

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಸಮನ್ವಯ ಕೊರತೆ ಕಂಡು ಬರುತ್ತಿದೆ ಎಂದ ಸಚಿವರು, “ನಾವು ಸಾಮಾನ್ಯವಾಗಿ ಕರ್ನಾಟಕದಲ್ಲಿ ಮತ್ತು ವಿಶೇಷವಾಗಿ ಕರಾವಳಿಯಲ್ಲಿ ರೈಲ್ವೆ ನೆಟ್‌ವರ್ಕಿಂಗ್‌ಗೆ ಸಂಬಂಧಿಸಿದ ಸಮಗ್ರ ಅಭಿವೃದ್ಧಿಯನ್ನು ಯೋಜಿಸುತ್ತಿದ್ದೇವೆ” ಎಂದು ಹೇಳಿದರು.

ಕರಾವಳಿ ರೈಲ್ವೆ ಮೂಲಸೌಕರ್ಯಗಳ ಪರಿಶೀಲನಾ ಸಭೆಯಲ್ಲಿ, ಕರಾವಳಿ ರೈಲ್ವೆ ಅಭಿವೃದ್ಧಿ, ವಿಸ್ತರಣೆ ಮತ್ತು ಕರಾವಳಿ ಪ್ರದೇಶದ ಹೆಚ್ಚುವರಿ ಸೇವೆಗಳನ್ನು ನಿರ್ವಹಿಸುವ ಒಂದು ಪ್ರತೇಕ ವಲಯ ಹೊಂದುವುದು ಉತ್ತಮ ಎಂದು ಸಚಿವರು ಸೂಚಿಸಿದ್ದಾರೆ.

ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರು ರೈಲ್ವೆ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕೊಡಗಿನಲ್ಲಿ ಧಾರಾಕಾರ ಮಳೆ; ಜು.18 ರಂದು ಶಾಲೆಗಳಿಗೆ ರಜೆ

ಮಡಿಕೇರಿ: ಕೊಡಗು (Kodagu) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜು.18 ಮತ್ತು 19 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರಪೇಟೆಯ ಶಾಂತಳ್ಳಿಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 10 ಇಂಚು ಮಳೆ ಸುರಿದಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ವ್ಯಾಪ್ತಿಯ ಭಾಗಮಂಡಲದಲ್ಲಿ 7 ಇಂಚು ಮಳೆಯಾಗಿದೆ.

ಶಾಲೆಗಳಿಗೆ ರಜೆ
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಜು.18 ರಂದು ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಅಂಗನವಾಡಿ ಹಾಗೂ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಜೆ ಘೋಷಿಸಿದ್ದಾರೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1347.30 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 594.88 ಮಿ.ಮೀ ಮಳೆಯಾಗಿತ್ತು. 

ಬ್ರಹ್ಮಗಿರಿಯ ತಪ್ಪಲಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಏರ್ಪಟ್ಟಿರುವ ಕಾವೇರಿಯ ಪ್ರವಾಹದಿಂದ ನದಿ ಪಾತ್ರದ ಹಲ ಗ್ರಾಮಗಳ ಸಂಪರ್ಕ ಕಡಿತವಾಗಿದ್ದು, ಬಿರುಮಳೆಯಿಂದ ಜಿಲ್ಲೆಯಾದ್ಯಂತ ಅವಘಡಗಳ ಸರಮಾಲೆ ಮುಂದುವರೆದಿದೆ. ಭಾಗಮಂಡಲ ಮತ್ತು ತಲಕಾವೇರಿ ವ್ಯಾಪ್ತಿಯಲ್ಲಿ ಕಿರು ತೊರೆಗಳು ಉಕ್ಕಿ ಹರಿದು ಕಾವೇರಿಯ ಪ್ರವಾಹದ ಮಟ್ಟ ಮತ್ತಷ್ಟು ಹೆಚ್ಚಿದೆ. ಭಾಗಮಂಡಲದ ಅಯ್ಯಂಗೇರಿ ರಸ್ತೆ ಹಾಗೂ ಮಡಿಕೇರಿಯನ್ನು ಸಂಪರ್ಕಿಸುವ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, ಗ್ರಾಮೀಣರ ಬದುಕು ಅಸ್ತವ್ಯಸ್ತಗೊಂಡಿದೆ.

ಸೇತುವೆ ಮುಳುಗಡೆ
ದಕ್ಷಿಣ ಕೊಡಗಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿದು ಪ್ರವಾಹ ಏರ್ಪಟ್ಟಿದೆ. ಇದರ ಪರಿಣಾಮ ಶ್ರೀಮಂಗಲ-ನಾರಿ ಸೇತುವೆ ಮುಳುಗಡೆಯಾಗಿದ್ದು, ಸಮಪರ್ಕ ಕಡಿತಗೊಂಡಿದೆ. ಭಾರೀ ಮಳೆಯಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಇದರ ಪರಿಣಾಮ ಮಡಿಕೇರಿ-ವಿರಾಜಪೇಟೆ ಮುಖ್ಯ ರಸ್ತೆಯ ಬೇತ್ರಿ ಸೇತುವೆ ಮೇಲೆ ನೀರು ಬರಲು ಇನ್ನು ಕೆಲವೆ ಅಡಿ ಬಾಕಿ ಉಳಿದಿದೆ. ಮಳೆಯ ಪ್ರಮಾಣ ಹೆಚ್ಚಿದಲ್ಲಿ ಸೇತುವೆ ಮುಳುಗಡೆಯಾಗುವ ಸಂಭವವಿದೆ.

ಕಾವೇರಿ ನದಿ ಪಾತ್ರದಲ್ಲಿ ಬರುವ ನಾಪೋಕ್ಲುವಿನಿಂದ ಮೂರ್ನಾಡುವಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಬೊಳಿಬಾಣೆಯಲ್ಲಿ, ರಸ್ತೆಯ ಮೇಲೆ 4 ಅಡಿಯಷ್ಟು ಪ್ರವಾಹದ ನೀರು ಆವರಿಸಿದ್ದು, ಸಂಪರ್ಕ ಸಂಪೂರ್ಣ ಕಡಿತವಾಗಿದೆ. ಚೆರಿಯಪರಂಬು- ಕಲ್ಲುಮೊಟ್ಟೆ ಸಂಪರ್ಕರಸ್ತೆ, ನಾಪೋಕ್ಲು -ಬಲಮುರಿ ಮಾರ್ಗದ ಮಕ್ಕಿಕಡವು ರಸ್ತೆ ಜಾಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.

ಈ ಹಿನ್ನೆಲೆ ವಾಹನ ಸಂಚಾರ ನಾಪೋಕ್ಲು, ಕೊಟ್ಟಮುಡಿ, ಕೇಮಾಟ್, ಕುಯ್ಯಂಗೇರಿ, ಹೊದ್ದೂರು ಬಳಸು ಹಾದಿಯನ್ನು ಅವಲಂಬಿಸುವಂತಾಗಿದೆ. ನಾಪೋಕ್ಲು-ಕೊಟ್ಟಮುಡಿ ಬೆಟ್ಟಗೇರಿ ಮಡಿಕೇರಿ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ. ಮಳೆಯ ಅಬ್ಬರ ಇದೇ ರೀತಿ ಮುಂದುವರೆದರೆ ನಾಪೋಕ್ಲು- ಕೊಟ್ಟಮುಡಿ ಸಂಪರ್ಕ ರಸ್ತೆ ಸೇರಿದಂತೆ ನಾಪೋಕ್ಲು ವ್ಯಾಪ್ತಿಯ ಎಲ್ಲಾ ಪ್ರಮುಖ ರಸ್ತೆಗಳ ಸಂಚಾರ ಕಡಿತಗೊಳ್ಳುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist