ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡ ತಗ್ಗುತ್ತಿಲ್ಲ ಕೊರೊನಾ ಅಬ್ಬರ : ಮುಂದುವರಿಯುತ್ತಾ ಲಾಕ್ ಡೌನ್?

Twitter
Facebook
LinkedIn
WhatsApp
ದಕ್ಷಿಣ ಕನ್ನಡ  ತಗ್ಗುತ್ತಿಲ್ಲ ಕೊರೊನಾ ಅಬ್ಬರ : ಮುಂದುವರಿಯುತ್ತಾ ಲಾಕ್ ಡೌನ್?


ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹಾಗೂ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಆದ್ರೆ ರಾಜ್ಯ 8 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಅದ್ರಲ್ಲೂ ಕರಾವಳಿಯ ಬಂದರು ನಗರಿ ದಕ್ಷಿಣ ಕನ್ನಡ, ಅರಮನೆ ನಗರ ಮೈಸೂರು ಕೊರೊನಾ ಡೇಂಜರ್ ಸಿಟಿಯಾಗಿ ಮಾರ್ಪಟ್ಟಿದೆ.

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಇಳಿಕೆಯಾಗಿದೆ. ರಾಜ್ಯದಲ್ಲಿ 11 ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿ ಮಾಡಲಾಗಿದೆ. ಆದರೆ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಹೇರಿಕೆ ಮಾಡಲಾಗಿದೆ. ಈ ಪೈಕಿ ದಕ್ಷಿಣ ಕನ್ನಡ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿಲ್ಲ. ಈ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಶೇ.5ಕ್ಕಿಂತಲೂ ಹೆಚ್ಚಿದ್ದು, ಅಪಾಯಕಾರಿಯಾಗಿ ಮಾರ್ಪಟ್ಟಿದೆ.

ನಾರಾವಿ ,ಉಜಿರೆ , ಸುಬ್ರಮಣ್ಯ  ಸೇರಿ ದ.ಕ ದ 17 ಗ್ರಾಮ ಪಂಚಾಯತ್ ಸೀಲ್ ಡೌನ್.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿರೇಟ್ ಶೇ.10.07ರಷ್ಟಿದ್ದು ಜಿಲ್ಲೆಯಲ್ಲಿ 6.931 ಸಕ್ರೀಯ ಪ್ರಕರಣಗಳಿವೆ. ಇನ್ನು ಮೈಸೂರಿ ನಲ್ಲಿ ಶೇ.10ರಷ್ಟು ಪಾಸಿಟಿವಿ ರೇಟ್ ಇದ್ದರೆ, 8,346 ಸಕ್ರೀಯ ಪ್ರಕರಣಗಳಿವೆ. ಉಳಿದಂತೆ ಹಾಸನ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಶೇ.7.44 ಇದ್ದು, 5,733 ಸಕ್ರೀಯ ಪ್ರಕರಣಗಳಿವೆ. ಮಂಡ್ಯ ಜಿಲ್ಲೆಯಲ್ಲಿ ಶೇ.6.34ರಷ್ಟು ಪಾಸಿಟಿವಿಟಿ ರೇಟ್ ಇದ್ದರೆ, 2,989 ಕೊರೊನಾ ಪ್ರಕರಣಗಳಿವೆ. ಅತೀ ಹೆಚ್ಚು ಪಾಸಿಟಿವಿಟಿ ರೇಟ್ ಹೊಂದಿದ್ದ ಚಿಕ್ಕಮಗಳೂರಲ್ಲಿ ಕೊಂಚ ಮಟ್ಟಿಗೆ ಕಡಿಮೆ ಯಾಗಿದ್ರೂ ಕೂಡ ಜಿಲ್ಲೆಯಲ್ಲಿ ಶೇ.6 ಪಾಸಿಟಿವಿಟಿ ರೇಟ್ ಇದ್ದು, 2,926 ಮಂದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಶೇ 5.5 ಪಾಸಿಟಿವಿಟಿ ರೇಟ್, 1,451 ಸಕ್ರೀಯ ಪ್ರಕರಣವಿದೆ. ದಾವಣಗೆರೆಯಲ್ಲಿ ಶೇ.5.31 ಪಾಸಿಟಿವಿಟಿ ರೇಟ್ 2,584 ಸಕ್ರೀಯ ಪ್ರಕರಣಗಳಿದ್ದರೆ, ಚಾಮರಾಜನಗರದಲ್ಲಿ ಶೇ.5.32ರಷ್ಟು ಪಾಸಿಟಿವಿಟಿ ರೇಟ್ ಹಾಗೂ 2,584 ಸಕ್ರೀಯ ಪ್ರಕರಣಗಳಿವೆ.

 

ಇಳಿಕೆ ಯತ್ತ ಕೋವಿಡ್ ಪ್ರಕರಣಗಳು. ಎರಡು ತಿಂಗಳಲ್ಲಿ ಕಡಿಮೆ ಪ್ರಕರಣಗಳು ದಾಖಲು!!

ಅತೀ ಹೆಚ್ಚು ಸಕ್ರೀಯ ಪ್ರಕರಣ ಹಾಗೂ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ, ಮೈಸೂರು ಹಾಗೂ ಹಾಸನ ಜಿಲ್ಲೆಗಳು ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಡುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದಲೂ ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೂಡ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು