ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಟ್ಟ ಮಂಜಿನಿಂದ ಕಾಣದಂತಾದ ರಸ್ತೆ – ಸರಣಿ ಅಪಘಾತದಿಂದಾಗಿ 22 ವಾಹನಗಳು ಜಖಂ

Twitter
Facebook
LinkedIn
WhatsApp
ದಟ್ಟ ಮಂಜಿನಿಂದ ಕಾಣದಂತಾದ ರಸ್ತೆ – ಸರಣಿ ಅಪಘಾತದಿಂದಾಗಿ 22 ವಾಹನಗಳು ಜಖಂ

ಚಂಡೀಗಢ: ದಟ್ಟ ಮಂಜಿನಿಂದಾಗಿ (Fog) ರಸ್ತೆ ಕಾಣದಂತಾಗಿ ಒಂದೇ ಹೆದ್ದಾರಿಯಲ್ಲಿ 22 ವಾಹನಗಳು ಸರಣಿ ಅಪಘಾತಕ್ಕೀಡಾಗಿರುವ (Serial Accident) ಘಟನೆ ಹರಿಯಾಣದಲ್ಲಿ (Haryana) ನಡೆದಿದೆ.

ಭಾನುವಾರ ಯಮುನಾ ನಗರದ ಬಳಿ ಅಂಬಲಾ-ಸಹಾರಪುರ ಹೆದ್ದಾರಿಯಲ್ಲಿ ಒಟ್ಟು 22 ವಾಹನಗಳು ಅಪಘಾತಕ್ಕೀಡಾಗಿವೆ. ಘಟಯಲ್ಲಿ 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ರದೇಶದಲ್ಲಿ ದಟ್ಟವಾದ ಮಂಜು ಕವಿದಿದ್ದ ಕಾರಣ ರಸ್ತೆ ಸ್ಪಷ್ಟವಾಗಿ ಕಾಣಿಸದೇ ಅಪಘಾತಗಳು ಸಂಭವಿಸಿವೆ.

ಘಟನೆಯಲ್ಲಿ ಹಲವು ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ತಕ್ಷಣವೇ ಪೊಲೀಸರು ಸ್ಥಳಕ್ಕಾಗಮಿಸಿ ವಾಹನಗಳನ್ನು ತೆರವುಗೊಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಟ್ರಾಫಿಕ್ ಎಸ್‌ಹೆಸ್‌ಒ ಲೊಕೇಶ್ ಕುಮಾರ್ ತಿಳಿಸಿದ್ದಾರೆ.

ವರದಿಗಳ ಪ್ರಕಾರ ಅಪಘಾತಕ್ಕೀಡಾದ ಮೊದಲ ವಾಹನದ ಪ್ರಯಾಣಿಕರು ವಾಹನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಇನ್ನೊಂದು ವಾಹನ ಡಿಕ್ಕಿ ಹೊಡೆದಿದೆ. ಹೀಗೆ ಹಲವು ವಾಹನಗಳು ಸರಣಿ ಅಪಘಾತಕ್ಕೀಡಾಗಿವೆ. ಸದ್ಯ ಘಟನೆಯಲ್ಲಿ ಯಾವುದೇ ಸಾವು ವರದಿಯಾಗಿಲ್ಲ. ವಾಹನ ಚಾಲಕರಿಗೆ ವಾಹನವನ್ನು ನಿಧಾನವಾಗಿ ಚಲಾಯಿಸುವಂತೆ ಮನವಿ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ