ಸೋಮವಾರ, ಏಪ್ರಿಲ್ 29, 2024
ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು; ಹೈಕೋರ್ಟ್ ಮಹತ್ವದ ಆದೇಶ

Twitter
Facebook
LinkedIn
WhatsApp
ಬಾಲಕಿ ಜೊತೆ ಒತ್ತಾಯದ ಲೈಂಗಿಕ ಕ್ರಿಯೆ: ಆರೋಪಿ ಅರ್ಜಿ ವಜಾ

ಬೆಂಗಳೂರು: ನೈಸರ್ಗಿಕ ಮಕ್ಕಳು ಹಾಗೂ ದತ್ತು ಮಕ್ಕಳಿಗೂ ಯಾವುದೇ ವ್ಯತ್ಯಾಸವಿಲ್ಲ. ಹೀಗಾಗಿ ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯವು ಮಹತ್ವದ ಆದೇಶ ಹೊರಡಿಸಿದೆ. ನೈಸರ್ಗಿಕ ಮಕ್ಕಳು ಹಾಗೂ ದತ್ತು ಮಕ್ಕಳ ನಡುವೆ ವ್ಯತ್ಯಾಸ ಮಾಡಿದರೆ ದತ್ತು ತೆಗೆದುಕೊಳ್ಳುವ ಉದ್ದೇಶ ನಿರರ್ಥಕವಾಗಲಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠವು ಅಭಿಪ್ರಾಯ ವ್ಯಕ್ತಪಡಿಸಿದೆ. 

ಅಭಿಯೋಜನೆ ವಿಭಾಗದಲ್ಲಿ ದಲಾಯತ್ ಆಗಿದ್ದ ವಿನಾಯಕ್ ಮುತ್ತತ್ತಿ ಅವರು 2010ರಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪದ ನೌಕರಿಗೆ ಗಿರೀಶ್ ಅವರು ಅರ್ಜಿ ಹಾಕಿದ್ದರು. ಆದರೆ ಗಿರೀಶ್ ಅವರು ವಿನಾಯಕ್ ಅವರ ದತ್ತು ಪುತ್ರನೆಂಬ ಕಾರಣಕ್ಕೆ ಅನುಕಂಪದ ನೌಕರಿ ನಿರಾಕರಿಸಲಾಗಿತ್ತು.

ದತ್ತುಪುತ್ರನೆಂಬ ಕಾರಣಕ್ಕೆ ಅನುಕಂಪದ ನೌಕರಿ ನಿರಾಕರಿಸಿದ ಹಿನ್ನೆಲೆ ಗಿರೀಶ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿ ಅನುಕಂಪದಡಿ ನೌಕರಿ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಗಿರೀಶ್ ಅವರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾ.ಸೂರಜ್ ಗೋವಿಂದರಾಜ್, ಜಿ.ಬಸವರಾಜರವರಿದ್ದ ವಿಭಾಗೀಯ ಪೀಠ, ದತ್ತು ಸ್ವೀಕಾರದ ಉದ್ದೇಶವನ್ನು ಮನಗಂಡು ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ