ಮಂಗಳವಾರ, ಮೇ 21, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ್ವಿತೀಯ ಪಿಯುಸಿ ಪಲಿತಾಂಶ ಯಾವಾಗ? ರಿಸಲ್ಟ್ ನೋಡುವುದು ಹೇಗೆ.!

Twitter
Facebook
LinkedIn
WhatsApp
ದ್ವಿತೀಯ ಪಿಯುಸಿ ಪಲಿತಾಂಶ ಯಾವಾಗ? ರಿಸಲ್ಟ್ ನೋಡುವುದು ಹೇಗೆ.!

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು (PU Board) ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು (Second PU Result) 2024 ರ ಏಪ್ರಿಲ್ 3 ನೇ ವಾರದಲ್ಲಿ ಘೋಷಿಸುವ ನಿರೀಕ್ಷೆಯಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ವೈಯಕ್ತಿಕ ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶವನ್ನು ಎಲ್ಲಿ, ಹೇಗೆ ಪರಿಶೀಲಿಸಬಹುದು?

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಎರಡು ವೆಬ್‌ಸೈಟ್‌ಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅವುಗಳೆಂದರೆ, karresults.nic.in ಮತ್ತು pue.kar.nic. ಆನ್‌ಲೈನ್‌ನಲ್ಲಿ ತಾತ್ಕಾಲಿಕ ಮಾರ್ಕ್‌ಶೀಟ್ ಡೌನ್‌ಲೋಡ್ ಮಾಡುವುದು ಹೇಗೆಂಬ ಹಂತ-ಹಂತದ ಮಾಹಿತಿ ಇಲ್ಲಿದೆ.

  • ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಹೋಗಿ- karresults.nic.in ಅಥವಾ pue.kar.nic
  • ಹಂತ 2: ವೆಬ್​ಸೈಟ್​​ನ ಮುಖಪುಟದಲ್ಲಿ KSEAB PUC ಫಲಿತಾಂಶ 2024 ಕ್ಕಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಹಂತ 3: ನಿಮ್ಮ ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸಿ.
  • ಹಂತ 4: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2024 ಎಂಬ ಸಂದೇಶ ಸ್ಕ್ರೀನ್​​ ಮೇಲೆ ಕಾಣಿಸುತ್ತದೆ.
  • ಹಂತ 5: ಸ್ಕೋರ್‌ಕಾರ್ಡ್ ಅನ್ನು ವೀಕ್ಷಿಸಿ ಮತ್ತು ಡೌನ್‌ಲೋಡ್ ಮಾಡಿ.

2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದಾರೆ. ಅವರು ಪ್ರಸ್ತುತ 2024 ರ ದ್ವಿತೀಯ ಪಿಯುಸಿ ಫಲಿತಾಂಶಗಳ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಮಂಡಳಿಯು ಫಲಿತಾಂಶಗಳ ಜೊತೆಗೆ, ಉತ್ತೀರ್ಣದ ಪ್ರಮಾಣ, ಟಾಪರ್ಸ್ ಮತ್ತು ಇತರ ಅಂಕಿಅಂಶಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.

2023 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದರು. ವಿದ್ಯಾರ್ಥಿನಿಯರ ಪೈಕಿ ಶೇಕಡಾ 80.25 ರಷ್ಟು ಉತ್ತೀರ್ಣರಾಗಿದ್ದರೆ, ವಿದ್ಯಾರ್ಥಿಗಳ ಪೈಕಿ ಶೇಕಡಾ 69.05 ರಷ್ಟು ಉತ್ತೀರ್ಣರಾಗಿದ್ದರು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇಕಡಾ 74.67 ರಷ್ಟಿತ್ತು. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹೆಚ್ಚಳದಲ್ಲಿ ಸ್ಥಿರತೆ ಕಂಡುಬಂದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ