ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಾಂತೇವಾಡದಲ್ಲಿ ಬಸ್‌ಗೆ ಬೆಂಕಿ ಹಚ್ಚಿದ ನಕ್ಸಲೀಯರು, ಪ್ರಯಾಣಿಕರು ಸುರಕ್ಷಿತ

Twitter
Facebook
LinkedIn
WhatsApp
CHHATISGAD

ದಾಂತೇವಾಡಾ: ಛತ್ತೀಸ್‌ಗದ ದಾಂತೇವಾಡ ಜಿಲ್ಲೆಯಲ್ಲಿ ಶನಿವಾರ ನಕ್ಸಲೀಯರು ಪ್ರಯಾಣಿಕರನ್ನು ಕೆಳಗಿಳಿಸುವಂತೆ ಹೇಳಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಖಾಸಗಿ ಪ್ಯಾಸೆಂಜರ್ ಬಸ್ ನಾರಾಯಣಪುರ ಪಟ್ಟಣದಿಂದ ದಂತೇವಾಡಕ್ಕೆ ತೆರಳುತ್ತಿದ್ದಾಗ ಮಾಲೆವಾಹಿ ಮತ್ತು ಬೋಡ್ಲಿ ಪೊಲೀಸ್ ಶಿಬಿರಗಳ ನಡುವೆ ಬೆಳಗ್ಗೆ ಈ ಘಟನೆ ಸಂಭವಿಸಿದೆ ಎಂದು ದಾಂತೇವಾಡ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಕೆ. ಬರ್ಮನ್ ತಿಳಿಸಿದ್ದಾರೆ.

“ಸುಮಾರು ಎರಡು ಡಜನ್ ಮಾವೋವಾದಿಗಳು, ಶಸ್ತ್ರಸಜ್ಜಿತರಾಗಿ, ಬಸ್ ಅನ್ನು ನಿಲ್ಲಿಸಿ ಪ್ರಯಾಣಿಕರನ್ನು ಇಳಿಯಲು ಅನುಮತಿಸಿದ ನಂತರ ಅದನ್ನು ಸುಟ್ಟುಹಾಕಿದರು. ಪ್ರಯಾಣಿಕರಿಗೆ ಅಥವಾ ಸಿಬಂದಿಗೆ ಯಾವುದೇ ಹಾನಿಯಾಗಿಲ್ಲ. ಪ್ರಯಾಣಿಕರನ್ನು ಅವರವರ ಸ್ಥಳಗಳಿಗೆ ಕಳುಹಿಸಲಾಗಿದೆ.ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ನಕ್ಸಲೀಯರ ವಿರುದ್ಧ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಅವರು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ