ಸೋಮವಾರ, ಜೂನ್ 24, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಾಂಪತ್ಯ ಜೀವನದಲ್ಲಿ ವಿಚ್ಛೇದನಕ್ಕೆ ಮುಂದಾದರೇ ಚಂದನ ಶೆಟ್ಟಿ ಮತ್ತು ನಿವೇದಿತಾ ಗೌಡ..?

Twitter
Facebook
LinkedIn
WhatsApp
ದಾಂಪತ್ಯ ಜೀವನದಲ್ಲಿ ವಿಚ್ಛೇದನಕ್ಕೆ ಮುಂದಾದರೇ ಚಂದನ ಶೆಟ್ಟಿ ಮತ್ತು ನಿವೇದಿತಾ ಗೌಡ..?

ಗಾಯಕ ಚಂದನ್ ಶೆಟ್ಟಿ  ಮತ್ತು ನಟಿ ನಿವೇದಿತಾ ಗೌಡ ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ. ಹಾಗಾಗಿ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇಂದೇ (ಜೂನ್​ 7) ಅವರು ಡಿವೋರ್ಸ್​  ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ. 2017ರಲ್ಲಿ ಪ್ರಸಾರವಾದ ‘ಬಿಗ್​ ಬಾಸ್​ ಕನ್ನಡ ಸೀಸನ್​ 5’ ಶೋನಲ್ಲಿ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಅವರು ಪರಸ್ಪರ ಪರಿಚಯ ಆಗಿದ್ದರು. ಅವರಿಬ್ಬರ ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್​ ಶೆಟ್ಟಿ ಅವರು ಪ್ರಪೋಸ್​ ಮಾಡಿದ್ದರು. ಬಳಿಕ ಅವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಚಂದನ್​ ಶೆಟ್ಟಿ ಅವರು ವಿನ್ನರ್​ ಆದರೆ, ನಿವೇದಿತಾ ಗೌಡ ಅವರು ಮೂರನೇ ರನ್ನರ್​ ಅಪ್​ ಆಗಿದ್ದರು. ಆ ಶೋನಿಂದ ಇಬ್ಬರ ಖ್ಯಾತಿಯೂ ಹೆಚ್ಚಿತು. ಬಿಗ್​ ಬಾಸ್​ ಮುಗಿದ ಬಳಿಕ ನಿವೇದಿತಾ ಗೌಡ ಅವರು ಇನ್ನೂ ಕೆಲವು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡರು. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಖತ್ ಫೇಮಸ್​ ಆಗಿದ್ದಾರೆ. ಚಿತ್ರರಂಗದಲ್ಲಿ ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಹಾಗೂ ನಟನಾಗಿ ಚಂದನ್​ ಶೆಟ್ಟಿ ಬ್ಯುಸಿ ಆಗಿದ್ದಾರೆ. ವೃತ್ತಿಜೀವನಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮನಸ್ಥಾಪ ಉಂಟಾಗಿರುವ ಸಾಧ್ಯತೆ ಇದೆ.

ಸೋಶಿಯಲ್​ ಮೀಡಿಯಾದಲ್ಲಿ ನಿವೇದಿತಾ ಗೌಡ ತುಂಬ ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಅವರು ಹೊಸ ಹೊಸ ರೀಲ್ಸ್​ ಹಂಚಿಕೊಳ್ಳುತ್ತಾರೆ. ಅವರ ಪೋಸ್ಟ್​ಗಳು ಇನ್​ಸ್ಟಾಗ್ರಾಮ್​ನಲ್ಲಿ ವೈರಲ್​ ಆಗುತ್ತವೆ. ಅದಕ್ಕೆ ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಾರೆ. ನಿವೇದಿತಾ ಗೌಡ ಅವರ ಪೋಸ್ಟ್​ಗೆ ಒಂದಷ್ಟು ಜನರು ನೆಗೆಟಿವ್​ ಕಮೆಂಟ್​ ಮಾಡುತ್ತಾರೆ. ಆ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಂತಿಲ್ಲ. ಕಮೆಂಟ್​ಗಳಲ್ಲಿ ಅನೇಕರು ಚಂದನ್​ ಶೆಟ್ಟಿಯ ಹೆಸರನ್ನೂ ಆಗಾಗ ಎಳೆದು ತರುತ್ತಾರೆ. ಈ ಕಾರಣದಿಂದಲೂ ಸಂಸಾರದಲ್ಲಿ ಏನಾದರೂ ಕಿರಿಕ್​ ಆಗಿರಬಹುದೇ ಎಂದು ಕೂಡ ಕೆಲವರು ಊಹಿಸುತ್ತಿದ್ದಾರೆ.

ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಇದೆ. ಈವರೆಗೂ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಸಾರ್ವಜನಿಕವಾಗಿ ಮನಸ್ತಾಪ ಹೊರಹಾಕಿರಲಿಲ್ಲ. ಏಕಾಏಕಿ ಅವರ ವಿಚ್ಛೇದನದ ಬಗ್ಗೆ ಸುದ್ದಿ ಕೇಳಿಬಂದಿರುವುದರಿಂದ ಅಭಿಮಾನಿಗಳಿಗೆ ಮತ್ತು ನೆಟ್ಟಿಗರಿಗೆ ಅಚ್ಚರಿ ಆಗಿದೆ. ಈ ಬಗ್ಗೆ ಚಂದನ್​ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಕುಟುಂಬದವರು ಹೇಳಿಕೆ ನೀಡಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ