ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 1.5ಕೋಟಿ ರೂ. ವಶಕ್ಕೆ
Twitter
Facebook
LinkedIn
WhatsApp
ಬೆಳಗಾವಿ: ವಿಧಾನಸಭೆ ಚುನಾವಣೆಯ ಸಮಯದಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿರುವ ಕೋಟಿ ಕೋಟಿ ಹಣ ಪತ್ತೆಯಾಗುತ್ತಿದ್ದು, ಬುಧವಾರ ಮಧ್ಯರಾತ್ರಿ ನಿಪ್ಪಾಣಿ ಬಳಿಯ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ 1.5 ಕೋಟಿ ಹಣವನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ವ್ಯಕ್ತಿಯೊಬ್ಬರು ಮುಂಬೈದಿಂದ ಖಾಸಗಿ ಬಸ್ ದಲ್ಲಿ ಬರುತ್ತಿದ್ದಾಗ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಬಸ್ ತಪಾಸಣೆ ಮಾಡಿದಾಗ ಯಾವುದೇ ದಾಖಲೆಗಳಿಲ್ಲದೆ ತೆಗೆದುಕೊಂಡು ಹೋಗುತ್ತಿದ್ದ 1.5 ಕೋಟಿ ಹಣ ಪತ್ತೆಯಾಗಿದೆ.
ಹಣವನ್ನು ವಶಪಡಿಸಿಕೊಂಡಿರುವ ಪೊಲೀಸರು ಆದಾಯ ತೆರಿಗೆ ಇಲಾಖೆಯ ಸುಪರ್ದಿಗೆ ಹಣ ಒಪ್ಪಿಸಿ ಮುಂದಿನ ತನಿಖೆ ನಡೆಸಿದ್ದಾರೆ.