ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್ ಮ್ಯಾನ್ 70.3 ರೇಸ್' ಪೂರ್ಣಗೊಳಿಸಿದ ಮೊದಲ ಸಂಸದ

ಬಿಜೆಪಿಯಿಂದ ಎರಡು ಬಾರಿ ಸಂಸದರಾಗಿರುವ ತೇಜಸ್ವಿ ಸೂರ್ಯ ಅವರು ಮತ್ತೊಂದು ಕ್ಷೇತ್ರದಲ್ಲಿ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 (Ironman70.3) ಟ್ರಯಥ್ಲಾನ್ ರೇಸ್‌ನಲ್ಲಿ ಸ್ಪರ್ಧಿಸಿ, 8 ಗಂಟೆ 27 ನಿಮಿಷ 32 ಸೆಕೆಂಡ್‌ಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
ದಾಖಲೆ ಬರೆದ ತೇಜಸ್ವಿ ಸೂರ್ಯ
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಎಂಡ್ಯೂರೆನ್ಸ್ ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಮೊದಲ ಜನ ಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸ್ಫರ್ಧೆಯು 1900 ಮೀಟರ್ ಈಜು, 90 ಕಿ.ಮೀ ಸೈಕ್ಲಿಂಗ್ ಮತ್ತು 21.1 ಕಿ.ಮೀ ಓಟ ಹೀಗೆ 3 ವಿಭಾಗಗಳಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಪಾಲ್ಗೊಂಡ ತೇಜಸ್ವಿ ಸೂರ್ಯ ಅವರುಸ 8 ಗಂಟೆ, 27 ನಿಮಿಷ ಮತ್ತು 32 ಸೆಕೆಂಡುಗಳಲ್ಲಿ ಈ ಎಲ್ಲ ಚಟುವಟಿಕೆಗಳನ್ನು ಪೂರ್ಣಗೊಳಿಸುವ ಮೂಲಕ ಗೆಲುವು ಸಾಧಿಸಿದರು. ಈ ಮೂಲಕ ಐರನ್ ಮ್ಯಾನ್ 70.3 ರೇಸ್ ಯಶಸ್ವಿಯಾಗಿ ಪೂರೈಸಿದ ಮೊದಲ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ತೇಜಸ್ವಿ ಸೂರ್ಯ ಅವರು ತಮ್ಮ ಸಾಧನೆಯನ್ನು ಭಾರತದ ಕ್ರೀಡಾಪಟುಗಳು ಮತ್ತು ಕ್ರೀಡಾ ಆಟಗಾರರಿಗೆ ಅರ್ಪಿಸಿದರು.
‘ಗೋವಾ ಐರನ್ ಮ್ಯಾನ್ ಕ್ರೀಡೆಗೆ ಹೆಸರುವಾಸಿ. 50ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳು ಈ ರೇಸ್‌ನಲ್ಲಿ ಪಾಲ್ಗೊಂಡಿರುವುದು ವಿಶೇಷ. ಈ ಸ್ಪರ್ಧೆಯಲ್ಲಿ ಭಾಗವಹಿಸುವುದು ಕಠಿಣ ಸವಾಲಾಗಿದ್ದು, ಕಳೆದ 4 ತಿಂಗಳಿಂದ ಕಠಿಣ ತರಬೇತಿ ಪಡೆದಿದ್ದೆ. ಸ್ವಾಮಿ ವಿವೇಕಾನಂದ ಅವರ ಸ್ಫೂರ್ತಿದಾಯಕ ಸಂದೇಶ ಹಾಗೂ ಪ್ರಧಾನಿ ಮೋದಿ ಅವರ ‘ಫಿಟ್ ಇಂಡಿಯಾ’ ಉಪಕ್ರಮವು ಇಂತಹ ಸವಾಲನ್ನು ಕೈಗೊಳ್ಳಲು ಪ್ರೇರಕ. ಫಿಟ್ ಇಂಡಿಯಾ ಅಭಿಯಾನ ನನ್ನ ಇಂದಿನ ಅಭಿಯಾನಕ್ಕೆ ಸ್ಪೂರ್ತಿ.
ನನ್ನ ದೈಹಿಕ ಸಾಮರ್ಥ್ಯವು ದೇಶದ ಅಭ್ಯುದಯಕ್ಕೆ ಸಹಕಾರಿಯಾಗಲಿದೆ ಎಂಬ ವಿಶ್ವಾಸ ಮೂಡಿದೆ. ದೊಡ್ಡ ಮಹತ್ವಾಕಾಂಕ್ಷೆಗಳನ್ನು ಬೆನ್ನಟ್ಟುತ್ತಿರುವ ಭಾರತವು ಯುವ ರಾಷ್ಟ್ರವಾಗಿ ರೂಪುಗೊಳಿಸುವಲ್ಲಿ ನಮ್ಮ ದೈಹಿಕ ಸಾಮರ್ಥ್ಯ ಪೋಷಿಸುವಲ್ಲಿ ಹೆಚ್ಚಿನ ಉತ್ತೇಜನ ದೊರಕಿದ್ದು, ಭಾರತವನ್ನು ಆರೋಗ್ಯಕರ ರಾಷ್ಟ್ರವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
ಈ ಮೂಲಕ ನಮ್ಮ ದೈಹಿಕ ಸಾಮರ್ಥ್ಯವನ್ನು ಸ್ಥಿರವಾಗಿಸಿಕೊಳ್ಳುವ ಮೂಲಕ ಯಾವುದೇ ಉದ್ಯಮದಲ್ಲಿ ಯಶಸ್ಸಿನ ಸಾಧ್ಯತೆಗಳನ್ನು ಸುಧಾರಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ತೇಜಸ್ವಿ ಸೂರ್ಯ ಅವರ ಸಾಧನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಶಂಸನೀಯ ಸಾಧನೆ!. ಫಿಟ್‌ನೆಸ್ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇದು ಅನೇಕ ಯುವಕರಿಗೆ ಸ್ಪೂರ್ತಿ ನೀಡಲಿದೆ ಎಂಬ ಖಾತರಿ ನನಗಿದೆ’ ಎಂದು ಹೇಳಿದ್ದಾರೆ.
ಮೋದಿಯವರ ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ ಅವರು, ನಿಮ್ಮ ಫಿಟ್ನೆಸ್ ಮತ್ತು ಶಕ್ತಿ ನಮಗೆಲ್ಲರಿಗೂ ಸ್ಫೂರ್ತಿಯಾಗಿದೆ. ನಿಮ್ಮ ಈ ಮಾತುಗಳಿಗೆ ಧನ್ಯವಾದಗಳು. ಖೇಲೋ ಇಂಡಿಯಾ ಮತ್ತು ಫಿಟ್ ಇಂಡಿಯಾ ಆಂದೋಲನವು ದೈಹಿಕ ಸಾಮರ್ಥ್ಯಕ್ಕೆ ಆದ್ಯತೆ ನೀಡುವ ಸಂಸ್ಕೃತಿಯನ್ನು ಹೊಂದಿದ್ದು, ಇದರಿಂದ ಇಡೀ ದೇಶವು ಪ್ರಯೋಜನ ಪಡೆಯುತ್ತಿದೆ. ನಿಮ್ಮ ಸಂದೇಶವನ್ನು ಮತ್ತಷ್ಟು ಮುಂದೆ ಕೊಂಡೊಯ್ಯಲು ಮತ್ತು ಹೆಚ್ಚಿನ ಯುವಕರನ್ನು ಫಿಟ್‌ನೆಸ್ ಅನುಸರಿಸುವಂತೆ ಮಾಡುವ ಉದ್ದೇಶವನ್ನು ನಾನು ಹೊಂದಿದ್ದೇನೆಂದು ಹೇಳಿದ್ದಾರೆ.
ದಿ ಐರನ್ ಮ್ಯಾನ್ 70.3 ಟ್ರಯಥ್ಲಾನ್ ಎಂಬುದು ಓಟ, ಈಜು ಹಾಗೂ ಸೈಕ್ಲಿಂಗ್ ಒಳಗೊಂಡ ರೇಸ್ ಆಗಿದೆ. ವಿಶ್ವ ಟ್ರಯಥ್ಲಾನ್ ಕಾರ್ಪೊರೇಷನ್ ಎಂಬ ಸಂಸ್ಥೆ ಇದನ್ನು ಜಗತ್ತಿನಾದ್ಯಂತ ನಡೆಸುತ್ತದೆ. ಭಾರತದಲ್ಲಿ ಗೋವಾದಲ್ಲಿ ಮಾತ್ರ ಇದು ನಡೆಯುತ್ತದೆ.
50ಕ್ಕೂ ಹೆಚ್ಚು ದೇಶಗಳ ಅಥ್ಲೀಟ್ ಭಾಗಿ
ತೇಜಸ್ವಿ ಸೂರ್ಯ ಅವರು 2022ರ ಗೋವಾ 70.3 ಐರನ್ ಮ್ಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅದರಲ್ಲಿ ಅವರು ರಿಲೇ ತಂಡದ ಭಾಗವಾಗಿ, 90 ಕಿಮೀ ಸೈಕ್ಲಿಂಗ್ ವಿಭಾಗವನ್ನು ಪೂರ್ಣಗೊಳಿಸಿದ್ದರು.
ಅಥ್ಲೀಟ್‌ಗಳು ಮತ್ತು ಫಿಟ್ನೆಸ್ ಉತ್ಸಾಹಿಗಳನ್ನು ಆಕರ್ಷಿಸುವ ಈ ಪ್ರತಿಷ್ಠಿತ ಕಾರ್ಯಕ್ರಮವು 50ಕ್ಕೂ ಹೆಚ್ಚು ದೇಶಗಳ ಅಥ್ಲೀಟ್‌ಗಳನ್ನು ಸೆಳೆದಿದೆ. ಈ ವರ್ಷ ಕೇಂದ್ರ ಹಾಗೂ ರಾಜ್ಯ ಸರಕಾರಿ ಸೇವೆಗಳ 120ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಶೇ 60ಕ್ಕೂ ಅಧಿಕ ಭಾಗಿದಾರರು ಮೊದಲ ಬಾರಿಗೆ ಇದರಲ್ಲಿ ಭಾಗವಹಿಸಿದ್ದು ವಿಶೇಷ.
ಭಾರತದ ಮೊದಲ ಖಾಸಗಿ ಯುದ್ಧವಿಮಾನ ತಯಾರಿಕೆಯ ಘಟಕ ಗುಜರಾತ್ನ ವಡೋದರಾದಲ್ಲಿ ಚಾಲನೆ:
ವಡೋದರಾ: ಭಾರತದ ಮೊದಲ ಖಾಸಗಿ ಯುದ್ಧವಿಮಾನ ತಯಾರಿಕೆಯ ಘಟಕ ಗುಜರಾತ್ನ ವಡೋದರಾದಲ್ಲಿ ಚಾಲನೆಗೊಂಡಿದೆ. ಟಾಟಾ ಏರ್ಕ್ರಾಫ್ಟ್ ಕಾಂಪ್ಲೆಕ್ಸ್ನಲ್ಲಿ ಸಿ-295 ವಿಮಾನ ತಯಾರಿಕೆಯ ಘಟಕ ಇದಾಗಿದೆ. ಸ್ಪೇನ್ ಪ್ರಧಾನಿ ಪೆಡ್ರೋ ಸಾಂಚೆಜ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ ಈ ಕಾಂಪ್ಲೆಕ್ಸ್ ಅನ್ನು ಉದ್ಘಾಟನೆ ಮಾಡಿದ್ದಾರೆ.
ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ನ ಕ್ಯಾಂಪಸ್ನಲ್ಲಿರುವ ಈ ಘಟಕದಲ್ಲಿ ಸ್ಪೇನ್ ಮೂಲದ ವಿಮಾನ ತಯಾರಿಕೆಯ ಸಂಸ್ಥೆ ಏರ್ಬಸ್ ಸಹಯೋಗದಲ್ಲಿ ಸಿ-295 ಮಿಲಿಟರಿ ವಿಮಾನಗಳನ್ನು ತಯಾರಿಸಲಾಗುತ್ತದೆ. ಒಟ್ಟಾರೆ ಈ ಯೋಜನೆಯಲ್ಲಿ 56 ವಿಮಾನಗಳ ತಯಾರಿಕೆಗೆ ಒಪ್ಪಂದವಾಗಿದೆ.
ಏರ್ಬಸ್ ಸಂಸ್ಥೆ ತನ್ನ ದೇಶದಲ್ಲಿರುವ ತಯಾರಿಕಾ ಘಟಕದಿಂದ 16 ವಿಮಾನಗಳನ್ನು ತಯಾರಿಸಿ ಅಲ್ಲಿಂದಲೇ ನೇರವಾಗಿ ಭಾರತಕ್ಕೆ ಕಳುಹಿಸಲಿದೆ. ಇನ್ನುಳಿದ 40 ವಿಮಾನಗಳನ್ನು ಟಾಟಾ ಸಂಸ್ಥೆಯ ವಡೋದರಾ ಫ್ಯಾಕ್ಟರಿಯಲ್ಲಿ ತಯಾರಿಸಲಾಗುತ್ತದೆ.
ಭಾರತ ಮತ್ತು ಸ್ಪೇನ್ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಪೆಡ್ರೋ ಸಾಂಚೆಜ್ ಅವರು ಟಾಟಾ ಘಟಕಕ್ಕೆ ಚಾಲನೆ ನೀಡುವ ಮುನ್ನ ಏರ್ಪೋರ್ಟ್ನಿಂದ ಎರಡೂವರೆ ಕಿಮೀ ದೂರ ರೋಡ್ಶೋ ನಡೆಸಿದರು. ಈ ಘಟಕದ ಉದ್ಘಾಟನೆಯನ್ನು ಭಾರತೀಯ ವಾಯುಯಾನ ಉದ್ಯಮಕ್ಕೆ ಒಂದು ವಿಶೇಷ ದಿನ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ.
‘ಸಿ-295 ಯೋಜನೆಯು ಭಾರತೀಯ ಖಾಸಗಿ ಉದ್ಯಮಕ್ಕೆ ಮಹತ್ತರ ಮೈಲಿಗಲ್ಲಾಗಿದೆ. ಖಾಸಗಿ ಕಂಪನಿಯೊಂದು ಇದೇ ಮೊದಲ ಬಾರಿಗೆ ಭಾರತದಲ್ಲಿ ಸಂಪೂರ್ಣ ಮಿಲಿಟರಿ ವಿಮಾನವನ್ನು ತಯಾರಿಸಲಾಗುತ್ತಿದೆ. ಭಾರತದಲ್ಲಿ ಬೆಳವಣಿಗೆ ಹೊಂದುತ್ತಿರುವ ಏರೋಸ್ಪೇಸ್ ಇಕೋಸಿಸ್ಟಂಗೆ ಈ ಯೋಜನೆ ಒಳ್ಳೆಯ ಪುಷ್ಟಿ ನೀಡಲಿದೆ,’ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.