ಮಂಗಳವಾರ, ಮೇ 21, 2024
ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಸುರಕ್ಷಾ ಸಮಿತಿ ಮತ್ತು ಎದ್ದೇಳು ಕರ್ನಾಟಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇವೇಗೌಡರ ಪಕ್ಷವನ್ನು ಕುಟುಂಬ ರಾಜಕಾರಣ ಪಕ್ಷ ಅಂತ ಬೈಯ್ದುದ್ದರು.‌ ಆದ್ರೆ ಈಗ ಅವರ ಜೊತೆ ಎಲೆಕ್ಷನಗಾಗಿ ತಬ್ಬಿಕೊಂಡಿದ್ದಾರೆ. ಆದ್ರೆ ಈಗ ಪ್ರಜ್ವಲ್ ರೇವಣ್ಣ ಪ್ರಕರಣ ಬಂದ ತಕ್ಷಣ ನಮಗೂ ಆ‌ ಕುಟುಂಬಕ್ಕೂ ಸಂಬಂಧವಿಲ್ಲ ಅಂತಾರೆ ಎಂದು ಟೀಕಿಸಿದರು.

ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ

Twitter
Facebook
LinkedIn
WhatsApp
ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ

ಹುಬ್ಬಳ್ಳಿ: `ಸರ್ಕಾರ ಮಹಿಳೆಯರಿಗೆ ಬಸ್ ಉಚಿತ ಮಾಡಿದಕ್ಕೆ ಮಹಿಳೆಯರು ದಾರಿ ತಪ್ಪಿದ್ದಾರೆ ಅಂತ ಅಣ್ಣ ಕುಮಾರಣ್ಣ ಹೇಳುತ್ತಾರೆ. ಆದ್ರೆ ಈಗ ನಿಮ್ಮ ಮಗ ದಾರಿ ತಪ್ಪಿದ್ದಾನಲ್ಲ, ಅವನನ್ನ ಕರೆದುಕೊಂಡ ಬನ್ನಿ’
– ಇದು ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕುರಿತಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಬಹುಭಾಷಾ ನಟ ಪ್ರಕಾಶ್ ರೈ ಅವರು ನೀಡಿರುವ ಟಾಂಗ್.

ಕೆಲ ದಿನಗಳ ಹಿಂದೆ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದರು. ಬಳಿಕ ಕಾಂಗ್ರೆಸ್ ಕಡೆಯಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ವಿಷಾದ ವ್ಯಕ್ತಪಡಿಸಿದ್ದರು. ಈ ವಿಚಾರ ಮತ್ತು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮೀಕರಿಸಿ ಪ್ರಕಾಶ್ ರೈ ಅವರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಸುರಕ್ಷಾ ಸಮಿತಿ ಮತ್ತು ಎದ್ದೇಳು ಕರ್ನಾಟಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇವೇಗೌಡರ ಪಕ್ಷವನ್ನು ಕುಟುಂಬ ರಾಜಕಾರಣ ಪಕ್ಷ ಅಂತ ಬೈಯ್ದುದ್ದರು.‌ ಆದ್ರೆ ಈಗ ಅವರ ಜೊತೆ ಎಲೆಕ್ಷನಗಾಗಿ ತಬ್ಬಿಕೊಂಡಿದ್ದಾರೆ. ಆದ್ರೆ ಈಗ ಪ್ರಜ್ವಲ್ ರೇವಣ್ಣ ಪ್ರಕರಣ ಬಂದ ತಕ್ಷಣ ನಮಗೂ ಆ‌ ಕುಟುಂಬಕ್ಕೂ ಸಂಬಂಧವಿಲ್ಲ ಅಂತಾರೆ ಎಂದು ಟೀಕಿಸಿದರು.

ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲವೇ?

ನಾರಿ ಶಕ್ತಿ, ಬೇಟಿ ಪಡಾವೋ, ಬೇಟಿ ಬಚಾವೋ ಅಂತೀರಿ. ಓಲಂಪಿಕ್ಸ್ ನಲ್ಲಿ ಗೆದ್ದ ಬಂದ ಹೆಣ್ಣು ಮಕ್ಕಳಿಂದ ಸೆಲ್ಪಿ ತಗೆದುಕೊಳ್ಳಲು‌ ಮೋದಿಗೆ ಗೊತ್ತು. ಆದ್ರೆ ಅದೇ ಹೆಣ್ಣು ಮಕ್ಕಳು ಎಂಪಿ ಲೈಂಗಿಕ ದೌರ್ಜನ್ಯ ‌ಮಾಡುತ್ತಿದ್ದಾನೆ ಅಂತ ಪ್ರತಿಭಟನೆ ‌ಮಾಡಿದ್ರೆ ಅವರ ಮೇಲೆ ಪೊಲೀಸ್ ಕೇಸ್ ಹಾಕುತ್ತೀರಾ ನಾಚಿಕೆ ಆಗಲ್ವಾ ನಿಮಗೆ ಎಂದು ವಾಗ್ದಾಳಿ ನಡೆಸಿದರು.

ಇತ್ತೀಚಿಗೆ ದೇಶ ಮಾರುವವರು ಜಾಸ್ತಿಯಾಗಿದ್ದಾರೆ. ಮಹಾಪ್ರಭುಗಳು ಆಳ್ವಿಕೆ ನಡೆಸುತ್ತಿದ್ದಾರೆ. ಅವರು ಒಂದೇ ಭಾಷೆಯಲ್ಲಿ ಮಾತನಾಡುತ್ತಾರೆ. ನಾನು ಏಳು ಭಾಷೆಯಲ್ಲಿ ಮಾತನಾಡುತ್ತೇನೆ. ಮಹಾಪ್ರಭುಗಳು ಎಲ್ಲೆಲ್ಲಿ ಹೋಗ್ತಾರೋ ನಾನು ಹೋಗ್ತೇನೆ. ಮಹಾಪ್ರಭುಗಳು ಬರೀ ಟಾಟಾ ಮಾಡಿಕೊಂಡು ಓಡಾಡುತ್ತಾರೆ. ಹಿಟ್ಲರ್ ಮಾದರಿಯಲ್ಲಿ ಅಡ್ಡಾಡುತ್ತಾರೆ ಎಂದು ನಟ ಪ್ರಕಾಶ ರೈ ಆರೋಪಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ